
ಉಡುಪಿ (ಮಾ.14): ರಾಜ್ಯದಲ್ಲಿ ಸಿಎಎ ಜಾರಿ ತರುವ ಕುರಿತು ಗುರುವಾರ ಕ್ಯಾಬಿನೆಟ್ ನಲ್ಲಿ ಚರ್ಚಿಸಲಾಗುವುದು. ಆ ಕಾಯ್ದೆಯಲ್ಲೇನಿದೆ ಎಂಬುದನ್ನು ಪರಿಶೀಲಿಸಿ ಮುಂದಿನ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬುಧವಾರ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಬಿಜೆಪಿ ಲೋಕಸಭಾ ಚುನಾವಣೆ ಉದ್ದೇಶದಿಂದ ಈಗ ಸಿಎಎ ಜಾರಿಗೆ ತಂದಿದೆ. ಇದಕ್ಕೂ ಮೊದಲು ಯಾಕೆ ಜಾರಿಗೆ ತಂದಿಲ್ಲ. ಇಷ್ಟು ವರ್ಷ ಯಾಕೆ ಸುಮ್ಮನಿತ್ತು? ಈಗ ಸೋಲುವ ಭಯದಿಂದಲೇ ಸಿಎಎ ಜಾರಿಗೆ ತಂದಿದೆ ಎಂದು ಆರೋಪಿಸಿದರು.
ಕಾಂಗ್ರೆಸಿಗೆ ಹೆಗ್ಡೆ ಶಕ್ತಿ: ಜಯಪ್ರಕಾಶ್ ಹೆಗ್ಡೆ ಕಾಂಗ್ರೆಸ್‌ಗೆ ಬಂದಿರುವುದರಿಂದ ಶಕ್ತಿ ಬಂದಂತಾಗಿದೆ. ಅವರು ಹಿಂದೆ ಕಾಂಗ್ರೆಸ್ ನಲ್ಲಿಯೇ ಇದ್ದವರು, ಈಗ ಪಕ್ಷಕ್ಕೆ ಮರಳಿ ಬಂದಿದ್ದಾರೆ. ಹೆಗ್ಡೆ ಅವರನ್ನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಅಭ್ಯರ್ಥಿಯನ್ನಾಗಿ ಮಾಡುವ ವಿಚಾರ ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟದ್ದು ಎಂದು ಪ್ರತಿಕ್ರಿಯಿಸಿದರು.
ಏರ್ಪೋರ್ಟಲ್ಲಿ ಇಂದಿರಾ ಕ್ಯಾಂಟೀನ್ ಶುರು: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಒಟ್ಟು 600 ಇಂದಿರಾ ಕ್ಯಾಂಟೀನ್‍ಗಳು ತಲೆ ಎತ್ತಲಿವೆ. 188 ಹೊಸ ಇಂದಿರಾ ಕ್ಯಾಂಟೀನ್ ಗಳನ್ನು ಪ್ರಾರಂಭಿಸುತ್ತಿದ್ದೇವೆ. ಈ ಪೈಕಿ ಈಗಾಗಲೇ 40 ಸಿದ್ಧವಾಗಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನೂತನವಾಗಿ ನಿರ್ಮಿಸಿರುವ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿ ಅವರು ಮಾತನಾಡಿದರು. ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಕುಡಿಯುವ ನೀರಿಗೆ ತೊಂದರೆಯಾಗಬಾರದೆಂದು ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಲೋಕಸಭೆ ಚುನಾವಣೆ ಎಂಪಿ ಅಭ್ಯರ್ಥಿ ನಾನೇ ಎಂದು ಬೆಂಬಲಿಸಿ: ಎಚ್.ಡಿ.ಕುಮಾರಸ್ವಾಮಿ
ಬಡವರಿಗೆ ಕಡಿಮೆ ದರಗಳಲ್ಲಿ ಊಟ ತಿಂಡಿ ದೊರೆಯಬೇಕೆನ್ನುವುದು ಇದರ ಉದ್ದೇಶ. ಬೆಳಗಿನ ಉಪಾಹಾರ 5 ರುಪಾಯಿ. ಮಧ್ಯಾಹ್ನ ಮತ್ತು ರಾತ್ರಿ ಊಟ 10 ರುಪಾಯಿಗಳಿಗೆ ದೊರೆಯಲಿದೆ. ಆಹಾರದ ಮೆನು ಕೂಡ ಬದಲಾಯಿಸಲಾಗಿದೆ. ಕುಳಿತು ತಿನ್ನಲು ಅನುಕೂಲವಾಗಲೆಂದು ಡೈನಿಂಗ್ ಹಾಲ್ ವ್ಯವಸ್ಥೆ ಕಲ್ಪಿಸಲಾಗಿದೆ. ಬೆಂಗಳೂರಿನ ಪ್ರತಿ ವಾರ್ಡ್‍ನಲ್ಲಿ ಹಾಗೂ ರಾಜ್ಯದ ಇತರೆಡೆಗಳಲ್ಲಿ ಕೂಡ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದೆ. ಹಿಂದಿನ ಸರ್ಕಾರ ಊಟ ಪೂರೈಸದೇ, ಕೆಲವನ್ನು ಮುಚ್ಚಿಯೂ ಬಿಟ್ಟಿತ್ತು. ಬಡವರು ಊಟ ಮಾಡಬೇಕೆಂಬ ಕಾರಣಕ್ಕೆ ನಾವು ಪುನಃ ಪ್ರಾರಂಭಿಸಿದ್ದೇವೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.