ಸಿಪಿವೈ ಪುತ್ರಿ ಕಾಂಗ್ರೆಸ್‌ ಸೇರ್ಪಡೆ ಬಗ್ಗೆ ಸ್ಥಳೀಯ ನಾಯಕರ ಜತೆ ಚರ್ಚೆ: ಡಿ.ಕೆ.ಶಿವಕುಮಾರ್‌

By Govindaraj SFirst Published Apr 1, 2024, 5:49 AM IST
Highlights

ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವುದಾಗಿ ಬಂದಿದ್ದು ಸತ್ಯ. ರಾಜಕೀಯಕ್ಕಾಗಿ ತಂದೆ ಹಾಗೂ ಮಗಳನ್ನು ದೂರ ಮಾಡಿದ ಅಪವಾದ ನಮಗೆ ಬೇಡ. ಹೀಗಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. 
 

ಬೆಂಗಳೂರು (ಏ.01): ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗುವುದಾಗಿ ಬಂದಿದ್ದು ಸತ್ಯ. ರಾಜಕೀಯಕ್ಕಾಗಿ ತಂದೆ ಹಾಗೂ ಮಗಳನ್ನು ದೂರ ಮಾಡಿದ ಅಪವಾದ ನಮಗೆ ಬೇಡ. ಹೀಗಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ. ಇದೇ ವೇಳೆ, ಕಾಂಗ್ರೆಸ್ ಪಕ್ಷದಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನ ಮಾಡಿದರೆ ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. 

ಹೀಗಾಗಿ ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದೂ ತಿಳಿಸಿದರು. ಅವರನ್ನು ಪಕ್ಷಕ್ಕೆ ಸೇರಿಸಿಕೊಂಡರೆ ರಾಜಕೀಯಕ್ಕೆ ಅಪ್ಪ-ಮಗಳನ್ನು ದೂರ ಮಾಡಿದರು ಎಂದು ಜನ ಪ್ರಶ್ನೆ ಮಾಡಬಹುದು. ಆಕೆ ವಿವಾಹವಾಗಿ ಬೇರೆ ಕುಟುಂಬಕ್ಕೆ ಸೇರಿದ್ದರೆ, ನಾವು ಇಷ್ಟು ಆಲೋಚನೆ ಮಾಡುತ್ತಿರಲಿಲ್ಲ. ಹೀಗಾಗಿ ನಾನು ನನ್ನ ಸಹೋದರ ಈ ವಿಚಾರವಾಗಿ ಬಹಳ ತಾಳ್ಮೆಯಿಂದ ಆಲೋಚನೆ ಮಾಡುತ್ತಿದ್ದೇವೆ ಎಂದರು.

ಡಿ.ಕೆ.ಶಿವಕುಮಾರ್‌ಗೆ ಮತ್ತೆ ಆದಾಯ ತೆರಿಗೆ ಇಲಾಖೆಯಿಂದ ನೋಟಿಸ್‌!

ಸ್ಥಳೀಯ ನಾಯಕರೊಂದಿಗೆ ಚರ್ಚಿಸುತ್ತೇವೆ: ಅವರೇ ಪಕ್ಷ ಸೇರಲು ಸಿದ್ಧರಿದ್ದಾರಲ್ಲ ಎಂಬ ಪ್ರಶ್ನೆಗೆ, ನಿಶಾ ಅವರು ಮಾಧ್ಯಮಗಳಿಗೆ ಕೊಟ್ಟ ಹೇಳಿಕೆ ಗಮನಿಸಿದೆ. ಆಕೆ ದೊಡ್ಡ ಧೈರ್ಯ ಮಾಡಿರುವಂತೆ ಕಾಣುತ್ತಿದೆ. ಕಾಂಗ್ರೆಸ್ ಪಕ್ಷದಲ್ಲೇ ಕೆಲಸ ಮಾಡುತ್ತೇನೆ ಎಂದು ಆಕೆ ತೀರ್ಮಾನ ಮಾಡಿದರೆ, ಆಕೆಯನ್ನು ಹೊರದಬ್ಬಲು ಆಗುವುದಿಲ್ಲ. ಹೀಗಾಗಿ ಸ್ಥಳೀಯ ನಾಯಕರ ಜೊತೆ ಚರ್ಚೆ ಮಾಡುತ್ತೇನೆ ಎಂದರು.

ಎಚ್ಡಿಕೆ ಪಕ್ಕದ ಕ್ಷೇತ್ರಕ್ಕೆ ಹೋಗ್ತಿದ್ದಾರೆ: ನೀವು ಯಾರಿಗೆ ಅಧಿಕಾರ ಕೊಟ್ಟಿದ್ದೀರೊ ಅವರು ನಿಮ್ಮನ್ನು ನಂಬದೇ ಪಕ್ಕದ ಕ್ಷೇತ್ರಕ್ಕೆ ಹೋಗುತ್ತಿದ್ದಾರೆ. ನಿಮ್ಮ ಪರ ಕೆಲಸ ಮಾಡಲು ನಾನು ಸಿದ್ಧನಿದ್ದೇನೆ. ಅವರಿಗೆ ಟಾಟಾ ಬೈ ಬೈ ಹೇಳಿ ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ದಳದ ಅಭ್ಯರ್ಥಿಯನ್ನು ಬಿಜೆಪಿ ಚಿಹ್ನೆಯಲ್ಲಿ ನಿಲ್ಲಿಸಿದ್ದಾರೆ. ದಳ ಈಗ ಎಲ್ಲಿದೆ ಕುಮಾರಣ್ಣ. ಇದೇ ಜಿಲ್ಲೆಯಿಂದ 2 ಬಾರಿ ಮುಖ್ಯಮಂತ್ರಿಯಾಗಿ ಈಗ ಈ ಜಿಲ್ಲೆ ಬಿಟ್ಟು ಮಂಡ್ಯಕ್ಕೆ ಹೋಗುತ್ತಿದ್ದಾರೆ. 

ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ಮೇಲೆ ಆ ಪಕ್ಷದ ನಾಯಕರಿಗೇ ನಂಬಿಕೆ ಇಲ್ಲ. ಈ ಜಿಲ್ಲೆಯ ಜನ ದೇವೇಗೌಡರನ್ನು ಮುಖ್ಯಮಂತ್ರಿ ಮಾಡಿದರು. ಕಾಂಗ್ರೆಸ್ ಪಕ್ಷ ದೇವೇಗೌಡರನ್ನು ಪ್ರಧಾನಮಂತ್ರಿಯನ್ನಾಗಿ ಮಾಡಿತು. ನೀವೆಲ್ಲರೂ ಸೇರಿ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡಿದಿರಿ. ನಂತರ ನಾವು ಅವರಿಗೆ ಬೆಂಬಲ ನೀಡಿ ಒಂದು ಬಾರಿ ಮುಖ್ಯಮಂತ್ರಿ ಮಾಡಿದೆವು. ಆದರೂ ಅವರ ಕುಟುಂಬದ ಸದಸ್ಯರನ್ನು ಬಿಜೆಪಿ ಪಕ್ಷದಿಂದ ಕಣಕ್ಕಿಳಿಸುತ್ತಿದ್ದಾರೆ. 

ಸೋಲಿನ ಭೀತಿಯಿಂದ ದೇವೇಗೌಡರಿಂದ ಪಕ್ಷಾತೀತ ಹೋರಾಟಕ್ಕೆ ಕರೆ: ಡಿ.ಕೆ.ಶಿವಕುಮಾರ್

ಇದರಿಂದಾಗಿ ನಮಗೆ ಯಾವುದೇ ಬೇಸರವಿಲ್ಲ. ಈ ಹೋರಾಟ ನಮಗೆ ಹೊಸತಲ್ಲ. ಅಂದೂ ಹೋರಾಟ ಮಾಡಿದ್ದೆವು, ಇಂದೂ ಹೋರಾಡುತ್ತಿದ್ದೇವೆ ಎಂದರು. ನಾವು ಮೇಕೆದಾಟು ಯೋಜನೆಗಾಗಿ ಪಾದಯಾತ್ರೆ ಮಾಡಿದೆವು. ಆಗ ದೇವೇಗೌಡರು ಬೆಂಬಲ ನೀಡಲಿಲ್ಲ. ಈಗ ತಮ್ಮ ಕುಟುಂಬದವರ ಸೋಲಿನ ಭೀತಿಯಿಂದ ಎಲ್ಲಾ ಪಕ್ಷಗಳು ಒಗ್ಗಟ್ಟಾಗಿ ಹೋರಾಡಬೇಕೆಂದು ಹೇಳುತ್ತಿದ್ದಾರೆ ಎಂದರು.

click me!