ಬೆಂಬಲಿಗರ ದಿಢೀರ್ ಸಭೆ ಕರೆದ ರಮೇಶ್ ಜಾರಕಿಹೊಳಿ: ಗರಿಗೆದರಿದ ರಾಜಕಾರಣ

By Web DeskFirst Published Dec 23, 2018, 4:09 PM IST
Highlights

ಮಾಜಿ ಸಚಿವ ರಮೇಶ್​ ಜಾರಕಿಹೊಳಿ ಮತ್ತು ಮೈತ್ರಿ ಸರ್ಕಾರದ ನಡುವೆ ಇದ್ದ ಮುಸುಕಿನ ಗುದ್ದಾಟ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆ ದಟ್ಟವಾಗಿದೆ. ಸಚಿವ ಸ್ಥಾನ ಕತ್ತಿಕೊಂಡಿದ್ದರಿಂದ ಸಿಡಿದೆದ್ದಿರುವ ರಮೇಶ್ ಜಾರಕಿಹೊಳಿ ಮೈತ್ರಿಗೆ ಸರ್ಕಾರಕ್ಕೆ ಶಾಕ್ ನೀಡಲು ಮುಂದಾಗಿದ್ದಾರೆ.

ಬೆಂಗಳೂರು, [ಡಿ.23]: ರಾಜ್ಯ ಮೈತ್ರಿ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಮಾಡಿದ ಬೆನ್ನಲ್ಲೆ ಕಾಂಗ್ರೆಸ್ ನಲ್ಲಿ ಅಸಮಾಧಾನ ಭುಗಿಲೆದ್ದಿದೆ. 

ಸಚಿವ ಸ್ಥಾನ ಸಿಗದಿದ್ದಕ್ಕೆ ಕಾಂಗ್ರೆಸ್​ ಹಿರಿಯ ನಾಯಕ ರಾಮಲಿಂಗ ರೆಡ್ಡಿ, ಬಿ.ಸಿ ಪಾಟೀಲ್ ಸೇರಿದಂತೆ ಹಲವು ಶಾಸಕರು ಅಸಮಧಾನಗೊಂಡಿದ್ದಾರೆ. 

ಸರ್ಕಾರದ ವಿರುದ್ಧ ಮತ್ತೆ ಸಿಡಿದೆದ್ದ ರಮೇಶ್​ ಜಾರಕಿಹೊಳಿ ರಾಜೀನಾಮೆ?

ಅದರಲ್ಲೂ ರಮೇಶ್ ಜಾರಕಿಹೊಳಿ ಸ್ಥಾನವನ್ನು ಕಿತ್ತುಕೊಂಡಿರುವುದಕ್ಕೆ ಅವರು ಸಿಡಿದೆದಿದ್ದು, ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟು ಸರ್ಕಾರದಿಂದ ಹೊರಬರುವ ಬಗ್ಗೆ ಆಲೋಚಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ರಾಜೀನಾಮೆಗೂ ಮುನ್ನ ಬೆಂಬಲಿಗರ ಸಲಹೆ ಮಡೆಯಲು ನಾಳೆ [ಸೋಮವಾರ] ದಿಢೀರ್ ಸಭೆ ಕರೆದಿದ್ದು, ಬೆಂಬಲಿಗ ಶಾಸಕರೊಂದಿಗೆ ಅವರು ಮಾತುಕತೆ ನಡೆಸಲಿದ್ದಾರೆ.

ರಮೇಶ್ ಜಾರಕಿಹೊಳಿ ಕರೆದ ಸಭೆಯಲ್ಲಿ‌ ಕಾಂಗ್ರೆಸ್ ಅತೃಪ್ತ ಶಾಸಕರಾದ ನಾಗೇಂದ್ರ, ಗಣೇಶ್, ಭೀಮಾನಾಯಕ್, ಪ್ರತಾಪ್ ಗೌಡ ಪಾಟೀಲ್,  ಶ್ರೀಮಂತ್ ಪಾಟೀಲ್, ಆರ್ ಶಂಕರ್ ಸೇರಿದಂತೆ ಅನೇಕ ಬೆಂಬಲಿಗರು ಪಾಲ್ಗೊಳ್ಳುವ ಸಾಧ್ಯತೆಗಳಿವೆ.

ಶಾಸಕರೊಂದಿಗೆ ಚರ್ಚಿಸಿದ ಬಳಿಕ ಮುಂದಿನ ನಡೆ ಬಗ್ಗೆ ರಮೇಶ್ ಜಾರಕಿಹೊಳಿ ಅವರು ನಿರ್ಧಾರಿಸಲಿದ್ದಾರೆ. ಒಟ್ಟಿನಲ್ಲಿ ರಮೇಶ್ ಜಾರಕಿಹೊಳಿ ಮುಂದಿನ ನಡೆ ಏನು ಎನ್ನುವುದು ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.

click me!