
ಕಾರವಾರ (ನ.21) : ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೇನು ನಾಲ್ಕೈದು ತಿಂಗಳು ಬಾಕಿ ಇರುವಾಗಲೇ ಕಾಂಗ್ರೆಸ್‌ನಲ್ಲಿ ಟಿಕೆಟ್ ಫೈಟ್ ಜೋರಾಗಿದೆ. ಈ ನಡುವೆ ಪಕ್ಷದೊಳಗೆ ಬಿರುಕು ಕೂಡಾ ಮೂಡಲಾರಂಭಿಸಿದೆ. ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರು ಈ ಬಾರಿಯೂ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದರೆ, ಪಕ್ಷದ ಕೆಲವು ಮುಖಂಡರೇ ಇದೀಗ ಅವರ ವಿರುದ್ಧ ನಿಂತಿರುವುದರಿಂದ ಪಕ್ಷಕ್ಕೆ ಕೊಂಚ ಬಿಸಿ ತಾಕಿದೆ.
ಈಗಾಗಲೇ ಕಾಂಗ್ರೆಸ್ ಅಭ್ಯರ್ಥಿ ಆಗುವವರು 2 ಲಕ್ಷ ರೂ. ಡಿಡಿ ಮೂಲಕ ಅರ್ಜಿ ಸಲ್ಲಿಕೆ ಮಾಡುವಂತೆ ಹೇಳಲಾಗಿರುವುದರಿಂದ ಉತ್ತರಕನ್ನಡ ಜಿಲ್ಲೆಯ ಆರು ವಿಧಾನಸಭಾ ಕ್ಷೇತ್ರದಲ್ಲಿ ಈವರೆಗೆ ಒಟ್ಟು 26 ಮಂದಿ ಆಕಾಂಕ್ಷಿಗಳು ಅರ್ಜಿ ಸಲ್ಲಿದ್ದಾರೆ. ಆದ್ರೆ, ಕುಮಟಾ ವಿಧಾನಸಭಾ ಕ್ಷೇತ್ರ ಒಂದರಲ್ಲೇ ಕಾಂಗ್ರೆಸ್ ಮಾಜಿ ಶಾಸಕಿ ಶಾರದಾ ಶೆಟ್ಟಿ ಸೇರಿ 14 ಮಂದಿ ಟಿಕೆಟ್ ಆಕಾಂಕ್ಷಿಗಳು ಡಿಡಿ ಮೂಲಕ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕುಮಟಾ ವಿಧಾನಸಭಾ ಕ್ಷೇತ್ರದಲ್ಲಿಯೇ ಅತೀ ಹೆಚ್ಚು ಆಕಾಂಕ್ಷಿಗಳು ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದು, ಟಿಕೆಟ್ ಫೈಟ್ ಜೋರಾಗಿದೆ.
ಬ್ಯಾನರ್ ನಲ್ಲಿ ಶಾಸಕರ ಫೋಟೊ ಹಾಕದ ಜಗಳ ಕೊಲೆಯಲ್ಲಿ ಅಂತ್ಯ
ಅದೇ ರೀತಿ ಅರ್ಜಿ ಅಲ್ಲಿಸಿರುವ 14 ಆಕಾಂಕ್ಷಿಗಳ ಪೈಕಿ 13 ಮಂದಿ ಆಕಾಂಕ್ಷಿಗಳು ಕಾಂಗ್ರೆಸ್ ನ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರನ್ನು ಹೊರತುಪಡಿಸಿ ಉಳಿದ ಯಾರಿಗೆ ಪಕ್ಷ ಟಿಕೆಟ್ ನೀಡಿದ್ರೂ ತಾವೆಲ್ಲಾ ಒಟ್ಟಾಗಿ ಸೇರಿ ಕೆಲಸ ಮಾಡುವುದಾಗಿ ಗೌಪ್ಯ ಸ್ಥಳಗಳಲ್ಲಿ ಸಭೆಗಳ ಮೇಲೆ ಸಭೆ ನಡೆಸುತ್ತಿದ್ದಾರೆಂದು ಪಕ್ಷದಲ್ಲಿ ಚರ್ಚೆಗಳಿಗೆ ಕಾರಣವಾಗಿದೆ. ಇನ್ನು ಇದೇ ತಿಂಗಳ 24ರಂದು ಕುಮಟಾದ ಮಹಾತ್ಮ ಗಾಂಧಿ ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ ನಡೆಯಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹಾಗೂ ಸಿದ್ಧರಾಮಯ್ಯ ಸೇರಿದಂತೆ ಕಾಂಗ್ರೆಸ್ ನ ಹಲವು ನಾಯಕರು ಈ ಸಮಾವೇಶಕ್ಕೆ ಆಗಮಿಸಲಿದ್ದಾರೆಂದು ಹೇಳಲಾಗಿದೆ.
ಈ ವೇಳೆ ಕುಮಟಾದ 13 ಮಂದಿ ಟಿಕೆಟ್ ಆಕಾಂಕ್ಷಿಗಳು ತಮ್ಮ ನಾಯಕರ ಎದುರಲ್ಲೇ ಮಾಜಿ ಶಾಸಕಿ ಶಾರದಾ ಶೆಟ್ಟಿ ಅವರ ವಿರುದ್ಧ ಅಸಮಾಧಾನ ವ್ಯಕ್ತಪಡಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಕಾರ್ಯಕರ್ತರೇ ಹೇಳುತ್ತಿದ್ದಾರೆ. ಕೋಲಾರದಲ್ಲಿ ಜೆಡಿಎಸ್ ಪಂಚರತ್ನ ರಥಯಾತ್ರೆ: ಬಿಜೆಪಿ, ಕಾಂಗ್ರೆಸ್ ವಿರುದ್ಧ ಹೆಚ್.ಡಿ.ಕೆ ಗುಡುಗು
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.