ಕೇಂದ್ರ ಸರ್ಕಾರ ರೈತರಿಗೆ ಕೊಟ್ಟ ಹಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಬಳಕೆ!

Published : Aug 08, 2023, 01:59 PM IST
ಕೇಂದ್ರ ಸರ್ಕಾರ ರೈತರಿಗೆ ಕೊಟ್ಟ ಹಣ ಕಾಂಗ್ರೆಸ್ ಗ್ಯಾರಂಟಿ ಯೋಜನೆಗೆ ಬಳಕೆ!

ಸಾರಾಂಶ

ಬಿಜೆಪಿ ರೈತರಿಗೆ ಕೊಟ್ಟಿದ್ದ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್‌ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಶಿವಮೊಗ್ಗ (ಆ.8) :  ಬಿಜೆಪಿ ರೈತರಿಗೆ ಕೊಟ್ಟಿದ್ದ ಹಣವನ್ನು ಗ್ಯಾರೆಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿರುವ ಕಾಂಗ್ರೆಸ್‌ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ರೈತಮೋರ್ಚಾ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪ್ರತಿಭಟನೆಯಲ್ಲಿ ಮಾಜಿ ಸಚಿವ ಕೆ.ಎಸ್‌. ಈಶ್ವರಪ್ಪ ಮಾತನಾಡಿ, ರೈತದ್ವೇಷಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸರ್ಕಾರ ಕಿಸಾನ್‌ ಸಮ್ಮಾನ್‌ ಯೋಜನೆ ಮೂಲಕ ನೀಡುತ್ತಿದ್ದ 6 ಸಾವಿರಕ್ಕೆ ರಾಜ್ಯ ಬಿಜೆಪಿ ಸರ್ಕಾರ ಹಿಂದೆ ನಾಲ್ಕು ಸಾವಿರ ರು. ನೀಡುತ್ತಿತ್ತು. ಅದನ್ನು ನೀಡದೆ ರೈತರಿಗೆ ಚೌರ ಮಾಡಿದ್ದಾರೆ. ತಕ್ಷಣ ಹಣ ವಾಪಾಸ್‌ ನೀಡಬೇಕು ಎಂದು ಒತ್ತಾಯಿಸಿದರು.

ಕಿಸಾನ್‌ ಸಮ್ಮಾನ್‌ ನಿಧಿ ಸ್ಥಗಿತ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಖೂಬಾ ಕಿಡಿ

ಮೂರು ತಿಂಗಳಲ್ಲಿ 42 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು, ಜಿಲ್ಲಾ ಉಸ್ತುವಾರಿ ಸಚಿವರು ರೈತರ ಕುಟುಂಬ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ. ಪರಿಹಾರ ನೀಡಿಲ್ಲ. ರೈತರ ಮಕ್ಕಳಿಗೆ ಬಿಜೆಪಿ ಸರ್ಕಾರ ಜಾರಿಗೆ ತಂದ ರೈತ ವಿದ್ಯಾನಿಧಿ ಯೋಜನೆ ಕೂಡ ರದ್ದುಗೊಳಿಸಿದ್ದಾರೆ. ಗೋವು ನಮ್ಮ ತಾಯಿ ಸಮಾನ. ಗೋ ಸಂತತಿ ಉಳಿಸಲು ಜಿಲ್ಲೆಗೊಂದು ಗೋಶಾಲೆಯನ್ನು ಬಿಜೆಪಿ ನೀಡಿತ್ತು, ಅದನ್ನು ರದ್ದುಮಾಡಿದ್ದಾರೆ. ಕೂಡಲೇ ಪುನರಾರಂಭ ಮಾಡಬೇಕು ಎಂದು ಆಗ್ರಹಿಸಿದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ರೈತರಿಗಾಗಿ ಮೀಸಲಿಟ್ಟ10 ಸಾವಿರ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗಾಗಿ ವರ್ಗಾವಣೆ ಮಾಡಿದ್ದಾರೆ. ಕೃಷ್ಣಾ ಯೋಜನೆಗೆ ಪ್ರತಿವರ್ಷ . 10ಸಾವಿರ ನೀಡುತ್ತೇವೆ ಎಂದು ಹೇಳಿದ ಮುಖ್ಯಮಂತ್ರಿಗಳು ಒಟ್ಟಾರೆ ನೀರಾವರಿ ಯೋಜನೆಗೆ ಅಷ್ಟುಹಣ ನೀಡಿಲ್ಲ. ಎಪಿಎಂಸಿ ಕಾಯಿದೆ ತೆಗೆದು ರೈತನಿಗೆ ತಾನು ಬೆಳೆದ ಬೆಳೆಗೆ ತಾನೇ ಮಾರುವ ಹಕ್ಕನ್ನು ಕಸಿದುಕೊಂಡಿದ್ದಾರೆ ಎಂದು ದೂರಿದರು.

ರೈತರ ಯಂತ್ರೋಪಕರಣ ಸಹಾಯಧನವನ್ನು ನಿಲ್ಲಿಸಿದ್ದಾರೆ. ಸಾವಿರಾರು ಎಕರೆ ಅಡಕೆ ತೋಟಕ್ಕೆ ಎಲೆಚುಕ್ಕಿ ರೋಗ ಬಂದರು ರೈತರು ಆತ್ಮಹತ್ಯೆ ದಾರಿ ಹಿಡಿಯುತ್ತಿದ್ದರೂ ತೀರ್ಥಹಳ್ಳಿಯ ಅಡಕೆ ಸಂಶೋಧನಾ ಕೇಂದ್ರಕ್ಕೆ ಬಿಜೆಪಿ ಸರ್ಕಾರ ನೀಡಿದ .10 ಕೋಟಿ ಗಳನ್ನು ತಡೆಹಿಡಿದಿದ್ದಾರೆ. ಉಚಿತ ಬಸ್‌ ಗ್ಯಾರಂಟಿ ನೀಡಿದ ಸರ್ಕಾರ ನಿಗಮಕ್ಕೆ 750 ಕೋಟಿಯಲ್ಲಿ ಕೇವಲ .120 ಕೋಟಿ ನೀಡಿದೆ. ವಿವಿಧ ಎಸ್ಕಾಂಗಳಿಂದ ಕೆಪಿಸಿಸಿಗೆ ಸಾವಿರಾರು ಕೋಟಿ ಬಾಕಿ ಇದೆ ಎಂದು ಟೀಕಿಸಿದರು.

ಭ್ರಷ್ಟಸರ್ಕಾರ ಇದಾಗಿದ್ದು, ಎರಡು ತಿಂಗಳಿಂದ ಅನೇಕ ಇಲಾಖೆಯ ಸರ್ಕಾರಿ ನೌಕರರಿಗೆ ಸಂಬಳ ಇಲ್ಲ. ಡಯಾಲಿಸಿಸ್‌ ಸೆಂಟರ್‌ಗಳನ್ನು ಮುಚ್ಚಲಾಗುತ್ತಿದೆ. 108 ಅಂಬ್ಯುಲೆನ್ಸ್‌ ನಿಲ್ಲುವ ಹಂತಕ್ಕೆ ತಲುಪಿದೆ. ಟ್ರಾನ್ಸ್‌ಫರ್‌ ಏಜೆಂಟರುಗಳ ದಂಡೇ ಸರ್ಕಾರದ ಸುತ್ತಲಿದ್ದು, ಹಸಿದ ಹೆಬ್ಬುಲಿಗಳಂತಾಗಿದ್ದಾರೆ. ಜನರನ್ನೇ ತಿಂದುಬಿಡುವ ಹಂತಕ್ಕೆ ಸರ್ಕಾರ ತಲುಪದ್ದು, ಜನರಿಗೆ ಎಲ್ಲವೂ ತಿಳಿಯುತ್ತಿದೆ. ಸರ್ಕಾರ ಇಳಿಯುವವರೆಗೆ ನಮ್ಮ ಹೋರಾಟ ಮುಂದುವರಿಯುತ್ತದೆ ಎಂದರು.

ಜಿಲ್ಲಾಧ್ಯಕ್ಷ ಟಿ.ಡಿ. ಮೇಘರಾಜ್‌ ಮಾತನಾಡಿ, ನಂದಿನಿ ದರ ಏಕಾಏಕಿ ಹೆಚ್ಚಳ ಮಾಡಿದ್ದು, ಆ ದರವನ್ನು ಉತ್ಪಾದಕರಿಗೆ ತಕ್ಷಣ ನೀಡುತ್ತೇವೆ ಎಂದು ಹೇಳಿತ್ತು. ಆದರೆ, ಅವರಿಗೂ ನೀಡಿಲ್ಲ. ಗ್ರಾಹಕರಿಗೂ ಮೋಸ ಮಾಡಿದೆ. ಸ್ವಾತಂತ್ರ್ಯ ಹೋರಾಟಗಾರರ ಪಠ್ಯವನ್ನು ಕಿತ್ತುಬಿಸಾಕುತ್ತೇವೆ ಎಂದು ಹೇಳಿದ ಸಚಿವರು ಈ ಬಗ್ಗೆ ಸುಮ್ಮನಿದ್ದಾರೆ. ಶ್ರಮಶಕ್ತಿ ಯೋಜನೆ ಜೀವನ್‌ ಜ್ಯೋತಿ ವಿಮಾ ಯೋಜನೆ, ರೈತ ಉತ್ಪಾದಕ ಸಂಸ್ಥೆ ರೈತ ಸಂಪದ ಯೋಜನೆ, ಸಹಸ್ರ ಸರೋವರ ಮತ್ತುಸಹ್ಯಾದ್ರಿ ಸಿರಿ ಯೋಜನೆ, ಮೀನುಗಾರರಿಗೆ ವಸತಿ ಸೌಲಭ್ಯ, ಕಲ್ಯಾಣ ಕರ್ನಾಟಕದಲ್ಲಿ ಕೃಷಿ ಕ್ಲಸ್ಟರ್‌ ನಿರ್ಮಿಸುವ ಯೋಜನೆ, ಕನಿಷ್ಠ ಬೆಂಬಲ ಬೆಲೆ ನೀಡುವ ಬಿಜೆಪಿ ಸರ್ಕಾರದ ರೈತಪರ ಯೋಜನೆಗಳನ್ನು ಈ ಸರ್ಕಾರ ಕೈಬಿಟ್ಟಿದ್ದು,ರೈತಾಪಿ ವರ್ಗವನ್ನು ನಿರ್ಲಕ್ಷಿಸಿದೆ. ರೈತವಿರೋಧಿ ನೀತಿಗಳನ್ನು ಇನ್ನುಮುಂದಾದರೂ ಸರಿಪಡಿಸಿಕೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಕೈಗೊಳ್ಳುವ ಎಚ್ಚರಿಕೆ ನೀಡಿದರು.

ಮುಖ್ಯಮಂತ್ರಿಗಳೇ ಪರಿಶೀಲನೆ ಪದ ಕೈಬಿಟ್ಟು, ರೈತ ವಿರೋಧಿ ಕಾಯ್ದೆಗಳನ್ನು ರದ್ದುಗೊಳಿಸಿ: ಕೋಡಿಹಳ್ಳಿ

ಈ ಸಂದರ್ಭದಲ್ಲಿ ಬಿಜೆಪಿಯ ರೈತಮೋರ್ಚಾದ ಜಿಲ್ಲಾಧ್ಯಕ್ಷ ಸಾಲೆಕೊಪ್ಪ ರಾಮಚಂದ್ರ, ಪ್ರಧಾನ ಕಾರ್ಯದರ್ಶಿ ಕೃಷ್ಣೋಜಿರಾವ್‌, ವಿನ್ಸೆಂಟ್‌ ರೋಡ್ರಿಗಸ್‌, ಜಿಲ್ಲಾ ಪ್ರಭಾರಿ ಬಿ.ಇ. ವಿರೂಪಾಕ್ಷಪ್ಪ, ವಿಭಾಗ ಪ್ರಭಾರಿ ಗಿರೀಶ್‌ ಪಟೇಲ್‌, ಶಾಸಕ ಡಿ.ಎಸ್‌ ಅರುಣ್‌, ಪ್ರಮುಖರಾದ ಶಿವರಾಜ್‌, ಎಸ್‌. ಎಸ್‌. ಜ್ಯೋತಿಪ್ರಕಾಶ್‌, ವೀರಭದ್ರಪ್ಪ ಪೂಜಾರಿ, ದಿನೇಶ್‌ ಬುಳ್ಳಾಪುರ, ತಮ್ಮಡಿಹಳ್ಳಿ ನಾಗರಾಜ್‌ ಸೇರಿದಂತೆ ಹಲವರಿದ್ದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Congress appeasement politics: ಕರ್ನಾಟಕ ರಾಜ್ಯದಲ್ಲಿ ಇರೋದುಔರಂಗಜೇಬ್‌ ಸರ್ಕಾರ: ಬಿಜೆಪಿ
ಸ್ನೇಹಿತ-ಸಿಎಂ ವಿಜಯ್‌ಗೇ ಶಾಕ್! 'ದಳಪತಿ' ಬದ್ಧ ವೈರಿಯ ಮಗನ ಜೊತೆ ಕೈಜೋಡಿಸಿದ ತ್ರಿಶಾ ಕೃಷ್ಣನ್