Karnataka Budget 2023: ಮಾತು ತಪ್ಪಿದ ಮುಖ್ಯಮಂತ್ರಿ ಸಿದ್ದರಾಮಯ್ಯ: ಅಬ್ರಾರ್‌ ಅಹಮದ್‌

By Kannadaprabha News  |  First Published Jul 9, 2023, 10:40 PM IST

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಡೆದ ಒಟ್ಟು ಮತದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಿದ ಪಾಲು ಶೇ.60 ರಷ್ಟು. ಆದರೆ, ಬಜೆಟ್‌ನಲ್ಲಿ ಈ ಎರಡು ಸಮುದಾಯಗಳಿಗೂ ಸಿದ್ದರಾಮಯ್ಯ ಮೂಗಿಗೆ ತುಪ್ಪ ಸವರಿದ್ದಾರೆ: ಅಬ್ರಾರ್‌ ಅಹಮದ್‌ 


ಚಾಮರಾಜನಗರ(ಜು.09): ಕಳೆದ ವಿಧಾನಸಭಾ ಚುನಾವಣೆಯ ಪ್ರಚಾರ ಭಾಷಣಗಳಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ಬಜೆಟ್‌ನಲ್ಲಿ ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದ್ದರು. 2023ರ ಬಜೆಟ್‌ನಲ್ಲಿ ಕೇವಲ 2100 ಕೋಟಿ ರು. ನೀಡಿ ರಾಜ್ಯದ ಒಂದು ಕೋಟಿಯಷ್ಟಿರುವ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿದ್ದಾರೆ ಎಂದು ಸೋಶಿಯಲ್‌ ಡೆಮಾಕ್ರಟಿಕ್‌ ಪಾರ್ಟಿ ಆಫ್‌ ಇಂಡಿಯಾದ ಜಿಲ್ಲಾಧ್ಯಕ್ಷ ಅಬ್ರಾರ್‌ ಅಹಮದ್‌ ಅಭಿಪ್ರಾಯಪಟ್ಟಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಡೆದ ಒಟ್ಟು ಮತದಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತರಿಗೆ ನೀಡಿದ ಪಾಲು ಶೇ.60 ರಷ್ಟು. ಆದರೆ, ಬಜೆಟ್‌ನಲ್ಲಿ ಈ ಎರಡು ಸಮುದಾಯಗಳಿಗೂ ಸಿದ್ದರಾಮಯ್ಯ ಮೂಗಿಗೆ ತುಪ್ಪ ಸವರಿದ್ದಾರೆಂದು ಎಸ್‌ಡಿಪಿಐ ಜಿಲ್ಲಾಧ್ಯಕ್ಷ ಅಬ್ರಾರ್‌ ಅಹಮದ್‌ ಖಂಡನೆ ವ್ಯಕ್ತಪಡಿಸಿದ್ದಾರೆ.

Tap to resize

Latest Videos

undefined

ಯೋಜನೆ ಕಡಿತಗೊಳಿಸದೆ ಹೊಸ ಯೋಜನೆಗಳು ಜಾರಿ: ಸಚಿವ ಸತೀಶ್‌ ಜಾರಕಿಹೊಳಿ

ಕಾಂಗ್ರೆಸ್‌ ಪಕ್ಷದ ಅಭೂತಪೂರ್ವ ಗೆಲುವಿನಲ್ಲಿ ದಲಿತ ಮತ್ತು ಮುಸ್ಲಿಂ ಸಮುದಾಯದ ಪಾತ್ರ ದೊಡ್ಡದು. ಮುಸಲ್ಮಾನರ ಶೇ.90 ಹಾಗೂ ದಲಿತ ಸಮುದಾಯದ ಶೇ 50ಕ್ಕೂ ಹೆಚ್ಚು ಮತಗಳು ಕಾಂಗ್ರೆಸ್‌ ಮಡಿಲು ಸೇರಿದವು. ಇಷ್ಟುದೊಡ್ಡ ಮಟ್ಟದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿದ ಈ ಎರಡು ಸಮುದಾಯಗಳಿಗೆ ಸಿದ್ದರಾಮಯ್ಯನವರು ಮಂಡಿಸಿದ ಬಜೆಟ್‌ನಲ್ಲಿ ಹೊಸತೇನನ್ನು ನೀಡಿಲ್ಲ.

ಬಜೆಟ್‌ ಬಗ್ಗೆ ಬಿಜೆಪಿಗೆ ಮಾತನಾಡುವ ನೈತಿಕ ಹಕ್ಕಿಲ್ಲ: ಶಾಸಕ ಲಕ್ಷ್ಮಣ ಸವದಿ

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಬಿಜೆಪಿ ಸರ್ಕಾರ ಸ್ಥಗಿತಗೊಳಿಸಿದ್ದ ವಿದ್ಯಾರ್ಥಿವೇತನ ಮರು ಚಾಲನೆ ನೀಡಿದ್ದು, ಅಲ್ಪಸಂಖ್ಯಾತರ ವಸತಿ ನಿಲಯಗಳಿಗೆ ಅನುದಾನಗಳನ್ನು ಒದಗಿಸಿದ್ದು ಅಭಿನಂದನಾರ್ಹ. ಇದೇ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ಹೆಚ್ಚು ಹಣ ಒದಗಿಸಿಲ್ಲ. ಒಟ್ಟಾರೆ 2100 ಕೋಟಿ ರು. ಅನುದಾನ ಒದಗಿಸಲಾಗಿದೆ.

ಇದು ಕರ್ನಾಟಕದ ಅಲ್ಪಸಂಖ್ಯಾತರ ಜನಸಂಖ್ಯೆಗೆ ಹೋಲಿಸಿದಾಗ ಬಹಳ ಕಡಿಮೆಯಾಗುತ್ತದೆ. ಅದೇ ರೀತಿ ದಲಿತ ಸಮುದಾಯಕ್ಕೆ ಸ್ವಉದ್ಯೋಗ ಸ್ಥಾಪಿಸಲು ಸಾರಥಿ ಯೋಜನೆ ಹೊರತುಪಡಿಸಿ ವಿಶೇಷವಾದ ಯಾವುದೇ ನೆರವು ನೀಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿರುವ ಅವರು, ದಲಿತ, ಅಲ್ಪಸಂಖ್ಯಾತರಿಗೆ ಚುನಾವಣೆಗೂ ಮುನ್ನ ಭಾರಿ ಆಶ್ವಾಸನೆ ನೀಡಿದ್ದ ಸಿದ್ದರಾಮಯ್ಯಈಗ ಅನುದಾನ ನೀಡದಿರುವುದು ತಪುತ್ರ್ಪ, ಮುಂದಿನ ದಿನಗಳಲ್ಲಿ ಮತ್ತಷ್ಟು ಹೆಚ್ಚಿನ ಅನುದಾನ ನೀಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

click me!