ಕಾಂಗ್ರೆಸ್ ನಾಯಕನಿಗೆ ಬೇಲ್: ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡ್ತಾರಾ ಎಂದ ಶಾಸಕ

Published : Feb 12, 2021, 10:29 PM ISTUpdated : Feb 13, 2021, 09:43 AM IST
ಕಾಂಗ್ರೆಸ್ ನಾಯಕನಿಗೆ ಬೇಲ್: ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡ್ತಾರಾ ಎಂದ ಶಾಸಕ

ಸಾರಾಂಶ

 ಬೆಂಗಳೂರಿನ ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಗೆ ಬೇಲ್ ಸಿಕ್ಕ ವಿಚಾರವಾಗಿ ಸುದ್ದಿಗಾರರೊಂದಿಗೆ ಪ್ರತಿಕ್ರಿಯಿಸಿದ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ

ಬೆಂಗಳೂರು, (ಫೆ.12): ನನ್ನ ಮನೆಯನ್ನೇ ಸುಟ್ಟವರು, ನನ್ನನ್ನು ಸುಡದೆ ಬಿಡುತ್ತಾರಾ? ಮನೆ ಸುಟ್ಟುಕೊಂಡು ನಾವು ಬೀದಿಯಲ್ಲಿದ್ದೇವೆ. ನನಗೆ ಈಗಲೂ ಜೀವ ಬೆದರಿಕೆಯಿದೆ. ಮುಂದೆಯೂ ಇದೆ ಎಂದು ಪುಲಕೇಶಿ ನಗರ ಶಾಸಕ ಅಖಂಡ‌ ಶ್ರೀನಿವಾಸ್ ಮೂರ್ತಿ ತಮ್ಮ ಅಳಲು ತೋಡಿಕೊಂಡಿದ್ದಾರೆ.

"

ಡಿಜೆ ಹಳ್ಳಿ ಗಲಭೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಗೆ ಬೇಲ್ ಸಿಕ್ಕ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ‌ ಹೋರಾಟ ಮುಂದುವರಿಯಲಿದೆ. ಸಂಪತ್ ರಾಜ್ ಮೇಲೆ ಕ್ರಮಕ್ಕೆ ನಾನು ಒತ್ತಡ ತಂದಿದ್ದೇವೆ. ಕೆಪಿಸಿಸಿ ಅಧ್ಯಕ್ಷರಿಗೂ ಮನವಿ ಮಾಡಿದ್ದೇವೆ. ಆದರೂ ಅಧ್ಯಕ್ಷರು ಏನೂ ಕ್ರಮ ತೆಗೆದುಕೊಂಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ನ್ಯಾಯಾಲಯದ ಜಾಮೀನಿನ ಬಗ್ಗೆ ಮಾತನಾಡುವುದಿಲ್ಲ. ಅದನ್ನು ನಾನು ಒಪ್ಪುತ್ತೇನೆ. ಆದರೆ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ನಾನು ದೇವರನ್ನು ನಂಬಿದ್ದೇನೆ. ಆ ದೇವರು ಶಿಕ್ಷೆಯನ್ನ ಕೊಡಬೇಕು ಎಂದು ಹೇಳಿದರು.

ನಾನು‌ ಹೋರಾಟ ಮುಂದುವರಿಸುತ್ತೇನೆ. ಮಾಧ್ಯಮಗಳು ನನ್ನ‌ ಬೆಂಬಲಕ್ಕಿವೆ. ಮಾಧ್ಯಮಗಳು ನಮಗೆ ನ್ಯಾಯ ಕೊಡಿಸುವ ಭರವಸೆಯಿದೆ ಎಂದ ಶಾಸಕ ಅಖಂಡ, ಡಿ.ಕೆ.ಶಿವಕುಮಾರ್ ಯಾಕೆ ಸಂಪತ್ ರಾಜ್ ಪರ ನಿಂತಿದ್ದಾರೋ ಗೊತ್ತಿಲ್ಲ. ಮಾಧ್ಯಮದವರೇ ಅವರನ್ನು ಕೇಳಬೇಕು. ನಾನು‌ ವಲಸೆ ಬಂದಿರಬಹುದು. ಆದರೆ ಅತಿ ಹೆಚ್ಚಿನ ಮತಗಳಿಂದ ಗೆದ್ದವನು. ಈ ಬಗ್ಗೆ ಸೋನಿಯಾ ಗಾಂಧಿಯವರಿಗೆ ಪತ್ರ ಬರೆಯುತ್ತೇವೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ನಾನು ಕೃಷ್ಣತತ್ತ್ವ ನಂಬಿದವನೇ ಹೊರತು, ಕಾಂಗ್ರೆಸ್‌ನ ಕಂಸ ಹಿಂಸೆಯನ್ನಲ್ಲ: ಹೆಚ್.ಡಿ.ಕುಮಾರಸ್ವಾಮಿ!
ಬಿಹಾರದಲ್ಲಿ NDA ಗೆಲುವು ನಿಜ, ಆದ್ರೆ ಸೋತಿದ್ದು ಪ್ರಜಾಪ್ರಭುತ್ವ: ತೇಜಸ್ವಿ ಯಾದವ್