ಡಿ.ಕೆ. ರವಿ ಪತ್ನಿ ಕುಸಮಾ ಆಸ್ತಿ ಮೌಲ್ಯ 2 ಕೋಟಿ: ಒಂದು ಕಿಲೋ ಬಂಗಾರ

By Sathish Kumar KH  |  First Published Apr 17, 2023, 4:49 PM IST

ರಾಜರಾಜೇಶ್ವರಿ ನಗರದಲ್ಲಿ ಸಚಿವ ಮುನಿರತ್ನ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಡಿ.ಕೆ.ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರ ಆಸ್ತಿ ಮೌಲ್ಯ ಬರೋಬ್ಬರು 2 ಕೋಟಿ ರೂ.ಗಿಂತ ಅಧಿಕವಾಗಿದೆ ಎಂದು ತಿಳಿದುಬಂದಿದೆ.


ಬೆಂಗಳೂರು (ಏ.17): ರಾಜರಾಜೇಶ್ವರಿ ನಗರದಲ್ಲಿ ಸಚಿವ ಮುನಿರತ್ನ ವಿರುದ್ಧ ಸ್ಪರ್ಧೆ ಮಾಡುತ್ತಿರುವ ಡಿ.ಕೆ.ರವಿ ಪತ್ನಿ ಕುಸುಮಾ ಹನುಮಂತರಾಯಪ್ಪ ಅವರ ಆಸ್ತಿ ಮೌಲ್ಯ ಬರೋಬ್ಬರು 2 ಕೋಟಿ ರೂ.ಗಿಂತ ಅಧಿಕವಾಗಿದೆ ಎಂದು ತಿಳಿದುಬಂದಿದೆ.

ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ (Rajarajeshwari Constituency) ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ ಅವರು ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಅವರ ಒಟ್ಟು ಆಸ್ತಿಯ ಮೌಲ್ಯ 2 ಕೋಟಿ 80 ಲಕ್ಷ ಎಂದು ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಈ ಪೈಕಿ1 ಕೋಟಿ 97 ಲಕ್ಷ ಸ್ಥಿರಾಸ್ತಿಯಾಗಿದೆ. ಉಳಿದಂತೆ 55 ಲಕ್ಷ ಮೌಲ್ಯದ 1 ಕೆಜಿ 100 ಗ್ರಾಂ ಚಿನ್ನಾಭರಣ ಹೊಂದಿದ್ದಾರೆ. 1 ಕೋಟಿ 22 ಲಕ್ಷ ರೂ. ಸಾಲ ಹೊಂದಿದ್ದಾರೆ ಎಂದು ಆಸ್ತಿ ವಿವರ ಸಲ್ಲಿಕೆ ಮಾಡಿದ್ದಾರೆ. ಇನ್ನು ಕುಸುಮಾ ಅವರ ವಿರುದ್ಧ ಮೂರು ಕ್ರಿಮಿನಲ್ ಕೇಸ್ ಗಳು ಕೂಡ ಇವೆ.

Latest Videos

undefined

 

ಬಿಜೆಪಿಯಿಂದ ವಿಶ್ವಾಸ ದ್ರೋಹ : ಜಗದೀಶ್ ಶೆಟ್ಟರನ್ನು ತಬ್ಬಿಕೊಂಡು ಗಳಗಳನೇ ಅತ್ತ ಪತ್ನಿ ಶಿಲ್ಪಾ

ತವಾ ಹಂಚಲು ಹೋಗಿ ಎಫ್‌ಐಆರ್: ಕರ್ನಾಟಕ ವಿಧಾನಸಭೆ ಚುನಾವಣೆ (Karnataka Assembly Elections 2023) ಹಿನ್ನೆಲೆ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ  ಮತದಾರರಿಗೆ ಆಮಿಷ ಒಡ್ಡಿದ ಆರೋಪದ ಸಂಬಂಧ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹೆಚ್ (Kusuma H), ಸಂಸದ ಡಿಕೆ ಸುರೇಶ್ (DK Suresh) ಸೇರಿದಂತೆ ಮೂವರ ವಿರುದ್ಧ ಏ.7ರಂದು ಎಫ್​ಐಆರ್ ದಾಖಲಾಗಿತ್ತು. ಕ್ಷೇತ್ರದಲ್ಲಿ ಮತದಾರರಿಗೆ ತವಾ ಹಂಚುತ್ತಿದ್ದ ಮಾಹಿತಿ ತಿಳಿದು ಚುನಾವಣೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ಚುನಾವಣಾ ಅಧಿಕಾರಿಗಳನ್ನ ಕಂಡು ತವಾ ಹಂಚುತ್ತಿದ್ದವರು ಪರಾರಿಯಾಗಿದ್ದಾರೆ. ಆದರೆ ಪರಾರಿಯಾಗುವ ವೇಳೆ ಓರ್ವ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದು, ವಿಚಾರಣೆ ನಡೆಸಲಾಗುತ್ತಿದೆ.

ಭಾವಚಿತ್ರ ಆಧರಿಸಿ ಕುಸಮಾ ವಿರುದ್ಧ ಪ್ರಕರಣ: ಇನ್ನು ಸ್ಥಳದಲ್ಲಿ ಪತ್ತೆಯಾದ ಬಾಕ್ಸ್​ಗಳನ್ನು ಚುನಾವಣಾ ಅಧಿಕಾರಿಗಳು ಪರಿಶೀಲಿಸಿದಾಗ ಅಭ್ಯರ್ಥಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರ ಕಂಡುಬಂದಿದೆ. ಸದ್ಯ 3 ಕರ್ಟನ್ ಬಾಕ್ಸ್ ಹಾಗೂ 3 ತವಾ ಬಾಕ್ಸ್​ಗಳನ್ನ ವಶಕ್ಕೆ‌ ಪಡೆಯಲಾಗಿದ್ದು, ಚುನಾವಣಾ ಅಧಿಕಾರಿಗಳಿಂದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಅಧಿಕಾರಿಗಳ ದೂರು ಆಧರಿಸಿ ಪೊಲೀಸರು ಕುಸುಮಾ, ಡಿಕೆ ಸುರೇಶ್ ಹಾಗೂ ಜಗದೀಶ್ ಎಂಬವರ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ. 

ಮತದಾರರಿಗೆ ಉಡುಗೊರೆ: ಕುಸುಮಾ, ಡಿಕೆಸು ಸೇರಿ ಮೂವರ ವಿರುದ್ಧ ಕೇಸ್‌

ಮುನಿರತ್ನ ವಿರುದ್ಧ 2ನೇ ಬಾರಿಗೆ ಕುಸಮಾ ಸ್ಪರ್ಧೆ: ಕುಸುಮಾ.ಎಚ್, ಕಳೆದ ಬಾರಿ ಅಂದರೆ ನವೆಂಬರ್ 03, 2020ಕ್ಕೆ ನಡೆದ ಆರ್.ಆರ್.ನಗರದ ಉಪಚುನಾವಣೆಯಲ್ಲಿ ಕಾಂಗ್ರೆಸ್​ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದರು. ಬಳಿಕ ಬಿಜೆಪಿಯ ಎನ್. ಮುನಿರತ್ನ ಅವರ ವಿರುದ್ಧ ಸೋಲು ಕಂಡಿದ್ದರು. ಈಗ ಎರಡನೇ ಬಾರಿಗೆ ಆರ್.ಆರ್.ನಗರದಲ್ಲಿ ತಮ್ಮ ರಾಜಕೀಯ ಭವಿಷ್ಯ ಬರೆಯಲು ಮುಂದಾಗಿದ್ದು, ಇದೀಗ ಮತ್ತೊಮ್ಮೆ ಮುನಿರತ್ನ ವಿರುದ್ಧ ಅಖಾಡಕ್ಕಿಳಿದಿದ್ದಾರೆ. ಮುನಿರತ್ನರನ್ನು ರಾಜಕೀಯವಾಗಿ ಮಣಿಸಲು ಯತ್ನಿಸುತ್ತಿರುವ ಕುಸುಮಾ, ಪ್ರಚೋದನಕಾರಿ ಹೇಳಿಕೆ ಆರೋಪಿಸಿ ದೂರು ನೀಡಿದ್ದರು.

ಏಪ್ರಿಲ್‌ 13 ರಿಂದ ನಾಮಪತ್ರ ಸಲ್ಲಿಕೆ ಆರಂಭಗೊಂಡಿದೆ. ಏಪ್ರಿಲ್‌ 20 ನಾಮಪತ್ರ ಸಲ್ಲಿಕೆಗೆ ಕಡೆಯ ದಿನಾಂಕವಾಗಿದ್ದು, ಏಪ್ರಿಲ್‌ 21 ರಂದು ನಾಮಪತ್ರ ಪರಿಶೀಲನೆ ನಡೆಯಲಿದೆ. ಹಾಗೆ, ನಾಮಪತ್ರ ಹಿಂಪಡೆಯಲು ಕೊನೆಯ ದಿನಾಂಕ ಏಪ್ರಿಲ್‌ 24 ಆಗಿದೆ. ಮೇ 10 ರಂದು ಒಂದೇ ಹಂತದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ.

click me!