* ಡಿ.ಕೆ. ಶಿವಕುಮಾರ್ ಅವರಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
* ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್
* ಪ್ರತಿಕೂಲ ಹವಾಮಾನದಿಂದಾಗಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ
ದಾವಣಗೆರೆ, (ಜೂನ್.04): ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಮತ್ತಿತರ ಕಾಂಗ್ರೆಸ್ ಮುಖಂಡರು ದಾವಣಗೆರೆಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶವಾಗಿದೆ.
ಪ್ರತಿಕೂಲ ಹವಾಮಾನದಿಂದಾಗಿ ನೆಲಮಂಗಲದ ಟಿ. ಬೇಗೂರು ಬಳಿ ಶುಕ್ರವಾರ ಸಂಜೆ ಸುರಕ್ಷಿತವಾಗಿ ತುರ್ತು ಭೂಸ್ಪರ್ಶವಾಗಿದೆ.
ಯಥಾ ರಾಜ, ತಥಾ ಅಧಿಕಾರಿ, ಐಎಎಸ್ ಅಧಿಕಾರಿಗಳ ಜಟಾಪಟಿಗೆ ಡಿಕೆಶಿ ಟಾಂಗ್
ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ ಖಂಡ್ರೆ, ಸಲೀಂ ಅಹಮದ್ ಹಾಗೂ ಎಂಎಲ್ಸಿ ಯು.ಬಿ. ವೆಂಕಟೇಶ್ ಅವರು ಮಧ್ಯಾಹ್ನ ದಾವಣಗೆರೆಯಲ್ಲಿ ಹಿರಿಯ ಮುಖಂಡ ಶಾಮನೂರು ಶಿವಶಂಕರಪ್ಪ ಅವರು ಆಯೋಜಿಸಿದ್ದ ಕೋವಿಡ್ ಲಸಿಕಾ ಅಭಿಯಾನದಲ್ಲಿ ಪಾಲ್ಗೊಂಡು ವಾಪಸಾಗುತ್ತಿದ್ದರು.
ಆದರೆ ವಿಪರೀತ ಮಳೆಯ ಕಾರಣ ಪ್ರತಿಕೂಲ ಹವಾಮಾನದಿಂದಾಗಿ ಕಾಂಗ್ರೆಸ್ ನಾಯಕರಿದ್ದ ಹೆಲಿಕಾಪ್ಟರ್ ಇಳಿಯಲು ಎಚ್ಎಎಲ್ ವಿಮಾನ ನಿಲ್ದಾಣದಲ್ಲಿ ಅನುಮತಿ ಲಭ್ಯವಾಗಲಿಲ್ಲ.
ಹೀಗಾಗಿ ಶಿವಕುಮಾರ್ ಹಾಗೂ ಸಹೋದ್ಯೋಗಿಗಳಿದ್ದ ಹೆಲಿಕಾಪ್ಟರ್ ನೆಲಮಂಗಲದ ಟಿ. ಬೇಗೂರು ಬಳಿ 4 ಗಂಟೆ ಸುಮಾರಿಗೆ ಸುರಕ್ಷಿತವಾಗಿ ಧರೆಗಿಳಿಯಿತು.