ತೆಲಂಗಾಣ ಸಿಎಂ ಆಯ್ಕೆ: 2ನೇ ದಿನವೂ ಡಿಕೆಶಿ, ಜಮೀರ್‌ ಸದನಕ್ಕೆ ಗೈರು

By Kannadaprabha News  |  First Published Dec 6, 2023, 6:59 AM IST

ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿದ್ದಾರೆ. ಜಮೀರ್‌ ಅಹಮದ್‌ ಖಾನ್‌ ಅವರು ಸಹ ಶಾಸಕರನ್ನು ಒಟ್ಟುಗೂಡಿಸುವುದು, ಸರ್ಕಾರ ರಚನೆ ಮಾಡುವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರು ಚಳಿಗಾಲದ ಅಧಿವೇಶನದಲ್ಲಿ ಎರಡನೇ ಕಲಾಪಕ್ಕೆ ಗೈರು ಹಾಜರಾದರು.
 


ವಿಧಾನಸಭೆ(ಡಿ.06):  ತೆಲಂಗಾಣ ರಾಜ್ಯ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ವಸತಿ ಸಚಿವ ಜಮೀರ್‌ ಅಹಮದ್‌ ಖಾನ್ ಅವರು ಎರಡನೇ ದಿನವೂ ಸದನಕ್ಕೆ ಗೈರು ಹಾಜರಾದರು.

ತೆಲಂಗಾಣದಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತ ಪಡೆದು ಅಧಿಕಾರಕ್ಕೆ ಬಂದಿದೆ. ಇದರ ಬೆನ್ನಲ್ಲೇ ಶಾಸಕರನ್ನು ಎಲ್ಲರನ್ನೂ ಒಟ್ಟುಗೂಡಿಸಿ ಶಿವಕುಮಾರ್‌ ಅವರು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದರು. ಸಭೆಯಲ್ಲಿ ಮುಖ್ಯಮಂತ್ರಿ ಆಯ್ಕೆ ಅಧಿಕಾರವನ್ನು ಎಐಸಿಸಿ ಅಧ್ಯಕ್ಷರಿಗೆ ವಹಿಸಿ ನಿರ್ಧಾರ ಮಾಡಲಾಗಿತ್ತು.

Tap to resize

Latest Videos

ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ, ತಾತ್ಕಾಲಿಕ ಪರಿಹಾರ ಘೋಷಿಸಿರುವುದು ಅವಮಾನಕರ: ಅಶೋಕ್ ಕಿಡಿ

ಇದರ ಬೆನ್ನಲ್ಲೇ ವರಿಷ್ಠರ ಭೇಟಿಗೆ ಮಂಗಳವಾರ ಡಿ.ಕೆ.ಶಿವಕುಮಾರ್‌ ಅವರು ದೆಹಲಿಗೆ ತೆರಳಿದ್ದಾರೆ. ಜಮೀರ್‌ ಅಹಮದ್‌ ಖಾನ್‌ ಅವರು ಸಹ ಶಾಸಕರನ್ನು ಒಟ್ಟುಗೂಡಿಸುವುದು, ಸರ್ಕಾರ ರಚನೆ ಮಾಡುವ ಪ್ರಕ್ರಿಯೆಯಲ್ಲಿ ಸಕ್ರಿಯರಾಗಿದ್ದಾರೆ. ಹೀಗಾಗಿ ಇಬ್ಬರೂ ನಾಯಕರು ಚಳಿಗಾಲದ ಅಧಿವೇಶನದಲ್ಲಿ ಎರಡನೇ ಕಲಾಪಕ್ಕೆ ಗೈರು ಹಾಜರಾದರು.

click me!