
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು.
ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗ, ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಖರ್ಗೆಯವರಿಗೆ ಸಲ್ಲಿಸಿತು. ನಂತರ, ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ, ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು.
ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ, ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ। ಜಿ.ಸಿ.ಚಂದ್ರಶೇಖರ್, ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಸೊರಕೆ ಉಪಸ್ಥಿತರಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.