ಡಿ.ಕೆ.ಶಿವಕುಮಾರ್‌ಗೆ ಸಿಎಂ ಆಗುವ ಅವಕಾಶ ಇದೆ: ಶಾಸಕ ಇಕ್ಬಾಲ್ ಹುಸೇನ್

Published : Jun 29, 2024, 04:27 PM IST
ಡಿ.ಕೆ.ಶಿವಕುಮಾರ್‌ಗೆ ಸಿಎಂ ಆಗುವ ಅವಕಾಶ ಇದೆ: ಶಾಸಕ ಇಕ್ಬಾಲ್ ಹುಸೇನ್

ಸಾರಾಂಶ

ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಒಳ್ಳೆಯ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಅವಕಾಶವಿದ್ದು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು. 

ರಾಮನಗರ (ಜೂ.29): ರಾಜ್ಯದಲ್ಲಿ ಉಪ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಒಳ್ಳೆಯ ಕೆಲಸ ಮಾಡುತ್ತಿದ್ದು, ಕಾಂಗ್ರೆಸ್ ಪಕ್ಷದಲ್ಲಿ ಅವರಿಗೆ ಅವಕಾಶವಿದ್ದು ಮುಖ್ಯಮಂತ್ರಿ ಆಗಲಿದ್ದಾರೆ ಎಂದು ಶಾಸಕ ಇಕ್ಬಾಲ್ ಹುಸೇನ್ ವಿಶ್ವಾಸ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ತಮ್ಮ ವಯುಕ್ತಿಕ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಅವರಂತೆ ಕೆಲವರು ತಮ್ಮ ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸುತ್ತಾರೆ. ಸಚಿವ ಕೆ.ಎನ್.ರಾಜಣ್ಣ ಅವರು ಸಹ ನಮ್ಮ ನಾಯಕರೇ ಅವರು ಪ್ರೀತಿ ಇರುವವರ ಪರ ಹೇಳಿದ್ದಾರೆ. 

ಒಟ್ಟಾರೆ ಕಾಂಗ್ರೆಸ್ ಪಕ್ಷ ಶಿಸ್ತಿನ ಪಕ್ಷವಾಗಿದ್ದು, ಏನೇ ಆದರೂ ಅಂತಿಮ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದರು. ರಾಜ್ಯದಲ್ಲಿ ಮೂವರು ಡಿಸಿಎಂ ಸೃಷ್ಟಿಸುವ ಚರ್ಚೆಯನ್ನು ಕೆಲವರು ಮಾತ್ರ ಮಾತನಾಡುತ್ತಿದ್ದಾರೆ. ಆ ತೀರ್ಮಾನವನ್ನು ಹೈಕಮಾಂಡ್ ಮಾಡುತ್ತದೆ. ನಾನು ಏನಿದ್ದರೂ ಕ್ಷೇತ್ರದ ಅಭಿವೃದ್ದಿ ಮಾಡುವುದೇ ನನ್ನ ಮೊದಲ ಆಧ್ಯತೆ ಎಂದು ಹೇಳಿದರು.

ಕನ್ನಡ ನಾಡು ಅಖಂಡ ಕರ್ನಾಟಕವಾಗಿ ಇರಬೇಕು: ಇಬ್ಬಾಗದ ಮಾತಾಡಿದ ಚಂದ್ರಶೇಖರ್ ಶ್ರೀಗೆ ಕಾರಜೋಳ ತಿರುಗೇಟು

ಎಚ್ಡಿಕೆ ಕುಟುಂಬದಿಂದ ಸಾಗುವಳಿದಾರರಿಗೆ ಅನ್ಯಾಯ: ಸರ್ಕಾರಿ ಜಮೀನುಗಳಲ್ಲಿ 25 -30 ವರ್ಷಗಳಿಂದ ಸಾಗುವಳಿ ಮಾಡುತ್ತಿರುವ ಸಾಗುವಳಿದಾರರ ಸಾವಿರಾರು ಅರ್ಜಿಗಳನ್ನು ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಸಮರ್ಪಕವಾಗಿ ವಿಲೇವಾರಿ ಮಾಡದೆ ಅನ್ಯಾಯ ಮಾಡಿದ್ದಾರೆ ಎಂದು ರಾಮನಗರ ಕ್ಷೇತ್ರ ಶಾಸಕ ಇಕ್ಬಾಲ್ ಹುಸೇನ್ ಟೀಕಿಸಿದರು.

ನಗರದ ತಹಸೀಲ್ದಾರ್ ಕಚೇರಿ ಸಭಾಂಗಣದಲ್ಲಿ ಬಗರ್ ಹುಕುಂ ಸಾಗುವಳಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮನಗರ ತಾಲೂಕಿನ ಕಸಬಾ ಮತ್ತು ಕೈಲಾಂಚ ಹೋಬಳಿ ವ್ಯಾಪ್ತಿಯಲ್ಲಿ ಕಳೆದ 19 ವರ್ಷಗಳಲ್ಲಿ ಸ್ವೀಕೃತವಾದ ಸಾವಿರಾರು ಅರ್ಜಿಗಳಲ್ಲಿ ಕೇವಲ 7 ಅರ್ಜಿಗಳಷ್ಟೇ ವಿಲೇವಾರಿ ಆಗಿವೆ. ಇದು ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿ ಅವರಿಗೆ ರೈತರ ಬಗೆಗಿರುವ ಕಾಳಜಿಯನ್ನು ತೋರಿಸುತ್ತದೆ ಎಂದು ಲೇವಡಿ ಮಾಡಿದರು.

ಸರ್ಕಾರಿ ಜಮೀನುಗಳಲ್ಲಿನ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವಂತೆ ಕೋರಿ ಕರ್ನಾಟಕ ಭೂ ಕಂದಾಯ ಕಾಯ್ದೆಯ ನಮೂನೆ 50 ಮತ್ತು ನಮೂನೆ 53ರಲ್ಲಿ ಸಲ್ಲಿಕೆಯಾಗಿರುವ ಅರ್ಜಿಗಳ ಪೈಕಿ ಸುಮಾರು 2 ಸಾವಿರಕ್ಕೂ ಅಧಿಕ ಅರ್ಜಿಗಳು ವಿಲೇವಾರಿಯಾಗಿಲ್ಲ. ಇನ್ನು ನಮೂನೆ 57ರ ಅಡಿಯಲ್ಲಿ 2499 ಅರ್ಜಿಗಳು ಬಂದಿದ್ದು, ಇದರಲ್ಲಿ 1564 ಅರ್ಜಿಗಳು ತಿರಸ್ಕೃತವಾಗಿವೆ. ಬಾಕಿ ಉಳಿದಿರುವ 935 ಅರ್ಜಿಗಳ ಪೈಕಿ 355 ಅರ್ಜಿಗಳು ಜಿಲ್ಲಾಕಾರಿಗಳಿಗೆ ರವಾನೆಯಾಗಿದ್ದರೆ, 580 ಅರ್ಜಿಗಳು ಬಾಕಿ ಉಳಿದಿವೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಗಮನಕ್ಕೆ ಬಾರದೇ ವಾಲ್ಮೀಕಿ ಹಗರಣ ಆಗಿದೆಯಾ.?: ಪ್ರಲ್ಹಾದ್ ಜೋಶಿ ವಾಗ್ದಾಳಿ

ನಾನು ಮೊದಲ ಬಾರಿ ಬಗರ್ ಹುಕುಂ ಸಾಗುವಳಿಯ ಸಭೆ ನಡೆಸಿದಾಗ ಈ ಎಲ್ಲ ಸಾಗುವಳಿ ಅರ್ಜಿಗಳನ್ನು ಪುನರ್ ಪರಿಶೀಲನೆಯ ನೆಪವೊಡ್ಡಿ ತಡೆ ಹಿಡಿದಿರುವುದು ಗಮನಕ್ಕೆ ಬಂದಿದೆ. ಅಲ್ಲದೆ, ಈ ಹಿಂದೆ ಶಾಸಕರಾಗಿದ್ದ ಕುಮಾರಸ್ವಾಮಿ ಮತ್ತು ಅನಿತಾ ಕುಮಾರಸ್ವಾಮಿರವರು ಬಗರ್ ಹುಕುಂ ಸಾಗುವಳಿ ಸಭೆಗಳನ್ನೇ ನಡೆಸದೆ ಲೋಪ ಎಸಗಿದ್ದಾರೆ ಎಂದು ದೂರಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅಧಿವೇಶನ ವೇಳೆ ಹಳೆಯ ಬೇಡಿಕೆಗಳ ಹೊಸ ಕೂಗು!
ಸದನದಲ್ಲಿ ಆಡಳಿತ, ವಿಪಕ್ಷ ಭಾರೀ ಕದನ ಸಂಭವ!