
ಚಿಕ್ಕಬಳ್ಳಾಪುರ (ನ.02): ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮುಖ್ಯಮಂತ್ರಿಯಾಗುವ ಎಲ್ಲ ಅರ್ಹತೆ ಇದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಹೇಳಿದರು. ನಗರದ ಸರ್ ಎಂ.ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಆಯೋಜಿಸಿದ್ದ 70ನೇ ಕನ್ನಡ ರಾಜ್ಯೋತ್ಸವದಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಹೈಕಮಾಂಡ್ ಪ್ರಸ್ತುತ ಬಿಹಾರ ಚುನಾವಣೆ ಕಡೆ ಗಮನ ಹರಿಸಿದೆ. ನವೆಂಬರ್ ಕ್ರಾಂತಿಯ ಬಗ್ಗೆ ನಮಗ್ಯಾರಿಗೂ ಮಾಹಿತಿ ಇಲ್ಲ ಎಂದರು.
ಸಿಎಂ, ಡಿಸಿಎಂ ಜೋಡೆತ್ತು: ಮುಖ್ಯಮಂತ್ರಿ ಆಗುವ ಅವಕಾಶ ಇದೆ ಅಂದ್ರೆ ಯಾರಾದ್ರೂ ಬೇಡ ಅಂತಾರಾ. ಸಿದ್ದರಾಮಯ್ಯ ಹಾಗೂ ಡಿಕೆಶಿ ಜೋಡೆತ್ತುಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೈಕಮಾಂಡ್ ತೆಗೆದುಕೊಳ್ಳೊ ತಿರ್ಮಾನಕ್ಕೆ ನಾವು ಬದ್ಧ ಎಂದು ಹೇಳಿದರು. ಇದೇ ವೇಳೆ ಈಗ ಹುಟ್ಟಿದ ಮಕ್ಕಳಿಗೆ ಸ್ಮಾರ್ಟ್‌ಫೋನ್ ಬೇಕಿದೆ. ಫೋನ್ ಸಿಕ್ಕ ತಕ್ಷಣ ಪಿಳಿ ಪಿಳಿ ಅಂತ ಕಣ್ಣು ಮಿಟುಕಿಸುತ್ತೆ ಅಂತ, ಸಚಿವ ಸಂಪುಟದ ಆಸೆ ವ್ಯಕ್ತಪಡಿಸಿರೋ ಶಾಸಕ ಪ್ರದೀಪ್ ಈಶ್ವರ್ ಮತ್ತಿತರರಿಗೆ ಕಟುಕಿದರು.
ನಾನೂ ಸಚಿವನಾಗಬೇಕು: ಶಾಸಕ ಪ್ರದೀಪ್ ಈಶ್ವರ್ ಮಾತನಾಡಿ, ರಾಜ್ಯದಲ್ಲಿ ಅದೇನು ಕ್ರಾಂತಿ ಆಗುತ್ತೊ ಗೊತ್ತಿಲ್ಲ. ಒಟ್ಟಿನಲ್ಲಿ ಸಿಎಂ, ಡಿಸಿಎಂ, ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧ ಎಂದರು.
ನಾನೇನು ಸನ್ಯಾಸಿಯಲ್ಲ. ಸಚಿವ ಸ್ಥಾನ ಸಿಕ್ಕರೆ ಬೇಡ ಅನ್ನಲಾಗುವುದೇ? ಸಚಿವ ಸಂಪುಟ ವಿಸ್ತರಣೆಯಲ್ಲಿ ನನಗೂ ಒಂದು ಅವಕಾಶ ಸಿಗಲಿ. ನಾನು ಯಾವುದೋ ಒಂದು ರೂಪದಲ್ಲಿ ರಾಜಭವನಕ್ಕೆ ಹೋಗ್ತೇನೆ. ಬಲಿಜ ಸಮುದಾಯದಲ್ಲಿ ನಾನೊಬ್ಬನೇ ಶಾಸಕ. ನನಗೂ ಸಚಿವ ಆಗೋ ಆಸೆ ಇದೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.