
ಭಟ್ಕಳ (ಮೇ.30): ಸಿದ್ದರಾಮಯ್ಯ(Siddaramaiah) ಅವರು ಒಲ್ಲದ ಮನಸ್ಸಿನಿಂದ ಅನಿವಾರ್ಯವಾಗಿ ಮುಖ್ಯಮಂತ್ರಿ ಹುದ್ದೆ(CM Post) ಬಿಟ್ಟುಕೊಟ್ಟಿದ್ದಾರೆ. ಮಾಜಿ ಡಿಸಿಎಂ ಡಿ.ಕೆ.ಶಿವಕುಮಾರ್(DCM DK Shivakumar) ಒದ್ದು ಮುಖ್ಯಮಂತ್ರಿ ಹುದ್ದೆ ಗಿಟ್ಟಿಸಿಕೊಂಡಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್(R Ashok) ಲೇವಡಿ ಮಾಡಿದ್ದಾರೆ.
ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಅವರು ತಮ್ಮ ಸಿಎಂ ಖುರ್ಚಿ ಉಳಿಸಿಕೊಳ್ಳಲು ಹೈಕಮಾಂಡ್(Congress highcommand) ಜತೆ ಕಾಲಾವಕಾಶ ಕೇಳಿದ್ದರು. ಆದರೆ, ಕಾಂಗ್ರೆಸ್ ಹೈಕಮಾಂಡ್ ಅವರಿಗೆ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲು ಕಾಲವಕಾಶ ಕೊಟ್ಟಿಲ್ಲ. ದೆಹಲಿಯಲ್ಲಿ ಛೀಮಾರಿ ಹಾಕಿ ಕಳುಹಿಸಿದ್ದಾರೆ. ದೆಹಲಿಯಿಂದ ಸಿದ್ದರಾಮಯ್ಯ ಪೆಚ್ಚುಮೋರೆ ಮಾಡಿಕೊಂಡು ರಾಜ್ಯಕ್ಕೆ ಬಂದು ಸಿಎಂ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಹೇಳಿದರು.
ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ತಾನು ಈ ಹಿಂದೆ ಸಚಿವಗಿರಿಯನ್ನು ಒದ್ದು ಗಿಟ್ಟಿಸಿಕೊಂಡಿದ್ದೆ ಎಂದಿದ್ದರು. ಈಗ ಮುಖ್ಯಮಂತ್ರಿ ಹುದ್ದೆಯನ್ನೂ ಸಹ ಅವರು ಒದ್ದು ಗಿಟ್ಟಿಸಿಕೊಂಡಿದ್ದಾರೆ ಎಂದು ಕಾಂಗ್ರೆಸ್ ಖುರ್ಚಿ ಕಚ್ಚಾಟದ ಬಗ್ಗೆ ಟೀಕಿಸಿದರು.
ಬಿಜೆಪಿಗೆ ಸಿದ್ದರಾಮಯ್ಯ ಅವರೂ, ಡಿ.ಕೆ.ಶಿವಕುಮಾರ ಅವರೂ ಒಂದೇ ಆಗಿದ್ದು, ಇಬ್ಬರೂ ಹಿಂದೂ ವಿರೋಧಿಗಳಾಗಿದ್ದಾರೆ. ಇಬ್ಬರೂ ಭ್ರಷ್ಟಾಚಾರ ಮಾಡುವವರಾಗಿದ್ದು, ಸಿದ್ದರಾಮಯ್ಯ ಕಾಲದಲ್ಲಿ ರಾಜ್ಯಕ್ಕೆ ₹7 ಲಕ್ಷ ಕೋಟಿ ಸಾಲವಾದರೆ ಡಿ.ಕೆ.ಶಿವಕುಮಾರ್ ಕಾಲದಲ್ಲಿ ₹10 ಲಕ್ಷ ಕೋಟಿ ಸಾಲ ಆಗಲಿದೆ. ಕಾಂಗ್ರೆಸ್ ಹೈಕಮಾಂಡ್ ಡಿ.ಕೆ.ಶಿವಕುಮಾರ ಅವರನ್ನು ಕರ್ನಾಟಕದ ಎಟಿಎಂ ಚೇರಮನ್ ಮಾಡಿಕೊಂಡಿದೆ. ಕಾಂಗ್ರೆಸ್ಸಿನ ಹೈಕಮಾಂಡಿಗೆ ಕರ್ನಾಟಕ ಎಟಿಎಂ ಆಗಿದೆ ಎಂದು ಆರೋಪಿಸಿದರು.
ರಾಜ್ಯ ಸರ್ಕಾರವನ್ನು ಐಸಿಯುನಲ್ಲಿಟ್ಟಿದ್ದು, ಇದೊಂದು ಲೂಟಿ ಸರ್ಕಾರವಾಗಿದೆ. ಗ್ಯಾರಂಟಿಯೂ ಕೊಡುತ್ತಿಲ್ಲ. ಅಭಿವೃದ್ಧಿಯೂ ಮಾಡುತ್ತಿಲ್ಲ. ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿ ಆದರೂ ರಾಜ್ಯದ ಪರಿಸ್ಥಿತಿ ಬದಲಾಯಿಸಲು ಸಾಧ್ಯವಿಲ್ಲ. ಕಾಂಗ್ರೆಸ್ ಸರ್ಕಾರ ಮುಸ್ಲಿಂ ಓಲೈಕೆ ರಾಜಕಾರಣ ಮಾಡುತ್ತಿದೆ. ಮುಸ್ಲಿಮರ ಅಭಿವೃದ್ಧಿಗೆ ₹200 ಕೋಟಿ ಕೊಟ್ಟರೆ ಹಿಂದೂಗಳಿಗೆ ಏನೂ ಕೊಟ್ಟಿಲ್ಲ. ಕಾಂಗ್ರೆಸ್ ಹಿಂದೂಗಳ ವಿರೋಧಿಯಾಗಿದೆ. ಈ ಪಕ್ಷದ್ದು ಕಳ್ಳ ಕೈ ಆಗಿದೆ ಎಂದು ಆರೋಪಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.