ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಬಿಜೆಪಿ ಸಮರ್ಥಿಸಿಕೊಂಡಿದೆ, ಈಶ್ವರಪ್ಪ ವಿರುದ್ಧ ವಾಗ್ದಾಳಿ

By Suvarna NewsFirst Published Feb 20, 2022, 12:05 PM IST
Highlights

* ಸಚಿವ ಕೆ.ಎಸ್. ಈಶ್ವರಪ್ಪ ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ಧರಣಿ ಮುಂದುವರಿಕೆ
* ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಬಿಜೆಪಿ ಸಮರ್ಥಿಸಿಕೊಂಡಿದೆ ಎಂದ ಡಿಕೆಶಿ
* ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಎಂದಿದ್ದ ಈಶ್ವರಪ್ಪ

ಬೆಂಗಳೂರು, (ಫೆ.20): ರಾಷ್ಟ್ರಧ್ವಜದ ವಿಚಾರವಾಗಿ ಸಚಿವ ಕೆ.ಎಸ್. ಈಶ್ವರಪ್ಪ (KS Eshwarappa) ಕೊಟ್ಟ ಹೇಳಿಕೆ ಖಂಡಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಅಹೋರಾತ್ರಿ ಧರಣಿ 4ನೇ ದಿನಕ್ಕೆ ಕಾಲಿಟ್ಟಿದೆ.  ಈಶ್ವರಪ್ಪ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವವರೆಗೂ ಹೋರಾಟ ಮುಂದುವರಿಸಲು ಕಾಂಗ್ರೆಸ್ ತೀರ್ಮಾನಿಸಿದೆ.

ಅತ್ತ ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆ ನೀಡಲ್ಲ. ಜಗ್ಗಲ್ಲ, ಬಗ್ಗಲ್ಲ ಎಂದು ಹೇಳಿದ್ದಾರೆ. ಇತ್ತ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಕ್ಷಮೆ ಕೇಳುವುದೆಲ್ಲಾ ಬೇಕಾಗಿಲ್ಲ. ಈಶ್ವರಪ್ಪ ರಾಜೀನಾಮೆ ನೀಡಲೇಬೇಕೆಂದು ಒತ್ತಾಯ ಮಾಡುತ್ತಿದ್ದಾರೆ. 

Latest Videos

Asianet Suvarna Focus ಈಶ್ವರಪ್ಪ ಪರ ದಳಪತಿ ಬ್ಯಾಟಿಂಗ್, ರಾಜ್ಯ ರಾಜಕಾರಣದಲ್ಲಿ ಸಂಚಲನ

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುತ್ತೇವೆ ಅಂತಾರೆ. ಇಂತಹ ದೇಶದ್ರೋಹಿ ಹೇಳಿಕೆಯನ್ನ ಸಮರ್ಥಿಸಿಕೊಂಡಿದ್ದಾರೆ. ಸರ್ಕಾರದ ಒಬ್ಬ ದೇಶದ್ರೋಹಿ ಸಚಿವರನ್ನ ಸಮರ್ಥಿಸಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಸಚಿವ ಈಶ್ವರಪ್ಪ ಬಿಡಿ ಬಚ್ಚಲು ಬಾಯಿ ಮಾತಾಡಿದ್ದಾರೆ. ಆದರೆ ಸಿಎಂ ಬೊಮ್ಮಾಯಿ ಸಮರ್ಥಿಸಿಕೊಂಡಿದ್ದಾರೆ. ಸಚಿವ ಕೆ.ಎಸ್.ಈಶ್ವರಪ್ಪರನ್ನ ವಜಾ ಮಾಡಬೇಕು. ಸಿಎಂಗೆ ಸ್ವಾಭಿಮಾನ ಇದ್ದಿದ್ರೆ ಅಂದೇ ವಜಾ ಮಾಡಬೇಕಿತ್ತು. ಸರ್ಕಾರದಲ್ಲಿ ಈಶ್ವರಪ್ಪಗೆ ಯಾರ ಬಗ್ಗೆಯೂ ನಿಷ್ಠೆ ಇಲ್ಲ ಎಂದರು

ಜಿಲ್ಲಾ, ತಾಲೂಕು ಮಟ್ಟದಲ್ಲೂ ಹೋರಾಟ
ಈಶ್ವರಪ್ಪರನ್ನ ವಜಾ ಮಾಡದಿದ್ದರೆ ಹೋರಾಟ ಮಾಡ್ತೇವೆ. ಜಿಲ್ಲಾ, ತಾಲೂಕು ಮಟ್ಟದಲ್ಲೂ ಹೋರಾಟ ಮಾಡ್ತಿದ್ದೇವೆ. ನಿಮ್ಮ ದುರಾಡಳಿತದಲ್ಲಿ ಏನೆಲ್ಲಾ ನಡೆಯುತ್ತಿದ್ದೆ ಇದೆಲ್ಲ ಸಾಕ್ಷಿ. ಸಚಿವ ಈಶ್ವರಪ್ಪರನ್ನ ಸಮರ್ಥಿಸುತ್ತಿರುವುದಕ್ಕೆ ನಮ್ಮ ಖಂಡನೆ ಇದೆ. ವಿದ್ಯಾರ್ಥಿಗಳು ಏನು ತಪ್ಪು ಮಾಡಿದ್ರು, ಏಕೆ ಕೇಸ್ ಹಾಕಿದ್ರಿ? ಪೋಷಕರಿದ್ದಾರೆ, ಶಿಕ್ಷಕರಿದ್ದಾರೆ ಅವೆಲ್ಲಾ ನಿಮಗೇಕೆ? ರಾಜ್ಯದಲ್ಲಿ ಅಶಾಂತಿ ಮೂಡಿಸುವುದಕ್ಕೆ ಪ್ರಯತ್ನಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಯಾರು-ಯಾರು ಏನೇನು ಮಾತನಾಡುತ್ತಿದ್ದಾರೋ ಮಾತನಾಡಲಿ. ಮಲ್ಲಿಕಾರ್ಜುನ ಖರ್ಗೆಯವರು ಬಂದು ಬೆಂಬಲ ಕೊಟ್ಟರು. ನಮ್ಮ ಧರಣಿ ಕುರಿತು ಬೇರೆ ರಾಜ್ಯಗಳಿಂದಲೂ ಕರೆ ಬರುತ್ತಿವೆ. ಕರ್ನಾಟಕದ ಕಾಂಗ್ರೆಸ್ ಶಾಸಕರು ಒಳ್ಳೇ ಕೆಲಸ ಮಾಡ್ತಿದಾರೆ. ಒಳ್ಳೇದು ಅಂತ ಬೇರೆ ರಾಜ್ಯಗಳ ರಾಜಕಾರಣಿಗಳು ಹೇಳ್ತಿದ್ದಾರೆ.  ಮಲ್ಲಿಕಾರ್ಜುನ ಖರ್ಗೆಯವರು ಬಂದು ಹೇಳಿದ್ದಾರೆ ಎಂದು ಹೇಳಿದರು.

 ಸಿಂಗಾಪುರ ಪಿಎಂ ಕೇಂದ್ರ ಸರ್ಕಾರದ ಬಗ್ಗೆ ಮಾತಾಡಿದ್ದಾರೆ. ಬೇರೆಬೇರೆ ದೇಶಗಳಿಂದ ಕೇಂದ್ರದ ನಡೆ ಬಗ್ಗೆ ಟೀಕೆ ಬರ್ತಿವೆ ಎಂದು ತಿಳಿಸಿದರು.

ಕೆಂಪುಕೋಟೆ ಮೇಲೆ ಕೇಸರಿ ಧ್ವಜ ಹಾರಿಸುವ ದಿನಗಳು ಬರುತ್ತವೆ ಅಂತಾ ಕೆಲ ದಿನಗಳ ಹಿಂದಷ್ಟೇ ಈಶ್ವರಪ್ಪ ನೀಡಿದ್ದ ಹೇಳಿಕೆ ವಿರುದ್ಧ ಕಾಂಗ್ರೆಸ್ ಸಿಡಿದೆದ್ದಿದೆ. ಸದನದಲ್ಲಿ ಕೋಲಾಹಲ(Karnataka Assembly Session)ವನ್ನೇ ಸೃಷ್ಟಿಸಿತ್ತು. ರಾಷ್ಟ್ರಧ್ವಜಕ್ಕೆ ಅಗೌರವ ತೋರಿರುವ ಈಶ್ವರಪ್ಪ (KS Eshwarappa) ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಅವರನ್ನು ಸಂಪುಟದಿಂದ ಕೈಬಿಡಬೇಕೆಂದು ಕಾಂಗ್ರೆಸ್ ಪಟ್ಟು ಹಿಡಿದಿದೆ. ಈ ಬಗ್ಗೆ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ಮಧ್ಯೆ ಆರೋಪ-ಪ್ರತ್ಯಾರೋಪ ತಾರಕಕ್ಕೇರಿದೆ.

ಇನ್ನು ಕಾಂಗ್ರೆಸ್‌ ನಡೆಸುತ್ತಿರುವ ಪ್ರತಿಭಟನೆ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ರಾಷ್ಟ್ರಧ್ವಜ ಬದಲಾಯಿಸುವುದು ಕಾಂಗ್ರೆಸ್‌ ಪಕ್ಷದ ಹಿಡನ್‌ ಅಜೆಂಡಾ ಎಂದು ಬಿಜೆಪಿ ಟ್ವೀಟ್‌ ಮೂಲಕ ಗಂಭೀರ ಆರೋಪ ಮಾಡಿದೆ.

ಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ. ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ ಕಿಡಿಕಾರಿದೆ. 

click me!