ಸ್ವಾತಂತ್ರ್ಯ ದಿನಾಚರಣೆಯಂಥ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸಿದರೆ, ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುತ್ತಾರೆ. ಆದರೆ ತಾಲೂಕು ಕೇಂದ್ರದಲ್ಲಿ ಸಚಿವರು ಅದರಲ್ಲಿ ಉಪಮುಖ್ಯಮಂತ್ರಿಯೊಬ್ಬರು ಧ್ವಜಾರೋಹಣ ಮಾಡಿದ ಉದಾಹರಣೆಯೇ ರಾಜ್ಯದಲ್ಲಿಲ್ಲ. ಉಪಮುಖ್ಯಮಂತ್ರಿಯಾಗಿ ತಾಲೂಕು ಕೇಂದ್ರದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಇದೀಗ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಮುಂದಾಗಿದ್ದಾರೆ.
ಚನ್ನಪಟ್ಟಣ (ಆ.14): ಚನ್ನಪಟ್ಟಣ ಉಪಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯಂದು ಚನ್ನಪಟ್ಟಣದಲ್ಲಿ ಧ್ವಜಾರೋಹಣ ನೆರವೇರಿಸಲು ನಿರ್ಧರಿಸಿದ್ದಾರೆ. ಕ್ಷೇತ್ರದ ಹಿಂದಿನ ಶಾಸಕ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಜತೆಗೆ ರಾಜಕೀಯ ಜಿದ್ದಾಜಿದ್ದಿಗಿಳಿದಿರುವ ಡಿ.ಕೆ.ಶಿವಕುಮಾರ್ ಅವರ ಈ ನಡೆ ಇದೀಗ ತೀವ್ರ ಕುತೂಹಲ ಮೂಡಿಸಿದೆ.
ಸ್ವಾತಂತ್ರ್ಯ ದಿನಾಚರಣೆಯಂಥ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಧ್ವಜಾರೋಹಣ ನೆರವೇರಿಸಿದರೆ, ಜಿಲ್ಲಾ ಮಟ್ಟದಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರು ಧ್ವಜಾರೋಹಣ ನೆರವೇರಿಸುತ್ತಾರೆ. ಆದರೆ ತಾಲೂಕು ಕೇಂದ್ರದಲ್ಲಿ ಸಚಿವರು ಅದರಲ್ಲಿ ಉಪಮುಖ್ಯಮಂತ್ರಿಯೊಬ್ಬರು ಧ್ವಜಾರೋಹಣ ಮಾಡಿದ ಉದಾಹರಣೆಯೇ ರಾಜ್ಯದಲ್ಲಿಲ್ಲ. ಉಪಮುಖ್ಯಮಂತ್ರಿಯಾಗಿ ತಾಲೂಕು ಕೇಂದ್ರದಲ್ಲಿ ಧ್ವಜಾರೋಹಣ ಮಾಡುವ ಮೂಲಕ ಡಿ.ಕೆ.ಶಿವಕುಮಾರ್ ಇದೀಗ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಲು ಮುಂದಾಗಿದ್ದಾರೆ.
ಡಿಕೆಶಿ, ಕುಮಾರಸ್ವಾಮಿ ರಾಜಕೀಯ ಬಡಿದಾಟದ ನಡುವೆ ಎಂಟ್ರಿ ಕೊಟ್ಟ ಸಿ.ಪಿ. ಯೋಗೇಶ್ವರ
ಎಚ್‌ಡಿಕೆಗೆ ಟಕ್ಕರ್ ಕೊಡುವ ತಂತ್ರ:
ಲೋಕಸಭಾ ಚುನಾವಣೆಯಿಂದ ಎಚ್.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ನಡುವಿನ ರಾಜಕೀಯ ಸಮರ ತಾರಕ್ಕೇರಿದೆ. ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಗೆದ್ದ ಬಳಿಕ ಕುಮಾರಸ್ವಾಮಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಸದ್ಯದಲ್ಲೇ ಈ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯಲಿದೆ. ಹೀಗಾಗಿ ಕುಮಾರಸ್ವಾಮಿ ಪ್ರತಿನಿಧಿಸುತ್ತಿದ್ದ ಈ ಕ್ಷೇತ್ರದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಅವರಿಗೆ ಟಕ್ಕರ್ ನೀಡಲು ಡಿ.ಕೆ.ಶಿವಕುಮಾರ್ ಮುಂದಾಗಿದ್ದಾರೆಂಬ ಚರ್ಚೆ ಆರಂಭವಾಗಿದೆ.
ಒಂಬತ್ತು ವರ್ಷಗಳಿಂದ ಚನ್ನಪಟ್ಟಣ ಶಾಸಕರಾಗಿ ಎಚ್.ಡಿ.ಕುಮಾರಸ್ವಾಮಿ ಅವರು ತಾಲೂಕಿನ ಒಂದೇ ಒಂದು ರಾಷ್ಟ್ರೀಯ ಹಬ್ಬಗಳಲ್ಲಿ ಪಾಲ್ಗೊಂಡಿರಲಿಲ್ಲ. ಈ ಬಗ್ಗೆ ಸಾರ್ವಜನಿಕ ವಲಯದಲ್ಲಿ ಸಾಕಷ್ಟು ಟೀಕೆಯೂ ವ್ಯಕ್ತವಾಗಿತ್ತು.