Bidadi Township Row: ಮುಖಾಮುಖಿ ಚರ್ಚೆಗೆ ಬನ್ನಿ: ಎಚ್‌ಡಿಕೆಗೆ ಸಿಎಂ ಡಿಕೆಶಿ ಪಂಥಾಹ್ವಾನ!

Published : Jun 22, 2026, 08:55 PM ISTUpdated : Jun 22, 2026, 09:45 PM IST
DK Shivakumar

ಸಾರಾಂಶ

Bidadi Township Row: ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಟೌನ್‌ಶಿಪ್ ಯೋಜನೆ ಇದೀಗ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಯೋಜನೆ ಕುರಿತು ನಡೆಯುತ್ತಿರುವ..

ಬೆಂಗಳೂರು (ಜೂ.22): ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಬಿಡದಿ ಟೌನ್‌ಶಿಪ್ ಯೋಜನೆ ಇದೀಗ ಹೊಸ ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ. ಯೋಜನೆ ಕುರಿತು ನಡೆಯುತ್ತಿರುವ ಆರೋಪ-ಪ್ರತ್ಯಾರೋಪಗಳ ನಡುವೆ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅಧಿಕೃತವಾಗಿ ಮುಖಾಮುಖಿ ಚರ್ಚೆಗೆ ಆಹ್ವಾನ ನೀಡಿದ್ದಾರೆ.

ಈ ಸಂಬಂಧ ಮುಖ್ಯಮಂತ್ರಿ ಕಚೇರಿಯಿಂದ ಪತ್ರವೊಂದನ್ನು ಕಳುಹಿಸಲಾಗಿದ್ದು, ಜೂನ್ 26ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿರುವ ಮುಖ್ಯಮಂತ್ರಿಗಳ ಕಚೇರಿಗೆ ಆಗಮಿಸುವಂತೆ ಕೋರಲಾಗಿದೆ. ಅಲ್ಲದೆ, ಕುಮಾರಸ್ವಾಮಿ ಅವರು ತಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ಸಭೆಯಲ್ಲಿ ಭಾಗವಹಿಸಬಹುದು ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ಬಿಡದಿ ಟೌನ್‌ಶಿಪ್ ಯೋಜನೆ ವಿಚಾರವಾಗಿ ಇತ್ತೀಚಿನ ದಿನಗಳಲ್ಲಿ ಆಡಳಿತ ಮತ್ತು ಪ್ರತಿಪಕ್ಷ ನಾಯಕರ ನಡುವೆ ವಾಕ್ಸಮರ ತೀವ್ರಗೊಂಡಿತ್ತು. ಯೋಜನೆಯ ಅನುಷ್ಠಾನ, ಭೂಸ್ವಾಧೀನ ಹಾಗೂ ರಾಜಕೀಯ ಆರೋಪಗಳ ಕುರಿತು ಎರಡೂ ಕಡೆಯಿಂದ ನಿರಂತರ ಹೇಳಿಕೆಗಳು ಕೇಳಿಬರುತ್ತಿದ್ದವು. ಈ ಬೆಳವಣಿಗೆಗಳ ನಡುವೆಯೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ನೇರ ಚರ್ಚೆಯ ಪ್ರಸ್ತಾಪ ಮುಂದಿಟ್ಟಿರುವುದು ರಾಜಕೀಯ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

ಪತ್ರದಲ್ಲಿ ಏನಿದೆ?

ತಾವು ಪ್ರಾರಂಭಿಸಿದ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ, ತಮ್ಮ ಜೊತೆ ನಾನು ಚರ್ಚಿಸಲು ಉತ್ಸುಕನಾಗಿದ್ದು, ದಿನಾಂಕ: 26.06.2026 ರಂದು ಬೆಳಗ್ಗೆ 11.00 ಗಂಟೆಗೆ ವಿಧಾನಸೌಧಕ್ಕೆ ತಾವು ಮತ್ತು ತಮ್ಮ ತಂಡದ ಐದು ಪ್ರತಿನಿಧಿಗಳೊಂದಿಗೆ ನನ್ನ ಕಚೇರಿಗೆ ಆಗಮಿಸುವಂತೆ ತಮ್ಮನ್ನು ಕೋರುತ್ತೇನೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

HDK vs DKS: 'ವಿಧಾನಸೌಧಕ್ಕೆ ಅಲ್ಲ, ಬಿಡದಿಗೆ ಬನ್ನಿ': ಸಿಎಂ ಡಿಕೆಶಿಗೆ ಎಚ್‌ಡಿಕೆ ತಿರುಗೇಟು
CM Vijay Birthday- Big Secret: ಎಲೆಕ್ಷನ್ ಗೆದ್ದ ಬಳಿಕ ಮನೆಗೆ ಬಂದ ವಿಜಯ್ ಹೇಳಿದ್ದೇನು? ಆ 'ಬಿಗ್ ಸೀಕ್ರೆಟ್' ರಿವೀಲ್ ಮಾಡಿದ ದಳಪತಿ ಅಮ್ಮ ಶೋಭಾ!