ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆಂದು ಕಾಂಗ್ರೆಸ್ ಪಕ್ಷದಲ್ಲಿ ಯಾರು ಹೇಳಿಕೆ ಕೊಡುತ್ತಿದ್ದಾರೆಯೋ ಅವರೇ ಮುಖ್ಯಮಂತ್ರಿ ರೇಸ್‌ನಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಮುಖ್ಯಮಂತ್ರಿ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ, ಸತೀಶ್ ಜಾರಕಿಹೊಳಿಯವರು ಸಿದ್ದರಾಮಯ್ಯ 3 ವರ್ಷ ಇರುತ್ತಾರಾ? 5 ವರ್ಷ ಇರುತ್ತಾರಾ? ಅದನ್ನು ಹೈಕಮಾಂಡ್‌ಗೇ ಕೇಳಬೇಕು ಎಂದು ಹೇಳಿಕೆ ನೀಡಿದ್ದಾರಲ್ಲವೇ ಎಂದು ಪ್ರಶ್ನಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ
ಹುಬ್ಬಳ್ಳಿ(ಅ.10): ದಸರಾ ನಂತರ ರಾಜ್ಯದಲ್ಲಿ ಸಿಎಂ ಬದಲಾವಣೆ ಖಚಿತ ಎಂದು ಪುನರುಚ್ಚರಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮುಂದಿನ ಮುಖ್ಯಮಂತ್ರಿ ರೇಸ್‌ನಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮೊದಲ ಸ್ಥಾನದಲ್ಲಿ ಇದ್ದಾರೆ ಎಂದು ಪ್ರತಿಪಾದಿಸಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸಿದ್ದರಾಮಯ್ಯ ಐದು ವರ್ಷ ಪೂರೈಸುತ್ತಾರೆಂದು ಕಾಂಗ್ರೆಸ್ ಪಕ್ಷದಲ್ಲಿ ಯಾರು ಹೇಳಿಕೆ ಕೊಡುತ್ತಿದ್ದಾರೆಯೋ ಅವರೇ ಮುಖ್ಯಮಂತ್ರಿ ರೇಸ್‌ನಲ್ಲಿ ಮುಂದಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಶಾಸಕರೇ, ಸಚಿವರೇ ಮುಖ್ಯಮಂತ್ರಿ ಅಧಿಕಾರಾವಧಿ ವಿಚಾರವಾಗಿ ಹೇಳಿಕೆ ಕೊಡುತ್ತಿದ್ದಾರೆ. ಮೇಲಾಗಿ, ಸತೀಶ್ ಜಾರಕಿಹೊಳಿಯವರು ಸಿದ್ದರಾಮಯ್ಯ 3 ವರ್ಷ ಇರುತ್ತಾರಾ? 5 ವರ್ಷ ಇರುತ್ತಾರಾ? ಅದನ್ನು ಹೈಕಮಾಂಡ್‌ಗೇ ಕೇಳಬೇಕು ಎಂದು ಹೇಳಿಕೆ ನೀಡಿದ್ದಾರಲ್ಲವೇ ಎಂದು ಪ್ರಶ್ನಿಸಿದರು.
undefined
ಸಿಎಂ ಕುರ್ಚಿಯಲ್ಲಿ ಟಗರು ಕುಳಿತಿದೆ, ಕೆಳಗೆ ಇಳಿಸುವುದು ಅಷ್ಟು ಸುಲಭವಿಲ್ಲ: ಜಮೀರ್ ಅಹ್ಮದ್
ರೇಸ್‌ನಲ್ಲಿ ಡಿಕೆಶಿ ಮೊದಲಿಗರು:
ಈಗಾಗಲೇ ಹಲವು ಶಾಸಕರು ಗುಪ್ತ ಸಭೆಗಳನ್ನು ಮಾಡುತ್ತಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ದೇವರ ಪೂಜೆ ಮಾಡಿ ಬಳಿಕ ಸಿದ್ದರಾಮಯ್ಯ 5 ವರ್ಷ ಪೂರೈಸುತ್ತಾರೆ ಎಂದು ಹೇಳುತ್ತಾರೆ. ಆದರೆ, ನಿಜವಾಗಿಯೂ ಸಿಎಂ ರೇಸ್‌ನಲ್ಲಿ ಡಿ.ಕೆ.ಶಿವಕುಮಾರ್ ಮೊದಲಿದ್ದಾರೆ ಎಂದರು.
ಮುಡಾ, ವಾಲ್ಮೀಕಿ, ಹಗರಣಕ್ಕೆ ಸಂಬಂಧಿಸಿ ಮೈಸೂರಿನ ವರೆಗೆ ಪಾದಯಾತ್ರೆ ಮಾಡಿದ್ದೇವೆ. ಇದರ ಪರಿಣಾಮವಾಗಿ ನಮಗೆ ಮೊದಲ ಜಯ ಸಿಕ್ಕಿದೆ. ಈಗಾಗಲೇ ಸಿಎಂ ಕುರ್ಚಿ ಅಲುಗಾಡುತ್ತಿದೆ. ಸಿದ್ದರಾ ಮಯ್ಯ ಈಗಾಗಲೇ ಭಂಡತನದಿಂದ ಮುಖ್ಯಮಂತ್ರಿ ಗಾದಿಯಲ್ಲಿ ಮುಂದುವರಿದಿದ್ದಾರೆ. ಅವರ ಈ ಭಂಡತನ ಹೆಚ್ಚು ದಿನ ನಡೆಯುವುದಿಲ್ಲ ಎಂದರು.
ಜಾತಿಗಣತಿ ಗಾಳ:
ಜಾತಿಗಣತಿ ವಿಚಾರವಾಗಿ ಮಾತ ನಾಡಿ, ಸಿಎಂ ನಿಜವಾಗಿಯೂ ಪ್ರಾಮಾಣಿಕರಾ ಗಿದ್ದರೆ 2018ರಲ್ಲಿ ಸಿಎಂ ಆಗಿದ್ದಾಗಲೇ ಅನುಷ್ಠಾನ ಮಾಡ ಬೇಕಿತ್ತು. ಇದೀಗ ಹಗರಣಗಳ ಸರಮಾಲೆಯಲ್ಲಿ ಸಿಲುಕಿ ರುವ ಸರ್ಕಾರವನ್ನು ಉಳಿಸಿಕೊಳ್ಳುವುದಕ್ಕಾಗಿ ಜಾತಿ ಗಣತಿ ಎಂಬ ದಾಳ ಉರುಳಿಸಿದ್ದಾರೆ ಎಂದರು.
ಸಿದ್ದು ಅಧಿಕಾರ ತ್ಯಾಗ: ವಿಜಯೇಂದ್ರ ತಮಗೆ ಬಿದ್ದ ಕನಸು ನಿಜವೆಂದು ನಂಬಿದ್ದಾರೆ, ರೆಡ್ಡಿ ವ್ಯಂಗ್ಯ
ಆರ್‌ಸಿಬಿ 20-20 ಮ್ಯಾಚ್
ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರ ರಾಯ ಣ್ಣ-ಚೆನ್ನಮ್ಮ ಬ್ರಿಗೇಡ್ (ಆರ್‌ಸಿಬಿ) ಸಂಘಟನೆ ವಿಚಾರವಾಗಿ ಮಾತನಾಡಿ, ಅದು 20-20 ಮ್ಯಾಚ್ ಇದ್ದಂತೆ. ಆದರೆ, ನಾನು ಟೆಸ್ಟ್ ಆಡಲು ಬಂದಿದ್ದೇನೆ. ನಾನು ಎಲ್ಲೂ, ಎಂದಿಗೂ ನಾಯಕ ಎಂದು ಹೇಳಿಕೊಂಡಿಲ್ಲ. ಪಕ್ಷದ ಹೈಕಮಾಂಡ್ ನೀಡುವ ಸೂಚನೆಯಂತೆ ಕಾರ್ಯಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ ಎಂದರು.
ವಿಜಯೇಂದ್ರ ಹೈಕಮಾಂಡ್‌ಗೆ ಮಂಕುಬೂದಿ ಎರಚಿ ರಾಜ್ಯಾಧ್ಯಕ್ಷರಾಗಿದ್ದಾರೆ ಎಂಬ ಈಶ್ವರಪ್ಪ ಹೇಳಿಕೆಗೆ ಪ್ರತಿಕ್ರಿಯಿಸಿ, ನಾನು ಮಂಕುಬೂದಿ ಎರಚುವಷ್ಟು ದೊಡ್ಡವನು ಎನ್ನುವು ದನ್ನು ಅವರೇ ಒಪ್ಪಿಕೊಂಡಿದ್ದಾರೆಂದರೆ ಸಂತೋಷ. ಆದರೆ ಪಕ್ಷಕ್ಕೆ ದ್ರೋಹಮಾಡಿ ಹೊರ ಹೋದವರಿಗೆ ಪಕ್ಷದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ ಎಂದರು.