Karnataka Politics : ಡಿ.ಕೆ.ಶಿವಕುಮಾರ್ ಪರ್ಮನೆಂಟ್ ಮುಖ್ಯಮಂತ್ರಿ : ಸಚಿವ ಸೋಮಶೇಖರ್

Suvarna News   | Asianet News
Published : Dec 26, 2021, 12:06 PM IST
Karnataka Politics : ಡಿ.ಕೆ.ಶಿವಕುಮಾರ್  ಪರ್ಮನೆಂಟ್ ಮುಖ್ಯಮಂತ್ರಿ : ಸಚಿವ ಸೋಮಶೇಖರ್

ಸಾರಾಂಶ

ಮುಖ್ಯಮಂತ್ರಿ ಚಂದ್ರು ಅವರ ರೀತಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ‘ಪರ್ಮನೆಂಟ್‌ ಸಿಎಂ’  ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ಹೇಳಿಕೆ

 ಮೈಸೂರು (ಡಿ.26):  ಮುಖ್ಯಮಂತ್ರಿ ಚಂದ್ರು ಅವರ ರೀತಿ ಕೆಪಿಸಿಸಿ (KPCC)  ಅಧ್ಯಕ್ಷ ಡಿ.ಕೆ.ಶಿವಕುಮಾರ್‌ (DK Shivakumar) ‘ಪರ್ಮನೆಂಟ್‌ ಸಿಎಂ’ ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ (ST Somashekar ) ಹೇಳಿದ್ದಾರೆ. ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ಪಾದ ಯಾತ್ರೆ ಮಾಡಿದರೆ ಮುಖ್ಯಮಂತ್ರಿ ಆಗಬಹುದೆಂದು ಡಿ.ಕೆ.ಶಿವಕುಮಾರ್‌  ಅಂದುಕೊಂಡಿದ್ದರೆ ಅದು ಕನಸು. ಡಿ.ಕೆ.ಶಿವಕುಮಾರ್‌ ನಮ್ಮ ಮುಖ್ಯಮಂತ್ರಿ ಚಂದ್ರು ರೀತಿ ಪರ್ಮನೆಂಚ್‌ ಸಿಎಂ ಆಗ್ಬೇಕು ಅಷ್ಟೇ ಎಂದರು.

ಮೇಕೆದಾಟು (Mekedatu) ಪಾದಯಾತ್ರೆ ಕಾಂಗ್ರೆಸ್‌ (Congress) ನಾಯಕರ ದೊಡ್ಡ ಗಿಮಿಕ್‌. ಮುಖ್ಯಮಂತ್ರಿ ಬೊಮ್ಮಾಯಿ (CM Basavaraj Bommai), ಮಾಜಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ (BS Yediyurappa) ಅವರು ಕೇಂದ್ರದ ನಾಯಕರನ್ನು ಭೇಟಿ ಮಾಡಿ ಯೋಜನೆ ಜಾರಿಗೆ ಒತ್ತಡ ಹೇರಿದ್ದಾರೆ. ಶೀಘ್ರದಲ್ಲೇ ಮೇಕೆದಾಟು (Mekedatu) ಯೋಜನೆಗೆ ಅನುಮತಿಯೂ ಸಿಗಲಿದೆ. ಇದನ್ನು ಅರಿತ ಕಾಂಗ್ರೆಸ್‌ (Congress) ನಾಯಕರು ಈಗ ಪಾದಯಾತ್ರೆಯ ಗಿಮಿಕ್‌ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ಸಿಎಂ ಬದಲು - ಮಾಧ್ಯಮ ಸೃಷ್ಟಿ: ರಾಜ್ಯದಲ್ಲಿ ಮುಖ್ಯಮಂತ್ರಿಗಳ ಬದಲಾವಣೆ ವಿಚಾರ ಕೇವಲ ಮಾಧ್ಯಮ ಸೃಷ್ಟಿ. ಈಗಾಗಲೇ ಪಕ್ಷದ ರಾಜ್ಯಾಧ್ಯಕ್ಷರು ಸೇರಿ ರಾಷ್ಟ್ರ ನಾಯಕರೆಲ್ಲ ಬೊಮ್ಮಾಯಿಯವರೇ ಅವಧಿ ಪೂರೈಸುತ್ತಾರೆ ಎಂದು ಹೇಳಿದ್ದಾರೆ. ಖುದ್ದು ಗೃಹ ಸಚಿವ ಅಮಿತ್‌ ಶಾ ಅವರೇ ಮುಂದಿನ ಚುನಾವಣೆ ಬೊಮ್ಮಾಯಿ ನೇತೃತ್ವದಲ್ಲೇ ನಡೆಯಲಿದೆ ಎಂದಿದ್ದಾರೆ. ಹೀಗಿದ್ದರೂ ಮುಖ್ಯಮಂತ್ರಿ ಬದಲಾವಣೆ ಕುರಿತು ಚರ್ಚೆ ನಡೆಸುವುದು ಅಪ್ರಸ್ತುತ ಎಂದರು.

ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟ ಎಸ್‌ಟಿಎಸ್ :  ಮುಂಬರುವ ವಿಧಾನಸಭೆ ಚುನಾವಣೆಗೆ (Assembly Election) ಇನ್ನೂ ಒಂದು ವರ್ಷ ಬಾಕಿ ಇದೆ. ಆಗಲೇ ರಾಜಕೀಯ ನಾಯಕರುಗಳು ಭರ್ಜರಿ ತಯಾರಿಗಳು ನಡೆದಿವೆ. ಹೌದು...ಮಂದಿನ ರಾಜಕೀಯ (Politics) ಭವಿಷ್ಯಕ್ಕೆ ಕೆಲ ನಾಯಕರು ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಜಂಪ್ ಆಗುತ್ತಿದ್ದಾರೆ. ಅದರಲ್ಲೂ ಜೆಡಿಎಸ್ (JDS) ನಾಯಕರು ಸಾಲುಗಟ್ಟಿ ನಿಂತಿದ್ದಾರೆ. ಇನ್ನು ಇದರ ಮಧ್ಯೆ ಸಚಿವ ಎಸ್‌ಟಿ ಸೋಮಶೇಖರ್ ಅವರು ಕಾಂಗ್ರೆಸ್ ಸೇರುವ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದರು.

ಇಂದು(ಶುಕ್ರವಾರ) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಮಯವಿದೆ. ಕಾಂಗ್ರೆಸ್ (Congress) ಸೇರುವ ಬಗ್ಗೆ ಏನೂ ಯೋಚಿಸಿಲ್ಲ. ಸದ್ಯ ಬಿಜೆಪಿಯಲ್ಲಿ (BJP) ಇದ್ದೇನೆ ಎಂದು ಸ್ಪಷ್ಟಪಡಿಸಿದರು.

ಕಾಂಗ್ರೆಸ್ ಗೆ ವಾಪಸ್ಸಾಗುವ ವದಂತಿ ವಿಚಾರಕ್ಕೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಡಿ.ಕೆ ಶಿವಕುಮಾರ್ (DK Shivakumar) ನಮ್ಮ ಹಳೆಯ ಸ್ನೇಹಿತರು. ರಾಜಕೀಯವೇ ಬೇರೆ, ಸ್ನೇಹವೇ ಬೇರೆ. ಕೆಲವೊಮ್ಮೆ ಮುಖಾಮುಖಿಯಾದಾಗ‌ ಪರಸ್ಪರ ಕುಶಲೋಪರಿ ಮಾತನಾಡುತ್ತೇವೆ. ಸದ್ಯಕ್ಕೆ ನಾನು ಬಿಜೆಪಿ ತ್ಯಜಿಸಿ ಕಾಂಗ್ರೆಸ್ ಗೆ ವಾಪಸ್ಸಾಗುವ ಪ್ರಶ್ನೆಯೇ ಇಲ್ಲ ಎಂದಿದ್ದರು.

ನಾಯಕತ್ವ ಬದಲಾವಣೆ ವದಂತಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಲವರು ಆಗಾಗ್ಗೆ ಗೊಂದಲ ಸೃಷ್ಟಿಸುತ್ತಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆಯಾಗುವುದಿಲ್ಲ. ಮುಂದಿನ ಚುನಾವಣೆ ಅವರ ನೇತೃತ್ವದಲ್ಲೇ ನಡೆಯಲಿದೆ. ಈಗಾಗಲೇ ಅಮಿತ್ ಶಾ ಕೂಡ ಇದನ್ನ ಸ್ಪಷ್ಟವಾಗಿ ಹೇಳಿದ್ದಾರೆ ಎಂದು ತಿಳಿಸಿದ್ದರು.

ಕಾಂಗ್ರೆಸ್‌ನಿಂದ ಬಿಜೆಪಿಗೆ :  ಬೆಂಗಳೂರಿನ (Bengaluru) ಯಶವಂತಪುರ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಎಸ್‌ಟಿ ಸೋಮೇಶೇಖರ್ ಅವರು ಬಿಜೆಪಿ (BJP) ಸೇರಿದ್ದರು. ಬಳಿಕ ಉಪಚುನಾವಣೆ ಅಖಾಡಕ್ಕಿಳಿದು ಗೆಲುವು ಸಾಧಿಸಿದ್ದರು. 

ಬೊಮ್ಮಾಯಿ ಬದಲಾವಣೆಯಾಗುತ್ತಾ?
ಅನಾರೋಗ್ಯ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಚಿಕಿತ್ಸೆ ಪಡೆಯಲು ವಿದೇಶಕ್ಕೆ ತೆರಳುತ್ತಾರೆ. ಹೀಗಾಗಿ ” ಸಿಎಂ ಬದಲಾವಣೆ” ಗುಸು ಗುಸು ಶುರುವಾಗಿದೆ. ಒಂದು ವೇಳೆ ಬಸವರಾಜ ಬೊಮ್ಮಾಯಿ ಬದಲಾವಣೆ ಆಗಿದ್ದಲ್ಲಿ ಮುಂದಿನ ಸಿಎಂ ಯಾರು ಎನ್ನುವುದು ಮಾತ್ರ ತೀವ್ರ ಕುತೂಹಲ ಮೂಡಿಸಿದೆ.

ಒಂದು ಕಡೆ ಸಚಿವ ಮುರುಗೇಶ್ ನಿರಾಣಿ ಹೆಸರು ಕೇಳಿಬರುತ್ತಿದ್ದರೆ, ಮತ್ತೊಂದು ಗುಂಪಿನಿಂದ ಈಗಾಗಲೇ ಒಂದು ಬಾರಿ ಮುಖ್ಯಮಂತ್ರಿಯಾಗಿರುವ ಜಗದೀಶ್ ಶೆಟ್ಟರ್ ಹೆಸರು ಚಾಲ್ತಿಯಲ್ಲಿದೆ.

ಒಟ್ಟಿನಲ್ಲಿ ಬೆಳಗಾವಿ ಚಳಿಗಾಲದ ಅಧಿವೇಶ ಮುಗಿಯುತ್ತಿದ್ದಂತೆಯೇ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗಳು ಆಗುವ ಲಕ್ಷಣಗಳು ಕಾಣುತ್ತಿವೆ, ಅದರಲ್ಲೂ ಆಡಳಿತ ಪಕ್ಷ ಬಿಜೆಪಿಯಲ್ಲಿ ಮಹತ್ವದ ಬದಲಾವಣೆಗಳಾಗುವ ಸಾಧ್ಯತೆಗಳಿ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಅರಸು ಆಳ್ವಿಕೆ ದಾಖಲೆ ಮುರಿಯೋವರೆಗೂ ಸಿದ್ದು ಸಿಎಂ ಕುರ್ಚಿ ಗಡದ್ದು; ಪುತ್ರನ ಹೇಳಿಕೆಯಿಂದ ಮತ್ತೆ ಮಾಡ್ತಿದೆ ಸದ್ದು!
ಬೆಳಗಾವಿ ಸುವರ್ಣ ಸೌಧ ಮುತ್ತಿಗೆಗೆ ಬಿಜೆಪಿ ಯತ್ನ; ವಿಜಯೇಂದ್ರ, ಅಶೋಕ ಸೇರಿ 50ಕ್ಕೂ ಅಧಿಕ ನಾಯಕರು ವಶಕ್ಕೆ