ಕೋಲಾರದಲ್ಲಿ ಸಿದ್ದು ಸ್ಪರ್ಧೆ ಕ್ಯಾನ್ಸಲ್‌: ಅಖಾಡಕ್ಕೆ ಎಂಟ್ರಿ ಕೊಟ್ಟ ಡಿಕೆಶಿ, ಮತ್ತೊಂದು ಮಾಸ್ಟರ್‌ ಪ್ಲಾನ್‌ ರೆಡಿ..!

Published : Mar 19, 2023, 08:59 AM ISTUpdated : Mar 19, 2023, 11:47 AM IST
ಕೋಲಾರದಲ್ಲಿ ಸಿದ್ದು ಸ್ಪರ್ಧೆ ಕ್ಯಾನ್ಸಲ್‌: ಅಖಾಡಕ್ಕೆ ಎಂಟ್ರಿ ಕೊಟ್ಟ ಡಿಕೆಶಿ, ಮತ್ತೊಂದು ಮಾಸ್ಟರ್‌ ಪ್ಲಾನ್‌ ರೆಡಿ..!

ಸಾರಾಂಶ

ಡಿಸಿಸಿ ಬ್ಯಾಂಕ್ ಮೂಲಕ ಸ್ವ ಸಹಾಯ ಹಾಗೂ ಸ್ತ್ರೀ ಶಕ್ತಿಗಳಿಗೆ ಸಾಲ ನೀಡುವ ಮೂಲಕ ಬ್ಯಾಲಹಳ್ಳಿ ಗೋವಿಂದಗೌಡ ಅವರು ಭಾರೀ ಜನಮನ್ನಣೆ ಗಳಿಸಿದ್ದಾರೆ. ಒಕ್ಕಲಿಗ ಸಮುದಾಯದ ನಾಯಕ ಬ್ಯಾಲಹಳ್ಳಿ ಗೋವಿಂದಗೌಡ ತಮ್ಮದೇ ಓಟ್‌ ಬ್ಯಾಂಕ್ ಹೊಂದಿದ್ದಾರೆ. 

ಕೋಲಾರ(ಮಾ.19):  ಕೋಲಾರದಲ್ಲಿ ಸಿದ್ದರಾಮಯ್ಯ ಸ್ಪರ್ಧೆ ಕ್ಯಾನ್ಸಲ್‌ ಆದ ಹಿನ್ನೆಲೆಯಲ್ಲಿ ಮತ್ತೊಬ್ಬ ಸೂಕ್ತ ಅಭ್ಯರ್ಥಿಗಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಹೌದು, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡಗೆ ಅವರಿಗೆ ಡಿ.ಕೆ ಶಿವಕುಮಾರ್ ಕರೆ ಮಾಡಿದ್ದು ಚುನಾವಣೆಗೆ ತಯಾರಾಗುವಂತೆ ಸೂಚನೆ ನೀಡಿದ್ದಾರೆ ಅಂತ ತಿಳಿದು ಬಂದಿದೆ. 

ಹೀಗಾಗಿ ಕೋಲಾರದಲ್ಲಿ ಡಿ.ಕೆ ಶಿವಕುಮಾರ್ ನಡೆ ಭಾರೀ ಕುತೂಹಲ ಮೂಡಿಸಿದೆ. ಸಿದ್ದರಾಮಯ್ಯ ಹಾಗೂ ಕೆ.ಎಚ್ ಮುನಿಯಪ್ಪರನ್ನು ಡಿ.ಕೆ ಶಿವಕುಮಾರ್‌ ಓವರ್ ಟೇಕ್ ಮಾಡಿದ್ದಾರೆ. ಸಿದ್ದು ಸ್ಪರ್ಧೆ ಘೋಷಣೆಗೂ ಮುನ್ನವೇ ಕೋಲಾರದ ಟಿಕೆಟ್‌ಗಾಗಿ ಬ್ಯಾಲಹಳ್ಳಿ ಗೋವಿಂದಗೌಡ ಅರ್ಜಿ ಹಾಕಿದ್ದರು.  ಸಿದ್ದು ಸ್ಪರ್ಧೆ ಘೋಷಣೆ ಬಳಿಕ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟದಲ್ಲಿ ಕಾಂಗ್ರೆಸ್ ಟಿಕೆಟ್‌ಗಾಗಿ ಬ್ಯಾಲಹಳ್ಳಿ ಗೋವಿಂದಗೌಡ ಓಡಾಟ ನಡೆಸಿದ್ದರು. 

ಕೋಲಾರದ ಸ್ಪರ್ಧೆ ಗೊಂದಲ: ಸಿದ್ದರಾಮಯ್ಯ ಇಮೇಜ್‌ಗೆ ಧಕ್ಕೆ

ಡಿಸಿಸಿ ಬ್ಯಾಂಕ್ ಮೂಲಕ ಸ್ವ ಸಹಾಯ ಹಾಗೂ ಸ್ತ್ರೀ ಶಕ್ತಿಗಳಿಗೆ ಸಾಲ ನೀಡುವ ಮೂಲಕ ಬ್ಯಾಲಹಳ್ಳಿ ಗೋವಿಂದಗೌಡ ಅವರು ಭಾರೀ ಜನಮನ್ನಣೆ ಗಳಿಸಿದ್ದಾರೆ. ಒಕ್ಕಲಿಗ ಸಮುದಾಯದ ನಾಯಕ ಬ್ಯಾಲಹಳ್ಳಿ ಗೋವಿಂದಗೌಡ ತಮ್ಮದೇ ಓಟ್‌ ಬ್ಯಾಂಕ್ ಹೊಂದಿದ್ದಾರೆ. ಬ್ಯಾಲಹಳ್ಳಿ ಗೋವಿಂದಗೌಡ ಅವರು ಸಿದ್ದರಾಮಯ್ಯ ಜೊತೆಯಲ್ಲೂ ಉತ್ತಮ ಬಾಂಧವ್ಯ ಹೊಂದಿದ್ದಾರೆ. ಹೀಗಾಗಿ ಇವರನ್ನ ಕೋಲಾರದಲ್ಲಿ ಕಣಕ್ಕಿಳಿಸಿದರೆ ಗೆಲ್ಲಬಹುದು ಅನ್ನೋದು ಡಿಕೆಶಿ ಲೆಕ್ಕಾಚಾರವಾಗಿದೆ. ಶತಾಯ ಗತಾಯ ಮಾಡಿಯಾದರೂ ಕೋಲಾರದಲ್ಲಿ ಕಾಂಗ್ರೆಸ್‌ ಗೆಲ್ಲಿಸಲು ಡಿಕೆಶಿ ಮಾಸ್ಟರ್‌ ಪ್ಲಾನ್‌ ಮಾಡಿದ್ದಾರೆ ಅಂತ ಹೇಳಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!