Karnataka Rains: ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ, ವ್ಯಂಗ್ಯವಾಡಿದ ಡಿಕೆ ಶಿವಕುಮಾರ್

Published : Nov 23, 2021, 11:00 PM IST
Karnataka Rains: ಮಳೆಹಾನಿ ಪ್ರದೇಶಗಳಿಗೆ ಸಿಎಂ ಭೇಟಿ, ವ್ಯಂಗ್ಯವಾಡಿದ ಡಿಕೆ ಶಿವಕುಮಾರ್

ಸಾರಾಂಶ

* ಬೆಂಗಳೂರಿನ ಹಲವು ಪ್ರದೇಶಗಳಿಗೆ ಸಿಎಂ ಭೇಟಿ * ಸಿಎಂ ಬೊಮ್ಮಾಯಿ ಭೇಟಿಗೆ ಡಿಕೆ ಶಿವಕುಮಾರ್ ವ್ಯಂಗ್ಯ * ವಿಧಾನಪರಿಷತ್ ಚುನಾವಣೆ ಬಗ್ಗೆಯೂ ಡಿಕೆಶಿ ಮಾತು

ಬೆಂಗಳೂರು, (ನ.23): ಕಳೆದೊಂದು ವಾರದಿಂದ ಸುರಿದ ಮಳೆಯಿಂದಾಗಿ (Rain) ಬೆಂಗಳೂರಿನ ಹಲವೆಡೆ ನೀರು ನುಗ್ಗಿ ಭಾರೀ ನಷ್ಟ ಸಂಭವಿಸಿದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಇಂದು (ಮಂಗಳವಾರ) ಬೆಂಗಳೂರಿನ (Bengaluru) ಹಲವು ಪ್ರದೇಶಗಳಿಗೆ ಭೇಟಿ ನೀಡಿದರು.

 ತೊಂದರೆಗೊಳಗಾಗಿರುವ ಕೇಂದ್ರೀಯ ಅಪಾರ್ಟ್ಮೆಂಟ್ ನಿವಾಸಿಗಳೊಂದಿಗೆ ಜೀಪಿನಲ್ಲಿ ನಿಂತುಕೊಂಡೇ ಮಾತುಕತೆ ನಡೆಸಿ ಸಮಸ್ಯೆಯನ್ನು ನಿವಾರಿಸುವ ಭರವಸೆಯನ್ನು ನೀಡಿದರು.

Karnataka Rain| ಮನೆಗಳಿಗೆ ನೀರು ನುಗ್ಗಿದ್ದರೆ ತಕ್ಷಣ 10 ಸಾವಿರ ಪರಿಹಾರ

ಇನ್ನ ಮಳೆ ಹಾನಿ ಪ್ರದೇಶಗಳಿಗೆ ಮುಖ್ಯಮಂತ್ರಿ ಭೇಟಿ ಒಂದು ರಾಜಕೀಯ ಎಂದು ನಗರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ (DK Shivakumar) ವ್ಯಂಗ್ಯವಾಡಿದರು.

 ಕಳೆದ ಬಾರಿಯ ಹಾನಿಗೆ ಈವರೆಗೂ ಪರಿಹಾರ ನೀಡಿಲ್ಲ. ಕೊರೋನಾಗೆ (Coronavirus) ಬಲಿಯಾದವರ ಕುಟುಂಬಕ್ಕೂ ಪರಿಹಾರ ಕೊಟ್ಟಿಲ್ಲ. ಮೊದಲು ಆ ಬಗ್ಗೆ ದಾಖಲೆ ಬಿಡುಗಡೆ ಮಾಡಲಿ ಎಂದು ಆಗ್ರಹಿಸಿದರು. 

ವಿಧಾನ ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಕುಟುಂಬ ರಾಜಕೀಯಕ್ಕೆ ಮಣೆ ಹಾಕಿದ ಎಂಬ ಬಿಜೆಪಿ ನಾಯಕರ ಆರೋಪದ ಕುರಿತು ಪ್ರತಿಕ್ರಿಯಿಸಿದ ಅವರು ನಮ್ಮ ಬಗ್ಗೆ ಆರೋಪ ಮಾಡುವ ಮೊದಲು ಬಿಜೆಪಿ ಸದಸ್ಯರನ್ನು ನೋಡಲಿ. ಧಾರವಾಡದಲ್ಲಿ ಯಾರಿಗೆ ಟಿಕೆಟ್ ಕೊಟ್ಟಿದ್ದಾರೆ? ಬೇರೆ ಕಡೆ ಯಾರಿಗೆ ಕೊಟ್ಟಿದ್ದಾರೆ ಅಂತಲೂ ನೋಡಿಕೊಳ್ಳಲಿ. ಅವರ ಪಟ್ಟಿಗೆ ಅವರೇ ಕನ್ನಡಿ ಹಿಡಿದುಕೊಳ್ಳಲಿ ಎಂದು ತಿರುಗೇಟು ನೀಡಿದರು.

ಕಾಂಗ್ರೆಸ್ ಪಕ್ಷ ಮೊದಲಿನಿಂದ ಈ ಸೀಟ್ ಗೆದ್ದುಕೊಂಡು ಬಂದಿದೆ. ಈಗಲೂ ಈ ಕ್ಷೇತ್ರ ಗೆದ್ದುಕೊಳ್ಳುತ್ತೇವೆ. ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಈ ಬಾರಿ ಗ್ರಾಮ ಪಂಚಾಯತಿ ಸದಸ್ಯರು ಮಾತ್ರ ಮತ ಹಾಕುತ್ತಾರೆ. ಕೆಲವು ಕಾರ್ಯಕರ್ತರು ಕೂಡ ನಾಮಿನೇಶನ್ ಹಾಕಿದ್ದಾರೆ. ಕಾನೂನು ಸಲಹೆ ಪಡೆದು ಅವರನ್ನು ವಾಪಸ್ಸು ತೆಗೆಸುವ ಕೆಲಸ ಮಾಡುತ್ತೇನೆ ಎಂದರು.

ಬೆಳಗಾವಿಯಲ್ಲಿ ಬಿಜೆಪಿ ಇಬ್ಬರು ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ನಾವು ಒಬ್ಬ ಅಭ್ಯರ್ಥಿಯನ್ನು ಬೆಳಗಾವಿಯಲ್ಲಿ ನಿಲ್ಲಿಸಿದ್ದೇವೆ. ಬಿಜೆಪಿಯವರು ಎಷ್ಟು ಮಂದಿಯನ್ನು ಬೇಕಾದರೂ ಹಾಕಲಿ. ಇಬ್ಬರಾದರೂ ಸರಿ, ನಾಲ್ವರಾದರೂ ಸರಿ. ಅದಕ್ಕೂ ನಮಗೂ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು. 

ವಿವೇಕ್ ರಾವ್ ಪಾಟೀಲ್ ಕಾಂಗ್ರೆಸ್​ನಲ್ಲಿ ಇರಲಿಲ್ಲ. ಕಾಂಗ್ರೆಸ್​ನಲ್ಲಿ ಅರ್ಜಿ ಹಾಕಿದ್ರು. ಕಾಂಗ್ರೆಸ್ ಸದಸ್ಯ ಆಗ್ತೇನೆ ಅಂತ ಬಂದಿದ್ರು. ಮೊದಲಿನಿಂದ ಪಾಟೀಲ್ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ನಾಯಕ ಯಡಿಯೂರಪ್ಪ ಹೇಳಿಕೆಗಳನ್ನು ಗಮನಿಸಿದ್ದೇನೆ. ಬಿಜೆಪಿಯು ಅಶಿಸ್ತಿಗೆ ಗೌರವ ಕೊಡುತ್ತದೆ ಅಂದರೆ ಕೊಟ್ಟುಕೊಳ್ಳಲಿ. ನಮ್ಮ ‌ಪಕ್ಷದಿಂದ ಒಬ್ಬ ಅಭ್ಯರ್ಥಿ ಮಾತ್ರವೇ ಇರುತ್ತಾರೆ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿಂಹಾಸನ ಸಂಗ್ರಾಮದಲ್ಲಿ ಡಿಕೆ ಶಿವಕುಮಾರ್ 'ಸ್ನೇಹವ್ಯೂಹ': ಸಿದ್ದು ಸಿಪಾಯಿಗಳನ್ನೇ ಸೆಳೆಯುವ ಬಂಡೆಯ ಹೊಸ ದಾಳ!
'ಏಯ್, ಹಾಗೆಲ್ಲಾ ನಾಟಿ ಕೋಳಿ ಬಿಡಬಾರದು, ಏನೂ ಆಗೊಲ್ಲ ತಿನ್ನಬೇಕು': ಆರ್. ಅಶೋಕ್‌ಗೆ ಸಿದ್ದರಾಮಯ್ಯ ಕಿವಿಮಾತು!