
ವರದಿ: ಕಿರಣ್ಎಲ್ ತೊಡರನಾಳ್ ಏಷ್ಯಾನೆಟ್ ಸುವರ್ಣ ನ್ಯೂಸ್
ಚಿತ್ರದುರ್ಗ (ನ.4): ಕಾಂಗ್ರೆಸ್ ಪಕ್ಷಕ್ಕೆ ಮುಂಬರುವ ವಿಧಾಸಭಾ ಚುನಾವಣೆಗೆ ಅಭ್ಯರ್ಥಿಗಳು ಸಿಗುತ್ತಿಲ್ಲ ಹಾಗಾಗಿ ಮತ್ತೆ ನಮಗೆ ಪುನಃ ಪಕ್ಷ ಸೇರುವಂತೆ ಡಿ.ಕೆ.ಶಿವಕುಮಾರ್ ಅರ್ಜಿ ಹಾಕುತ್ತಿದ್ದಾರೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ಟಾಂಗ್ ನೀಡಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷದಲ್ಲಿರುವ ಉಳಿದವರಿಗೆ ಅರ್ಜಿ ಹಾಕಲು ಹೇಳಿರುವ ಡಿ.ಕೆ.ಶಿವಕುಮಾರ್ ಅವರೇ ನಮಗೆ ಅರ್ಜಿ ಹಾಕುತ್ತಿದ್ದಾರೆ. ಆದರೆ ಪುನಃ ಕಾಂಗ್ರೆಸ್ ಪಕ್ಷಕ್ಕೆ ಮರಳುವ ಅವಶ್ಯಕತೆ ನಮಗೆ ಇಲ್ಲ ಎಂದು ಹೇಳಿದರು. ನಿನ್ನೆ ಸಚಿವ ಸೋಮಶೇಖರ್ ಶಿವರಾಮ್ ಹೆಬ್ಬಾರ್ ನಾನು ಜತೆಗಿದ್ದೆವು. ನಾನು ಸೇರಿದಂತೆ ಯಾರೊಬ್ಬರು ಕೂಡ ಕಾಂಗ್ರೆಸ್ ಸೇರುವ ಪ್ರಶ್ನೆಯೇ ಇಲ್ಲ. ನಾವು ಈಗಾಗಲೇ ಬಿಜೆಪಿಗೆ ಬಂದಾಗಿದೆ. ಬಿಜೆಪಿಯಲ್ಲೇ ಉಳಿಯುತ್ತೇವೆ ಎಂದು ಹೇಳಿದ ಅವರು, 2023ರಲ್ಲಿ 150ಕ್ಕೂ ಹೆಚ್ಚು ಸ್ಥಾನ ಗೆದ್ದು ಮತ್ತೇ ಅಧಿಕಾರಕ್ಕೆ ಬರುತ್ತೇವೆ ಎಂದು ಭವಿಷ್ಯ ನುಡಿದರು. ರಾಜ್ಯ, ರಾಷ್ಟ್ರಮಟ್ಟದಲ್ಲಿ ಈಗಾಗಲೇ ಸರ್ವೇ ಕಾರ್ಯ ನಡೆಯುತ್ತಿದ್ದು, ಯಾರು ಗೆಲುವು ಸಾಧಿಸಬಲ್ಲರು ಅಂಥವರಿಗೆ ಟಿಕೆಟ್ ನೀಡಲಾಗುತ್ತದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಿದರು. ಶಾಸಕ ರೇಣುಕಾಚಾರ್ಯ ತಮ್ಮನ ಪುತ್ರನ ಸಾವು ದುರ್ಧೈವದ ಸಂಗತಿ. ನಾನು ಕೂಡ ರೇಣುಕಾಚಾರ್ಯ ಮತ್ತು ಕುಟುಂಬದ ಜತೆ ಮಾತನಾಡಿದ್ದು, ಸಾವಿನ ಬಗ್ಗೆ ಅನುಮಾನವಿದೆ ಎಂದಿದ್ದಾರೆ. ತನಿಖೆ ನಡೆಯುವುದು ಬೇರೆ ಮಾತು, ಹೋದಜೀವ ಮತ್ತೆ ಬರುವುದಿಲ್ಲ.
ಇದೊಂದು ನೋವಿನ ಸಂಗತಿ, ಈ ದುರ್ಘಟನೆ ನಡೆಯಬಾರದಿತ್ತು ಎಂದು ವಿಷಾದ ವ್ಯಕ್ತಪಡಿಸಿದರು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಉತ್ತಮ ಸ್ಥಿತಿಯಲ್ಲಿದೆ. ದುಷ್ಕರ್ಮಿಗಳು ಎಲ್ಲಾ ಕಡೆ ಇರುತ್ತಾರೆ. ಕೊಲೆ, ಅಪಘಾತ ಅಥವಾ ಆತ್ಮಹತ್ಯೆಯೋ ಎಂಬುದು ತನಿಖೆ ಬಳಿಕ ತಿಳಿದು ಬರಬೇಕಿದೆ ಎಂದು ಸಚಿವ ಬಿ.ಸಿ.ಪಾಟೀಲ್ ಹೇಳಿದರು.
ಕಾಂಗ್ರೆಸ್‌ಗೆ ಹೋಗಲ್ಲ: ಡಿಕೆಶಿಗೆ ಮೂರು ಸಚಿವರ ತಿರುಗೇಟು
ಎಂಟಿಬಿ ಕೂಡ ಸ್ಪಷ್ಟನೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಬರುವವರಿಗೆ ಮುಕ್ತ ಆಹ್ವಾನ ನೀಡಿದ್ದಾರೆ. ಆದರೆ ನಾನು ಬಿಜೆಪಿಯಲ್ಲೇ ಇದ್ದೇನೆ, ಮುಂದೆಯೂ ಇಲ್ಲೆ ಇರ್ತೇನೆ. ಕಾಂಗ್ರೆಸ್‌ಗೆ ಹೋಗುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂಟಿಬಿ ನಾಗರಾಜ್ ಸ್ಪಷ್ಟಪಡಿಸಿದರು.
ತಾಕತ್ತಿದ್ದರೆ ಬಾದಾಮಿಯಿಂದಲೇ ಸ್ಪರ್ಧಿಸಿ: ಸಿದ್ದುಗೆ ರಾಮುಲು ಸವಾಲು
ತಾಲೂಕಿನ ಅನುಗೊಂಡನಹಳ್ಳಿ ಹೋಬಳಿ ಮುತ್ಸಂದ್ರ ಗ್ರಾಪಂ ನೂತನ ಸದಸ್ಯರಿಂದ ಅಭಿನಂದನೆ ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಸಮೀಪವಿರುವ ಕಾರಣ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅವರು ಪಕ್ಷಕ್ಕೆ ಬರುವ ಎಲ್ಲರನ್ನೂ ಸ್ವಾಗತಿಸಿದ್ದಾರೆ. ಆದರೆ ನಾನು ಈಗಾಗಲೆ ಕಾಂಗ್ರೆಸ್ ಪಕ್ಷ ಬಿಟ್ಟು ಬಿಜೆಪಿಗೆ ಬಂದು ಮಂತ್ರಿ ಸಹ ಆಗಿದ್ದೇನೆ. ಪದೇಪದೇ ಪಕ್ಷ ಬದಲಾವಣೆ ಮಾಡುವ ಜಾಯಮಾನ ನನ್ನದಲ್ಲ. ನಾನೇನಿದ್ದರೂ ಇನ್ನು ಬಿಜೆಪಿ ಪಕ್ಷದಲ್ಲೆ ಇರ್ತೇನೆ ಎಂದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.