ಪ್ರವಾಹ ಪ್ರದೇಶಕ್ಕೆ ಸಚಿವರ ಕಾಟಾಚಾರದ ಭೇಟಿ: ಡಿಕೆಶಿ

By Govindaraj SFirst Published Jul 13, 2022, 5:15 AM IST
Highlights

ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರದ ಸಚಿವರು, ಶಾಸಕರು ಹಾಗೂ ನಾಯಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ಜು.13): ಪ್ರವಾಹ ಪೀಡಿತ ಪ್ರದೇಶಗಳಿಗೆ ಸರ್ಕಾರದ ಸಚಿವರು, ಶಾಸಕರು ಹಾಗೂ ನಾಯಕರು ನೆಪ ಮಾತ್ರಕ್ಕೆ ಭೇಟಿ ನೀಡುತ್ತಿದ್ದಾರೆಯೇ ಹೊರತು ಸಂಕಷ್ಟದಲ್ಲಿರುವ ಜನರಿಗೆ ಸಹಾಯ ಮಾಡುವ ಉದ್ದೇಶದಿಂದಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಹಲವು ದಿನದಿಂದ ತೀವ್ರ ಮಳೆಯಿಂದಾಗಿ ಜನರು ಸಂಕಷ್ಟಅನುಭವಿಸುತ್ತಿದ್ದಾರೆ. ಹೀಗಿದ್ದರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಹೋಗುವಂತೆ ಮುಖ್ಯಮಂತ್ರಿಗಳು ಮಂತ್ರಿಗಳ ಬಳಿ ಮನವಿ ಮಾಡಿಕೊಳ್ಳುವ ಸ್ಥಿತಿ ನಿರ್ಮಾಣವಾಗಿದೆ. 

ಯಾವುದೇ ಮಂತ್ರಿಗಳು ತಮ್ಮ ಜವಾಬ್ದಾರಿಗೆ ಅನುಗುಣವಾಗಿ ಕೆಲಸ ಮಾಡುತ್ತಿಲ್ಲ’ ಎಂದು ಕಿಡಿಕಾರಿದರು. ‘ಕೊಡಗು, ದಕ್ಷಿಣ ಕನ್ನಡ ಭಾಗದ ಸ್ಥಿತಿ ಶೋಚನೀಯವಾಗಿದೆ. ಯಾರೊಬ್ಬರಿಗೂ ಈ ಸರ್ಕಾರ ನೆರವು ನೀಡಿಲ್ಲ. ಅಧಿಕಾರಿಗಳು ಕೂಡ ಯಾವುದೇ ಕೆಲಸ ಮಾಡಿಲ್ಲ. ನೆಪ ಮಾತ್ರಕ್ಕೆ ಬೆರಳೆಣಿಕೆ ಮನೆಗಳಿಗೆ ಭೇಟಿ ನೀಡುತ್ತಿದ್ದಾರೆ. ಜನರಿಗೆ ಸಹಾಯ ಮಾಡುವ ಯಾವುದೇ ಉದ್ದೇಶದಿಂದ ಈ ಸರ್ಕಾರ ಕೆಲಸ ಮಾಡುತ್ತಿಲ್ಲ. ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡ ಬಳಿಕ ಫೋಟೋಗಳಿಗೆ ಪೋಸು ನೀಡಿ ಪ್ರಚಾರ ಪಡೆಯಲಷ್ಟೇ ಹೋಗುತ್ತಿದ್ದಾರೆ. ಇವರಿಂದ ಜನರ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ’ ಎಂದು ಹೇಳಿದರು.

Latest Videos

ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ಮೇಲೆ ನಿರುದ್ಯೋಗಿಗಳನ್ನು ಹುಡುಕಿ ಉದ್ಯೋಗ: ಡಿಕೆಶಿ ಘೋಷಣೆ

ಕಾಂಗ್ರೆಸ್‌ ಸ್ವಾತಂತ್ರ್ಯ ನಡಿಗೆಗೆ 1 ಲಕ್ಷ ಜನ: ‘ಬೆಂಗಳೂರು ನಗರದಲ್ಲಿ ಆಗಸ್ಟ್‌ 15 ರಂದು ಹಮ್ಮಿಕೊಂಡಿರುವ ‘ಸ್ವಾತಂತ್ರ್ಯ ನಡಿಗೆ’ ಕಾರ್ಯಕ್ರಮದಲ್ಲಿ 1 ಲಕ್ಷ ಮಂದಿ ಭಾಗವಹಿಸುವಂತೆ ಮಾಡಿ ರಾಷ್ಟ್ರೀಯ ದಾಖಲೆ ನಿರ್ಮಿಸಬೇಕು. ಇದಕ್ಕಾಗಿ ಮುಂದಿನ 1 ತಿಂಗಳ ಅವಧಿಯಲ್ಲಿ 70-80 ಕ್ಷೇತ್ರಗಳಲ್ಲಿ ಪ್ರವಾಸ ಮಾಡಲಿದ್ದೇನೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಅರಮನೆ ಮೈದಾನದಲ್ಲಿ ಸೋಮವಾರ ನಡೆದ ‘ಯುವ ಧ್ವನಿ’ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ದೇಶದ 75ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಆ.15 ರಂದು ಬೆಂಗಳೂರಿನಲ್ಲಿ ಸ್ವಾತಂತ್ರ್ಯ ನಡಿಗೆ ಹಮ್ಮಿಕೊಳ್ಳಲಾಗಿದೆ. 

ಸಿದ್ದು 75ನೇ ಜನ್ಮದಿನ ಕಾಂಗ್ರೆಸ್‌ ಪಕ್ಷದಿಂದಲೇ ಆಚರಣೆ: ಡಿಕೆಶಿ

ಕನಿಷ್ಠ 1 ಲಕ್ಷ ಜನರು ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜದೊಂದಿಗೆ ಹೆಜ್ಜೆ ಹಾಕಬೇಕು. ಇದಕ್ಕಾಗಿ ದೂರದ ಜಿಲ್ಲೆಗಳ ಪ್ರತಿ ವಿಧಾನಸಭಾ ಕ್ಷೇತ್ರದಿಂದ 500 ರಿಂದ 1 ಸಾವಿರ ಜನರು ಹಾಗೂ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳ ಪ್ರತಿ ಕ್ಷೇತ್ರದಿಂದ 3 ಸಾವಿರ ಜನ ಭಾಗವಹಿಸಬೇಕು’ ಎಂದು ಕರೆ ನೀಡಿದರು. ‘ಈ ಕಾರ್ಯಕ್ರಮ ಯಶಸ್ವಿಗೊಳಿಸಲು ಮುಂದಿನ ಒಂದು ತಿಂಗಳ ಅವಧಿಯಲ್ಲಿ ನಾನು 70-80 ಕ್ಷೇತ್ರಗಳ ಪ್ರವಾಸ ಮಾಡುತ್ತೇನೆ. ಅಲ್ಲದೆ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ವಿರೋಧ ಪಕ್ಷದ ನಾಯಕರು ಹಾಗೂ ಇತರೆ ನಾಯಕರು ಕೂಡ ಪ್ರವಾಸ ಮಾಡುವಂತೆ ಮನವಿ ಮಾಡುತ್ತೇನೆ’ ಎಂದು ಹೇಳಿದರು.

click me!