ಉಪಚುನಾವಣೆಗಳಿಗೆ ಅಭ್ಯರ್ಥಿಗಳ ಪಟ್ಟಿ ರೆಡಿ: ಸಭೆ ಬಳಿಕ ಡಿಕೆಶಿ ಪ್ರತಿಕ್ರಿಯೆ

By Suvarna News  |  First Published Jan 9, 2021, 7:25 PM IST

ಮುಂಬರುವ ಉಪಚುನಾವಣೆಗಳಿಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ ನಡೆಸಿದ್ದು, ಕೆಪಿಸಿಸಿ ಕಚೇರಿಯಲ್ಲಿ ಸಭೆ ಮಾಡಿದೆ. ಇನ್ನು ಈ ಬಗ್ಗೆ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.


ಬೆಂಗಳೂರು, (ಜ.09): ಬೆಳಗಾವಿ, ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ರೆಡಿಯಾಗಿದ್ದು, ಇಂದು (ಶನಿವಾ) ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ತಯಾರು ಮಾಡಿದೆ.

ಈ ಬಗ್ಗೆ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯ ಕಾಂಗ್ರೆಸ್‌ನ ಹಿರಿಯ ನಾಯಕರುಗಳೆಲ್ಲರು ಅಭ್ಯರ್ಥಿಗಳ ಆಯ್ಕೆ ಸಂಬಂಧ ಸುದೀರ್ಘ ಚರ್ಚೆ ನಡೆಸಿದರು. ಈ ವೇಳೆ ಬೆಳಗಾವಿ, ಬಸವಕಲ್ಯಾಣ ಹಾಗೂ ಮಸ್ಕಿ ಕ್ಷೇತ್ರಗಳಿಗೆ ಅಭ್ಯರ್ಥಿ ಹೆಸರುಗಳನ್ನು ಸಹ ಫೈನಲ್ ಮಾಡಿದ್ದಾರೆ..

Latest Videos

undefined

ಬೆಳಗಾವಿ, ಬಸವಕಲ್ಯಾಣ, ಮಸ್ಕಿ ಬೈ ಎಲೆಕ್ಷನ್: ಅಭ್ಯರ್ಥಿಗಳ ಪಟ್ಟಿ ಮಾಡಿದ ಕಾಂಗ್ರೆಸ್

ಇನ್ನು ಕೆಪಿಸಿಸಿ ಕಚೇರಿಯಲ್ಲಿ ಮುಖಂಡರ ಜತೆ ಸಮಾಲೋಚನೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಬೆಳಗಾವಿ ಲೋಕಸಭಾ ಕ್ಷೇತ್ರ, ಬಸವಕಲ್ಯಾಣ ಹಾಗೂ ಮಸ್ಕಿ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಗೆ ರಾಜ್ಯದಿಂದ ನಾವು ಹೆಸರುಗಳನ್ನು ಶಿಫಾರಸು ಮಾಡಲಿದ್ದು, ಅಂತಿಮ ತೀರ್ಮಾನ ಹೈ ಕಮಾಂಡ್ ತೆಗೆದುಕೊಳ್ಳಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದರು.

ಬೆಳಗಾವಿ,ಬಸವ ಕಲ್ಯಾಣ ಉಪ ಚುನಾವಣೆಗೆ ಸಂಬಂಧಿಸಿದಂತೆ ಈ ಭಾಗದ ಮುಖಂಡರ ಸಭೆ ಕರೆದು, ಅವರ ಅಭಿಪ್ರಾಯ ಪಡೆದಿದ್ದೇವೆ. ಅನೇಕ ಸಲಹೆಗಳು ಬಂದಿರುವುದಾಗಿ ಹೇಳಿದರು.

ತಾನು ಹುಬ್ಬಳ್ಳಿಗೆ ಹೋಗಿ ಬಂದ ಮೇಲೆ ಮಸ್ಕಿ ಸೇರಿದಂತೆ ಮೂರು ಕ್ಷೇತ್ರದ ಅಭ್ಯರ್ಥಿಗಳ ಶಿಫಾರಸ್ಸನ್ನು ದೆಹಲಿಗೆ ಕಳುಹಿಸಿಕೊಡುತ್ತೇವೆ. ಯಾರಿಗೆ ಟಿಕೆಟ್ ನೀಡಬೇಕು ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ತಿಳಿಸಿದರು.

click me!