ಸುಳ್ಳು ಹೇಳುವ ಅಗತ್ಯ ನನಗಿಲ್ಲ, ಮನಗೂಳಿ ಭೇಟಿ ನಿಜ: ಡಿಕೆಶಿ

By Kannadaprabha NewsFirst Published Oct 10, 2021, 9:45 AM IST
Highlights
  • ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೈಜಾಕ್‌ ಮಾಡುವ ಅಗತ್ಯ ನಮಗಿಲ್ಲ
  • ನಮ್ಮ ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ. ಎಂ.ಸಿ. ಮನಗೂಳಿ ಅವರು ನನ್ನನ್ನು ಭೇಟಿ ಮಾಡಿ ಪುತ್ರನನ್ನು ಕಾಂಗ್ರೆಸ್‌ಗೆ ಸೇರಿಸಿಕೊಳ್ಳುವಂತೆ ಹೇಳಿದ್ದು ಸತ್ಯ 

 ಬೆಂಗಳೂರು (ಅ.10):  ಯಾವುದೇ ಕ್ಷೇತ್ರದಲ್ಲಿ ಅಭ್ಯರ್ಥಿ ಹೈಜಾಕ್‌ ಮಾಡುವ ಅಗತ್ಯ ನಮಗಿಲ್ಲ. ನಮ್ಮ ಪಕ್ಷಕ್ಕೆ ಬರುವವರನ್ನು ಬೇಡ ಎನ್ನುವುದಿಲ್ಲ. ಎಂ.ಸಿ. ಮನಗೂಳಿ (MC Managauli) ಅವರು ನನ್ನನ್ನು ಭೇಟಿ ಮಾಡಿ ಪುತ್ರನನ್ನು ಕಾಂಗ್ರೆಸ್‌ಗೆ (Congress) ಸೇರಿಸಿಕೊಳ್ಳುವಂತೆ ಹೇಳಿದ್ದು ಸತ್ಯ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ತಿರುಗೇಟು ನೀಡಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್‌ಗೆ (Ashok) ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು (Siddaramaiah) ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಏಕೆ ಸುಳ್ಳು ಹೇಳಬೇಕು. ಅದರ ಅಗತ್ಯ ನಮಗೇನಿದೆ? ಬೇಕಿದ್ದರೆ ಅಶೋಕ್‌ ಮನಗೂಳಿ ಅವರನ್ನೇ ಕೇಳಿ ಎಂದರು.

ದಳಪತಿಗಳಿಗೆ ಬಿಗ್ ಶಾಕ್: ಜೆಡಿಎಸ್‌ ಅಭ್ಯರ್ಥಿಯಾಗಬೇಕಿದ್ದ ನಾಯಕ ಕಾಂಗ್ರೆಸ್ ಸೇರ್ಪಡೆ

‘ಎಂ.ಸಿ. ಮನಗೂಳಿ ಅವರು ಸಾಯುವ 15 ದಿನದ ಮೊದಲು ಪುತ್ರ ಅಶೋಕ್‌ ಮನಗೂಳಿ ಅವರನ್ನು ಕರೆದುಕೊಂಡು ಬಂದು ನಿಮ್ಮ ಮಡಿಲಿಗೆ ಹಾಕುತ್ತಿದ್ದೇವೆ ಎಂದಿದ್ದರು ಎಂದು ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ಆದರೆ, ಸಾಯುವ ಮೊದಲು 19 ದಿನ ಅವರು ಕೊರೋನಾದಿಂದ ಆಸ್ಪತ್ರೆಯಲ್ಲಿದ್ದರು. ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದರು. ಡಿ.ಕೆ. ಶಿವಕುಮಾರ್‌ ಸುಳ್ಳು ಹೇಳುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ (HD Kumaraswamy) ಕಿಡಿ ಕಾರಿದ್ದರು.

ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ. ಶಿವಕುಮಾರ್‌, ಎಂ.ಸಿ. ಮನಗೂಳಿ ಅವರು ಅವರು ನಮ್ಮನ್ನು ಬಂದು ಭೇಟಿ ಮಾಡಿದ್ದು ನಿಜ. ಈ ವಿಚಾರದಲ್ಲಿ ಸುಳ್ಳು ಹೇಳುವ ಅಗತ್ಯ ನನಗಿಲ್ಲ. ಬೇರೆ ಪಕ್ಷಗಳ ಅಭ್ಯರ್ಥಿಯನ್ನು ಹೈಜಾಕ್‌ ಮಾಡುವ ಸ್ಥಿತಿ ಕಾಂಗ್ರೆಸ್‌ಗೆ ಬಂದಿಲ್ಲ. ಪಕ್ಷದ ಸಿದ್ಧಾಂತ ಒಪ್ಪಿ ಬರುವವರನ್ನು ನಾವು ಬೇಡ ಎನ್ನುವುದಿಲ್ಲ. ನಾನು ಕ್ಯಾಲೆಂಡರ್‌ ಮುಂದಿಟ್ಟುಕೊಂಡು ಮಾತನಾಡುವುದಿಲ್ಲ. ಸಾಯುವ ಕೆಲವು ದಿನಗಳ ಮೊದಲು ಮನಗೂಳಿ ಭೇಟಿ ಮಾಡಿದ್ದರು. ಕುಮಾರಸ್ವಾಮಿ ಅವರು ನೋವಿನಿಂದ ಮಾತನಾಡಿದ್ದು, ಅವರ ಮಾತಿಗೆ ಬೇಸರ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದರು.

ಮನಗೂಳಿ ಅವರು ಬಂದು ನನ್ನನ್ನು ಭೇಟಿ ಮಾಡಿ ಮಾತನಾಡಿದ ವಿಚಾರ ನನಗೆ ಮನಗೂಳಿ ಹಾಗೂ ಅವರ ಪುತ್ರ ಅಶೋಕ್‌ಗೆ ಗೊತ್ತಿದೆ. ನಾನು ಈ ವಿಚಾರವನ್ನು ಬಹಿರಂಗವಾಗಿ ಹೇಳಿದ್ದು, ಗೌಪ್ಯವಾಗಿ ಹೇಳಿಲ್ಲ. ನಾನು ಮಾತ್ರವಲ್ಲ ಸಿದ್ದರಾಮಯ್ಯನವರು ಕೂಡ ಈ ಪ್ರಸ್ತಾಪಿಸಿದ್ದಾರೆ. ನಾವು ಈ ವಿಚಾರದಲ್ಲಿ ಏಕೆ ಸುಳ್ಳು ಹೇಳಬೇಕು. ಅದರ ಅಗತ್ಯ ನಮಗೇನಿದೆ? ಬೇಕಿದ್ದರೆ ಅಶೋಕ್‌ ಮನಗೂಳಿ ಅವರನ್ನೇ ಕೇಳಿ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಯಾರ ಮತವನ್ನೂ ಗುತ್ತಿಗೆಗೆ ತೆಗೆದುಕೊಂಡಿಲ್ಲ. ನನ್ನ ಮತವನ್ನೇ ನಾನು ಗುತ್ತಿಗೆ ತೆಗದುಕೊಳ್ಳಲು ಆಗುವುದಿಲ್ಲ. ಪ್ರಜಾಪ್ರಭುತ್ವದಲ್ಲಿ ಎಲ್ಲರೂ ಗೌಪ್ಯವಾಗಿ ಮತ ಹಾಕುತ್ತಾರೆ ಎಂದು ಹೇಳಿದರು.

click me!