ಕೆಂಪೇಗೌಡ ಬಡಾವಣೆ ಪ್ಲಾನ್‌ ಅಕ್ರಮದ ಬಗ್ಗೆ ತನಿಖೆ: ಡಿಸಿಎಂ ಡಿ.ಕೆ.ಶಿವಕುಮಾರ್‌

Published : Aug 15, 2025, 05:47 PM IST
DK Shivakumar

ಸಾರಾಂಶ

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿ ಹಣ ಪಡೆಯುತ್ತಿರುವ ಬಗ್ಗೆ ರೈತರಿಂದ ದೂರು ಬರೆಸಿ ಕೊಟ್ಟರೆ ಅಂತಹ ಅಧಿಕಾರಿಯನ್ನು ಇಂದು ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಅಮಾನತು ಮಾಡುತ್ತೇನೆ.

ವಿಧಾನಪರಿಷತ್‌ (ಆ.15): ನಾಡಪ್ರಭು ಕೆಂಪೇಗೌಡ ಬಡಾವಣೆ ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿ ಹಣ ಪಡೆದಿದ್ದರೆ, ಭೂ ಸ್ವಾಧೀನ ಪ್ರಕ್ರಿಯೆಯಿಂದ ಕಾನೂನು ಬಾಹಿರವಾಗಿ ಜಮೀನು ಕೈಬಿಟ್ಟಿದ್ದರೆ ತನಿಖೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಜೆಡಿಎಸ್‌ ಸದಸ್ಯ ಟಿ.ಎನ್.ಜವರಾಯಿಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಯಾವುದೇ ಅಧಿಕಾರಿ ಹಣ ಪಡೆಯುತ್ತಿರುವ ಬಗ್ಗೆ ರೈತರಿಂದ ದೂರು ಬರೆಸಿ ಕೊಟ್ಟರೆ ಅಂತಹ ಅಧಿಕಾರಿಯನ್ನು ಇಂದು ಸಂಜೆ ಸೂರ್ಯ ಮುಳುಗುವ ಹೊತ್ತಿಗೆ ಅಮಾನತು ಮಾಡುತ್ತೇನೆ. ಆ ಮೇಲೆ ತನಿಖೆ ನಡೆಸಲಾಗುವುದು. ಭೂಮಿ ಕಳೆದುಕೊಂಡ ರೈತನಿಗೆ 9,600 ಅಡಿ ಮಾತ್ರ ಸಿಗುತ್ತದೆ. ಅಭಿವೃದ್ಧಿ ಆದ ನಂತರ ಆತನಿಗೆ ಸ್ವಲ್ಪ ಹಣ ಸಿಗಬಹುದು. 2013ರಲ್ಲಿ ಯುಪಿಎ ಸರ್ಕಾರ ತೆಗೆದುಕೊಂಡ ದಿಟ್ಟ ತೀರ್ಮಾನದ ನಂತರ ಎರಡು, ಮೂರು ಹಾಗೂ ನಾಲ್ಕು ಪಟ್ಟು ಹಣ ನೀಡುವ ತೀರ್ಮಾನವಾಗಿದೆ.

ನಾವು 60:40 ಅನುಪಾತದಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಯೋಜನೆ ಜಾರಿಗೆ ತಂದಿದ್ದೇವೆ ಎಂದರು. ಭೂಸ್ವಾಧೀನ ಪ್ರಕ್ರಿಯೆಯಿಂದ ಕೆಲವು ಭೂಮಿಯನ್ನು ಕಾನೂನು ಬಾಹಿರವಾಗಿ ಬಿಟ್ಟಿದ್ದರೆ ಅದನ್ನು ತನಿಖೆ ಮಾಡಲು ಸಿದ್ಧವಿದ್ದೇವೆ. ತಮಗೆ ಬೇಕಾದವರ ಜಮೀನು ಕೈಬಿಡಲು ಸಾಧ್ಯವಿಲ್ಲ. ಈ ಬಗ್ಗೆ ವಿವರ ಕೊಟ್ಟರೆ ಕ್ರಮ ಕೈಗೊಳ್ಳುತ್ತೇನೆ ಎಂದು ಭರವಸೆ ನೀಡಿದರು.

ಪ್ರತಿ ವರ್ಷ ₹1 ಸಾವಿರ ಕೋಟಿ ನಷ್ಟ: ಶಿವರಾಮ ಕಾರಂತ ಬಡಾವಣೆ ಯೋಜನೆ ಸುಪ್ರೀಂ ಕೋರ್ಟ್ ಮಾರ್ಗದರ್ಶನದಂತೆ ನಿರ್ಮಾಣವಾಗುತ್ತಿದ್ದು, ಈಗ ಒಂದು ಹಂತಕ್ಕೆ ಬಂದಿದೆ. ಸರ್ಕಾರ ಸುಮಾರು ₹7 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಿದೆ. ಇದುವರೆಗೂ ಒಬ್ಬ ರೈತನಿಗೂ ಅಲ್ಲಿ ನಿವೇಶನ ನೀಡಲು ಆಗಿಲ್ಲ. ತಾವು ಬಂದ ನಂತರ ಅರ್ಜಿ ಹಾಕಲು ಅವಕಾಶ ನೀಡಿದೆ. ಆದರೆ ಹೈಕೋರ್ಟ್ ಅರ್ಜಿ ಸ್ವೀಕಾರದಲ್ಲೂ ಯಥಾಸ್ಥಿತಿ ಕಾಯುವಂತೆ ಆದೇಶಿಸಿದೆ.

ಈ ತಡೆಯಾಜ್ಞೆ ಇರುವ ಕಾರಣ ಸರ್ಕಾರಕ್ಕೆ ಪ್ರತಿ ವರ್ಷ ₹1 ಸಾವಿರ ಕೋಟಿ ನಷ್ಟವಾಗುತ್ತಿದೆ ಎಂದು ಡಿಕೆಶಿ ತಿಳಿಸಿದರು. ಈ ಜಮೀನು ಅಧಿಸೂಚನೆಯಾಗಿ 15 ವರ್ಷವಾಗಿದೆ. ಆ ಭಾಗದ ಕೆಲವು ರೈತರಿಗೆ ಒಂದು ರೂಪಾಯಿ ಹಣ ಕೂಡ ಸಿಕ್ಕಿಲ್ಲ. ಜಮೀನೂ ಇಲ್ಲವಾಗಿ ಈ ಸಮಸ್ಯೆಯನ್ನು ಆದಷ್ಟು ಬೇಗ ಬಗೆಹರಿಸಿ ಜಮೀನು ಕಳೆದುಕೊಂಡವರಿಗೆ ನಿವೇಶನ ಹಂಚುವ ವ್ಯವಸ್ಥೆ ಮಾಡುತ್ತೇನೆ ಎಂದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಚುನಾವಣೆ ಯಾವಾಗ ನಡೆದರೂ ಬಿಜೆಪಿ ಸ್ವಂತ ಬಲದ ಮೇಲೆ ಅಧಿಕಾರಕ್ಕೆ: ಬಿ.ವೈ.ವಿಜಯೇಂದ್ರ ವಿಶ್ವಾಸ
ರಾಗಾ-ವೈಷ್ಣವ್‌ ಉದ್ಯೋಗ ಸೃಷ್ಟಿ ‘ಕ್ರೆಡಿಟ್‌ ವಾರ್’