Congress Padayatra ಪಾದಯಾತ್ರೆ ನಿಲ್ಲಿಸಲು ಸರ್ಕಾರ ಆದೇಶ, ಡಿಕೆಶಿ ಮೌನ, ಅಬ್ಬರಿಸಿದ ಡಿಕೆ ಸುರೇಶ್

Published : Jan 12, 2022, 11:03 PM ISTUpdated : Jan 12, 2022, 11:23 PM IST
Congress Padayatra ಪಾದಯಾತ್ರೆ ನಿಲ್ಲಿಸಲು ಸರ್ಕಾರ ಆದೇಶ, ಡಿಕೆಶಿ ಮೌನ, ಅಬ್ಬರಿಸಿದ ಡಿಕೆ ಸುರೇಶ್

ಸಾರಾಂಶ

* ಕಾಂಗ್ರೆಸ್ ಪಾದಯಾತ್ರೆ ನಿರ್ಬಂಧಕ್ಕೆ ಸರ್ಕಾರ ಆದೇಶ * ತಕ್ಷಣ ಪಾದಯಾತ್ರೆ ನಿಲ್ಲಿಸುವಂತೆ ಆದೇಶಿಸಿದ ಸರ್ಕಾರ * ಸರ್ಕಾರದ ಆದೇಶ ಬೆನ್ನಲ್ಲೇ ಮೌನಕ್ಕೆ ಜಾರಿದ ಡಿಕೆ ಶಿವಕುಮಾರ್  

ಬೆಂಗಳೂರು, (ಜ.12): ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ಕರ್ನಾಟಕ ಸರ್ಕಾರ ನಿರ್ಬಂಧ  ಹೇರಿದೆ. ಆದ್ರೆ,  ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್‌ ಅವರು ರಾಜ್ಯ ಸರ್ಕಾರದ ಆದೇಶದ ಕುರಿತಾಗಿ ಮೌನಕ್ಕೆ ಶರಣಾಗಿದ್ದಾರೆ.

 ಕಾಂಗ್ರೆಸ್‌ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ  ಹೇರಿರುವ ಕುರಿತು ಮಾಧ್ಯಮ ಪ್ರತಿನಿಧಿಗಳು ಪ್ರತಿಕ್ರಿಯೆ ಕೇಳಿದಾಗ  ಡಿ.ಕೆ ಶಿವಕುಮಾರ್‌ ಅವರು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲಿಲ್ಲ.

Mekedatu Padayatra: ಪಾದಯಾತ್ರೆ ನಿರ್ಬಂಧಕ್ಕೆ ಸರ್ಕಾರದ ಅಧಿಕೃತ ಆದೇಶ, ರಾಮನಗರದಲ್ಲಿ ಬಂದೋಬಸ್ತ್!

ಪಾದಯಾತ್ರೆ ಮುಂದುವರೆಯುತ್ತೆ ಎಂದ ಡಿಕೆ ಸುರೇಶ್
ಡಿಕೆ ಶಿವಕುಮಾರ್ ಮೌನಕ್ಕೆ ಶರಣಾಗಿದ್ರೆ, ಸಂಸದ ಡಿಕೆ ಸುರೇಶ್ ಅವರು ಆದೇಶಕ್ಕೆ ಪ್ರತಿಕ್ರಿಯಿಸಿ, ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ ಎಂದು ಸ್ಪಷ್ಟಪಡಿಸಿದರು.

ಗಾಳಿ ಸುದ್ದಿಗಳಿಗೆ ಕಿವಿಗೊಡಬೇಡಿ. ಸರ್ಕಾರ ಯಾವುದೇ ಆದೇಶ ನೀಡಲಿ ಪಾದಯಾತ್ರೆ ನಿಲ್ಲಲ್ಲ. ನಾಳೆ (ಗುರುವಾರ) ಬೆಳಗ್ಗೆ ಪಾದಯಾತ್ರೆ ಮುಂದುವರಿಯುತ್ತದೆ. ಊಟದ ವ್ಯವಸ್ಥೆ ಇದೆ ದಯವಿಟ್ಟು ಊಟವನ್ನು ಮಾಡಿ ಎಂದು ಮೈಕ್‍ನಲ್ಲಿ ಹೇಳಿದರು.

Congress Padayatra ಪಾದಯಾತ್ರಗೆ ಬ್ರೇಕ್ ಬೀಳುತ್ತಾ? ಅರ್ಧಕ್ಕೆ ನಿಲ್ಲಿಸುತ್ತಾ ಕಾಂಗ್ರೆಸ್?

ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ರಾಜ್ಯ ಸರ್ಕಾರ ಕಾಂಗ್ರೆಸ್ ನಡೆಸುತ್ತಿದ್ದ ಮೇಕೆದಾಟು ಪಾದಯಾತ್ರೆಗೆ ನಿರ್ಬಂಧ ಹೇರಿದೆ. ಪಾದಯಾತ್ರೆಯನ್ನು ತಕ್ಷಣ ನಿಲ್ಲಿಸುವಂತೆ ಇಂದು(ಬುಧವಾರ)  ಆದೇಶ ಹೊರಡಿಸಿದೆ. ಒಂದು ವೇಳೆ ಸರ್ಕಾರದ ಆದೇಶವನ್ನು ಉಲ್ಲಂಘಿಸಿದರೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಖಡಕ್ ಎಚ್ಚರಿಕೆ ನೀಡಿದೆ. 

 ಕಾಂಗ್ರೆಸ್‌ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆಯನ್ನು ನಿಲ್ಲಿಸಬೇಕು ಎಂದು ರಾಮನಗರ ಎಸ್‌ಪಿ, ಡಿಸಿಗೆ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್‌ ಸೂಚನೆ ನೀಡಿದ್ದಾರೆ. ಅಲ್ಲದೇ ರಾಮನಗರದಲ್ಲಿ‌ ಹೆಚ್ಚುವರಿ‌ ಪೊಲೀಸ್ ನಿಯೋಜನೆಗೆ ಗೃಹ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳು ರಾಮನಗರದಲ್ಲಿ ಮೊಕ್ಕಾಂ ಹೂಡಿದ್ದಾರೆ.

ಆದೇಶ ಮೀರಿದ್ರೆ ಅರೆಸ್ಟ್?
ಯೆಸ್...ಸರ್ಕಾರದ ಆದೇಶವನ್ನು ಮೀರಿ ಪಾದಯಾತ್ರೆ ಮುಂದುವರೆಸಿದ್ರೆ ಕಾಂಗ್ರೆಸ್ ನಾಯಕರನ್ನು ಅರೆಸ್ಟ್ ಮಾಡುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ಈಗಾಗಲೇ ರಾಮನಗರಕ್ಕೆ ಹೆಚ್ಚಿನ ಪೊಲೀಸರನ್ನ ಕರೆಯಿಸಿಕೊಳ್ಳಲಾಗಿದೆ.

ಸಿಎಂ ಕೃಷ್ಣರಿಂದಲೂ ಪತ್ರ
ಮೇಕೆದಾಟು​ ಪಾದಯಾತ್ರೆ ಕೈಬಿಡುವಂತೆ ಮಾಜಿ ಮುಖ್ಯಮಂತ್ರಿ ಎಸ್​.ಎಂ. ಕೃಷ್ಣ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್​ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.  ಮೇಕೆದಾಟು ಯೋಜನೆಯ ಅನುಷ್ಠಾನಕ್ಕೆ ನನ್ನ ಸಹಮತ ಇದೆ. ಆದರೆ, ಇದು ಸೂಕ್ತ ಸಮಯವಲ್ಲ ಎಂದು ಎಸ್​.ಎಂ. ಕೃಷ್ಣ ಪತ್ರದ ಮುಖೇನ ತಿಳಿಸಿದ್ದಾರೆ.

ಹೈಕೋರ್ಟ್ ಛೀಮಾರಿ ಹಾಕಿತ್ತು 
ಕೊರೋನಾ ಆತಂಕದ ಮಧ್ಯೆ ಮೇಕೆದಾಟು ಪಾದಯಾತ್ರೆ ಮಾಡುತ್ತಿರುವ ಕಾಂಗ್ರೆಸ್ ನಡೆಗೆ ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ತೀವ್ರ ಅಸಮಾಧಾನ ಹೊರ ಹಾಕಿತ್ತು. ಸರ್ಕಾರದ ಮಾರ್ಗಸೂಚಿ ಪಾಲಿಸಲು ಕೆಪಿಸಿಸಿ ಏನು ಕ್ರಮ ಕೈಗೊಂಡಿದೆ ಎಂದೂ ಕಾಂಗ್ರೆಸ್​ ಪಕ್ಷವನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ತಿ ಮತ್ತು ನ್ಯಾ. ಸೂರಜ್ ಗೋವಿಂದರಾಜ್ ನೇತೃತ್ವದ ಪೀಠ ಪ್ರಶ್ನಿಸಿತ್ತು. ಅಲ್ಲದೇ ಈ ಬಗ್ಗೆ ವರದಿ ನೀಡುವಂತೆ ತಿಳಿಸಿ ವಿಚಾರಣೆ ಜ.14ಕ್ಕೆ ಮುಂದೂಡಿತ್ತು.

ಕೆಪಿಸಿಸಿ ಲೀಗಲ್ ಸೆಲ್ ಅಧ್ಯಕ್ಷಗೆ ಬುಲಾವ್ ಹೋಗಿತ್ತು. ಲೀಗಲ್ ಸೆಲ್ ಅಧ್ಯಕ್ಷ ವಕೀಲ ಎ.ಎಸ್ ಪೊನ್ನಣ್ಣಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ರಿಂದ ಕರೆ ಹೋಗಿದ್ದು ರಾಮನಗರಕ್ಕೆ ಕರೆಸಿಕೊಂಡು ಮಾತನಾಡಿದ್ದರು. ಹೈಕೋರ್ಟ್​ನಿಂದ ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಕೋರ್ಟ್ ವರದಿ ಕೇಳಿತ್ತು.

ಕೋರ್ಟ್ ಆದೇಶಕ್ಕೆ ಗೌರವ ಕೊಡ್ತೇವೆ ಎಂದ ಸಿದ್ದು
ಒಂದು ವೇಳೆ ಕೋರ್ಟ್ ಪಾದಯಾತ್ರೆ ನಿಲ್ಲಿಸುವಂತೆ ಹೇಳಿದ್ರೆ, ನಾವು ಪಾಲಿಸುತ್ತೇವೆ. ಕಾನೂನಿಗೆ ಗೌರವ ಕೊಡುತ್ತೇವೆ ಎಂದು ವಿರೋಧ ಪಕಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಕೋರ್ಟ್ ಏನು ಹೇಳುತ್ತೆ ಎನ್ನುವುದನ್ನು ನೋಡೋಣಾ/ ಅಲ್ಲಿಯವರೆಗೆ ಪಾದಯಾತ್ರೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಪುಟಿನ್‌ಗೆ ಇಲ್ಲೇ ಎಲೆಕ್ಷನ್‌ ನಿಲ್ಲೋಕೆ ಟಿಕೆಟ್‌ ಕೊಡ್ತಾರೆ ಅಂದ್ಕೊಂಡಿದ್ದೆ.. ಸಂತೋಷ್‌ ಲಾಡ್‌ ಲೇವಡಿ
ನಾನು ಲಂಚ ಪಡೆದಿದ್ದು ಸಾಬೀತಾದರೆ ರಾಜೀನಾಮೆ: ಗೃಹ ಸಚಿವ ಪರಮೇಶ್ವರ್‌