
ಹುಬ್ಬಳ್ಳಿ (ಏ.8): 'ಮುಖ್ಯಮಂತ್ರಿ ಬದಲಾವಣೆ ಕುರಿತು ನಾನು ಮತ್ತು ಸಿದ್ದರಾಮಯ್ಯ, ನಮ್ಮಿಬ್ಬರ ಹೇಳಿಕೆಗಳಿಗೆ ಮಾತ್ರ ಬೆಲೆ. ಉಳಿದವರ ಹೇಳಿಕೆಗಳು ನಗಣ್ಯ. ಇನ್ನುಳಿದವರ ಯಾರ ಹೇಳಿಕೆಗಳಿಗೂ ನಾನು ಉತ್ತರಿಸುವ ಅವಶ್ಯಕತೆ ಇಲ್ಲ’ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಹೇಳಿದ್ದಾರೆ.2028ರವರೆಗೂ ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ಧರಾಮಯ್ಯ ಅವರೇ ಮುಂದುವರೆಯಲಿದ್ದಾರೆ ಎಂಬ ವಸತಿ ಸಚಿವ ಜಮೀರ್ ಅಹದ್ಮದ್ ಖಾನ್ ಚುನಾವಣಾ ಪ್ರಚಾರದ ವೇಳೆ ಮತ್ತು ಮೈಸೂರಿನಲ್ಲಿ ಗೃಹ ಸಚಿವ ಪರಮೇಶ್ವರ್ ಹೇಳಿದ ಬೆನ್ನಲ್ಲೇ ಡಿ.ಕೆ.ಶಿವಕುಮಾರ್ ಈ ಪ್ರತಿಕ್ರಿಯೆ ನೀಡಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ‘2028ರ ವರೆಗೂ ಸಿದ್ದರಾಮಯ್ಯ ಮುಖ್ಯಮಂತ್ರಿಗಳಾಗಿ ಮುಂದುವರಿಯುತ್ತಾರೆ’ ಎಂಬ ಸಚಿವ ಜಮೀರ್ ಅಹ್ಮದ ಖಾನ್ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಮುಖ್ಯಮಂತ್ರಿ ಬದಲಾವಣೆ ಕುರಿತು ನಮ್ಮಿಬ್ಬರ ಬಿಟ್ಟು ಬೇರೆಯವರ ಹೇಳಿಕೆಗಳಿಗೆ ಉತ್ತರಿಸುವ ಅವಶ್ಯಕತೆ ಇಲ್ಲ ಎಂದರು. ಮುಂದುವರಿದು, ‘ನನ್ನ ತಾಳ್ಮೆಗೆ ಕಾಲವೇ ಮುಂದೊಂದು ದಿನ ಉತ್ತರ ಕೊಡಲಿದೆ’ ಎಂದು ಮಾರ್ಮಿಕವಾಗಿ ಉತ್ತರಿಸಿದರು.
ಸೋಮವಾರ ಮೈಸೂರಿನಲ್ಲಿ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ ಪರಮೇಶ್ವರ್, ‘2013ರಲ್ಲಿ ಸಿದ್ದರಾಮಯ್ಯ 5 ವರ್ಷ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿರಲಿಲ್ಲ. ಆದರೂ ಅವರು ಐದು ವರ್ಷ ಸಿಎಂ ಆಗಿದ್ದರು ತಾನೇ?. ಈ ಬಾರಿಯೂ 2023ರಲ್ಲಿ ಸಿದ್ದರಾಮಯ್ಯ ಸಿಎಂ ಎಂದು ಹೈಕಮಾಂಡ್ ಘೋಷಣೆ ಮಾಡಿತ್ತು. ಅದರ ಅವಧಿ 2028, ಅದನ್ನ ಮುಗಿಸಬೇಕು ತಾನೇ?. ಹೈಕಮಾಂಡ್ ನೀವೇ 5 ವರ್ಷ ಸಿಎಂ ಎಂದು ಪ್ರತ್ಯೇಕವಾಗಿ ಸ್ಪಷ್ಟೀಕರಣ ಕೊಡುವ ಅವಶ್ಯಕತೆ ಇಲ್ಲ ಎಂದು ಹೇಳಿದ್ದರು.
ಮುಖ್ಯಮಂತ್ರಿ ಸ್ಥಾನದ ಕುರಿತಂತೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಹೇಗೆ ಹೇಳುತ್ತಾರೋ ಹಾಗೆ ಕೇಳಬೇಕು. ನನ್ನ ಅಣ್ಣ (ಡಿ.ಕೆ. ಶಿವಕುಮಾರ್) ಒಮ್ಮೆ ಮುಖ್ಯಮಂತ್ರಿ ಆಗಬೇಕು ಎಂಬ ಆಸೆಯಿದೆ. ಆದರೆ, ಈಗಲೇ ಮುಖ್ಯಮಂತ್ರಿ ಆಗುತ್ತಾರೆ ಎಂದು ನಾನೇನೂ ಹೇಳಿಲ್ಲ.
ಡಿ.ಕೆ. ಸುರೇಶ್, ಬಮೂಲ್ ಅಧ್ಯಕ್ಷ
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.