Karnataka Congress: ರಾಹುಲ್‌ ಭೇಟಿ ಬಳಿಕ ಸಿದ್ದು, ಡಿಕೆಶಿ ಒಗ್ಗಟ್ಟು ಪ್ರದರ್ಶನ

Kannadaprabha News   | Asianet News
Published : Feb 26, 2022, 07:49 AM ISTUpdated : Feb 26, 2022, 08:03 AM IST
Karnataka Congress: ರಾಹುಲ್‌ ಭೇಟಿ ಬಳಿಕ ಸಿದ್ದು, ಡಿಕೆಶಿ ಒಗ್ಗಟ್ಟು ಪ್ರದರ್ಶನ

ಸಾರಾಂಶ

*  ಒಟ್ಟಾಗಿದ್ದೇವೆ, ಭಿನ್ನಾಭಿಪ್ರಾಯ ಇಲ್ಲ: ಇಬ್ಬರೂ ನಾಯಕರು *  ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರುತ್ತೇವೆ *  ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್ಸಿಗರು   

ನವದೆಹಲಿ(ಫೆ.26):  ಮುಂಬರುವ ವಿಧಾನಸಭಾ ಚುನಾವಣೆಗೆ(Assembly Elections) ರಣತಂತ್ರ ರೂಪಿಸುವ ವಿಚಾರಕ್ಕೆ ಸಂಬಂಧಿಸಿ ರಾಜ್ಯದ 16 ಹಿರಿಯ ನಾಯಕರೊಂದಿಗೆ ಕಾಂಗ್ರೆಸ್‌ ಹೈಕಮಾಂಡ್‌ ನಾಯಕ ರಾಹುಲ್‌ ಗಾಂಧಿ ಅವರು ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗಹಿಸುವ ಸಲುವಾಗಿ ರಾಷ್ಟ್ರ ರಾಜಧಾನಿ ದೆಹಲಿಗೆ ಆಗಮಿಸಿದ್ದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ(Siddaramaiah) ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌(DK Shivakumar)  ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ. ರಾಜ್ಯ ಕಾಂಗ್ರೆಸ್‌ನಲ್ಲಿ(Congress) ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದು ಕರ್ನಾಟಕದಲ್ಲಿ ಕಾಂಗ್ರೆಸ್‌ ಅನ್ನು ಮತ್ತೆ ಅಧಿಕಾರಕ್ಕೆ ತರುವುದಾಗಿ ರಾಹುಲ್‌ ಗಾಂಧಿ ಅವರಿಗೆ ಭರವಸೆ ಕೊಟ್ಟಿದ್ದಾರೆ.

ನವದೆಹಲಿಯ ಕರ್ನಾಟಕ ಭವನದಲ್ಲಿ ಶುಕ್ರವಾರ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌ ಅವರು ಈ ಬಗ್ಗೆ ಜಂಟಿ ಪತ್ರಿಕಾಗೋಷ್ಠಿ ನಡೆಸಿದರು.

Mekedatu Padayatra: ಬೆಂಗ್ಳೂರಲ್ಲಿ 3 ದಿನ ಕಾಂಗ್ರೆಸ್‌ ಪಾದಯಾತ್ರೆ

ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕದಲ್ಲಿ(Karnataka) ವಿಧಾನಸಭಾ ಚುನಾವಣೆಗೆ ಒಂದು ವರ್ಷವಿದೆ. ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬರುವಂತಹ ವಾತಾವರಣ ನಿರ್ಮಾಣವಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ(Rahul Gandhi) ಅವರು ರಾಜ್ಯದ ಸುಮಾರು 16 ಜನ ಹಿರಿಯ ನಾಯಕರನ್ನು ದೆಹಲಿಗೆ ಕರೆದು ಸಭೆ ನಡೆಸಿ ರಾಜ್ಯದ ಸದ್ಯದ ಸ್ಥಿತಿಗತಿ, ಮುಂದೆ ನಾವು ಗೆಲ್ಲಬೇಕಾದರೆ ಕೈಗೊಳ್ಳಬೇಕಾದ ಕಾರ್ಯತಂತ್ರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಗೆಲ್ಲುವ ಅವಕಾಶ ಇರುವುದರಿಂದ ಎಚ್ಚರ ತಪ್ಪದೆ ಕೆಲಸ ಮಾಡಬೇಕು ಎಂಬ ಸಲಹೆ ನೀಡಿದ್ದಾರೆ. ಮತ್ತೆ ಅಧಿಕಾರಕ್ಕೆ ಬರಲು ಅಗತ್ಯವಿರುವ ಬೆಂಬಲ, ಸಹಕಾರವನ್ನು ತಾವು ನೀಡುತ್ತೇವೆ ಎಂಬ ಭರವಸೆ ನೀಡಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್‌ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡುತ್ತಿರುವ ಬಗ್ಗೆ ಸಂದೇಶ ಸಿಕ್ಕಂತಿದೆ. ಹಾಗಾಗಿ ಅವರು ಕೆಪಿಸಿಸಿ ಅಧ್ಯಕ್ಷರು, ಶಾಸಕಾಂಗ ಪಕ್ಷದ ನಾಯಕರು, ಇತರೆ ಎಲ್ಲ ನಾಯಕರು ಒಗ್ಗೂಡಿ, ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ಕರ್ನಾಟಕದಲ್ಲಿ ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ಬರುತ್ತೆ ಎಂಬ ಮಾಹಿತಿ ನಮಗಿದೆ ಎಂದು ಹೇಳಿದರು ಎಂದರು.

ಭಿನ್ನಮತ ಸುಳ್ಳು, ಒಗ್ಗಟ್ಟಾಗಿದ್ದೇವೆ:

ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳು ಇಲ್ಲ, ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಬಿಜೆಪಿಯವರು(BJP) ನಮ್ಮ ನಾಯಕರ ನಡುವೆ ಭಿನ್ನಾಭಿಪ್ರಾಯ ಇದೆ ಎಂದು ಬಿಂಬಿಸುವ ಪ್ರಯತ್ನ ಮಾಡುತ್ತಾರೆ. ಅವೆಲ್ಲ ಬರೀ ಸುಳ್ಳು. ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇಟ್ಟುಕೊಂಡಿರುವ ಪಕ್ಷ. ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ(Democracy) ಇದೆ. ಹೀಗಿದ್ದಾಗ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ಭಿನ್ನಾಭಿಪ್ರಾಯವೇ ಇಲ್ಲ ಅಂದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿರಲ್ಲ. ನಾವು ರಾಜ್ಯದ ಜನರ ಮತ್ತು ಪಕ್ಷದ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ. ನಾವು ಅಧಿಕಾರಕ್ಕೆ ಬರಬೇಕು ಎನ್ನುವುದಕ್ಕಿಂತ ರಾಜ್ಯ ಮತ್ತು ಸಂವಿಧಾನವನ್ನು ಉಳಿಸುವುದಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ಬರಬೇಕು ಎಂಬುದಾಗಿದೆ ಎಂದು ಅಭಿಪ್ರಾಯಪಟ್ಟರು.

ಭ್ರಷ್ಟ ಸರ್ಕಾರ:

ಈಗಿನ ಬಿಜೆಪಿ ಸರ್ಕಾರ ಆಪರೇಷನ್‌ ಕಮಲದ ಮೂಲಕ ಅಧಿಕಾರ ಹಿಡಿದು ಒಂದು ಅನೈತಿಕ ಸರ್ಕಾರವಾಗಿ ನಡೆಯುತ್ತಿದೆ. ಕಳೆದ ಎರಡೂವರೆ ವರ್ಷಗಳಿಂದ ಯಾವ ಅಭಿವೃದ್ಧಿ ಕೆಲಸಗಳನ್ನೂ ಮಾಡಿಲ್ಲ. ಹೀಗಾಗಿ ರಾಜ್ಯದ ಜನ ಶಾಪ ಹಾಕುತ್ತಿದ್ದಾರೆ. ಜನ ಕಣ್ಣೀರಿನಲ್ಲಿ ಕೈತೊಳೆಯುವ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ಒಂದು ನಿಷ್ಕ್ರೀಯ, ಭ್ರಷ್ಟ ಸರ್ಕಾರ. ಸರ್ಕಾರ ಕೋವಿಡ್‌ 19(Covid-19) ಅನ್ನು ಕೂಡ ಸರಿಯಾಗಿ ನಿಭಾಯಿಸದೆ ಎರಡನೇ ಅಲೆಯಲ್ಲಿ ಸಾವಿರಾರು ಜನರ ಸಾವಿಗೆ ಕಾರಣವಾಗಿದೆ. ಇದು ಅಭಿವೃದ್ಧಿ ಶೂನ್ಯ ಸರ್ಕಾರ ಎಂದು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.

Karnataka Congress: ಚುನಾವಣೆ ಸಿದ್ಧತೆಗೆ ದಿಲ್ಲಿಯಿಂದಲೇ ಟೀಂ..!

ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್‌, ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಹುಲ್‌ ಗಾಂಧಿ ಜೊತೆ ಚರ್ಚೆ ನಡೆಸಲಾಗಿದ್ದು, ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅನ್ನುಅಧಿಕಾರಕ್ಕೆ ತರುವುದಾಗಿ ಭರವಸೆ ಕೊಟ್ಟಿದ್ದೇವೆ. ನಾಯಕರು, ಮುಖಂಡರು ಫೀಲ್ಡಿನಲ್ಲಿ ಸಕ್ರಿಯವಾಗಲು ಸೂಚಿಸಿದ್ದಾರೆ ಎಂದು ತಿಳಿಸಿದರು.

ಸಣ್ಣಪುಟ್ಟ ಭಿನ್ನಾಭಿಪ್ರಾಯ

ನಮ್ಮಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಹೀಗಾಗಿ ಸಣ್ಣಪುಟ್ಟ ಭಿನ್ನಾಭಿಪ್ರಾಯ ಇದ್ದೇ ಇರುತ್ತದೆ. ನಾವು ರಾಜ್ಯದ ಜನರು ಮತ್ತು ಕಾಂಗ್ರೆಸ್‌ ಹಿತದೃಷ್ಟಿಯಿಂದ ಕೆಲಸ ಮಾಡುತ್ತಿದ್ದೇವೆ ಅಂತ ವಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ. 

ರಾಹುಲ್‌ಗೆ ಭರವಸೆ

ರಾಜ್ಯದ ರಾಜಕೀಯ ವಿದ್ಯಮಾನಗಳ ಬಗ್ಗೆ ರಾಹುಲ್‌ ಜತೆ ಚರ್ಚಿಸಿದ್ದೇವೆ. ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರುವ ಭರವಸೆ ನೀಡಿದ್ದೇವೆ. ಫೀಲ್ಡಿನಲ್ಲಿರಲು ಸೂಚಿಸಿದ್ದಾರೆ ಅಂತ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.  
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಲೋಕಸಭೆಯಲ್ಲಿ ಮತಚೋರಿ ಕದನ : ಕೈ ಮತಗಳವಿಂದ ಅಂಬೇಡ್ಕರ್‌ಗೆ ಸೋಲು-ಬಿಜೆಪಿ
ಉತ್ತರ ಕರ್ನಾಟಕದ ಅಭಿವೃದ್ಧಿಗೆ ಆದ್ಯತೆ ಅಗತ್ಯ: ಛಲವಾದಿ ನಾರಾಯಣಸ್ವಾಮಿ