
ಬೆಂಗಳೂರು/ಉಡುಪಿ (ಜು.07): ಬಿಜೆಪಿಗೆ ಪಕ್ಷಾಂತರ ಮಾಡಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣರಾದ 17 ಮಂದಿ ಶಾಸಕರು ಮತ್ತೆ ಕಾಂಗ್ರೆಸ್‌ಗೆ ಬರುವುದಾದರೆ ಅರ್ಜಿ ಹಾಕಿ ಎಂಬ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಇದೀಗ ಆ ವಿಚಾರದಲ್ಲಿ ಮೌನಕ್ಕೆ ಶರಣಾಗಿದ್ದಾರೆ.
ಕಾಂಗ್ರೆಸ್ ಕದ ತಟ್ಟುತ್ತಿದ್ದಾರಾ ಬಿಜೆಪಿ ಬಾಂಬೆ ಫ್ರೆಂಡ್ಸ್..? ...
ಕಾಂಗ್ರೆಸ್ ತ್ಯಜಿಸಿ ಬಿಜೆಪಿಗೆ ಸೇರ್ಪಡೆ ಆಗಿರುವ ಶಾಸಕರನ್ನು ಮತ್ತೆ ಪಕ್ಷಕ್ಕೆ ಸ್ವಾಗತಿಸುವ ವಿಚಾರಕ್ಕೆ ಸಂಬಂಧಿಸಿ ಉಡುಪಿಯಲ್ಲಿ ಮಂಗಳವಾರ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಸದ್ಯ ಪ್ರತಿಕ್ರಿಯೆ ನೀಡುವುದಿಲ್ಲ. ಆಮೇಲೆ ಈ ವಿಚಾರ ಮಾತನಾಡೋಣ ಎಂದರು.
ಕಾಂಗ್ರೆಸ್, ಡಿಕೆಶಿ ವಿರುದ್ಧ ಮುಗಿಬಿದ್ದ ಬಿಜೆಪಿ ; ಹಡಗಿಗೆ ತೂತು ಬಿದ್ದಿದೆ
ಕೆಪಿಸಿಸಿ ಅಧ್ಯಕ್ಷನಾಗಿ ನಾನು ಯಾರನ್ನೂ ಅಸ್ಪೃಶ್ಯರಂತೆ ಕಾಣುವುದಿಲ್ಲ. ಪಕ್ಷ ಸೇರಬಯಸುವ ಬಿಜೆಪಿ ಶಾಸಕರು ಅರ್ಜಿ ಹಾಕಿಕೊಳ್ಳಲಿ. ರಾಜಕೀಯ ನಿಂತ ನೀರಲ್ಲ, ರಾಜಕಾರಣ ಯಾವಾಗಲೂ ಬದಲಾಗುತ್ತಿರುತ್ತದೆ ಎಂದು ಡಿ.ಕೆ.ಶಿವಕುಮಾರ್ ಶುಕ್ರವಾರ ಹೇಳಿದ್ದರು. ಈ ಮೂಲಕ ಬಿಜೆಪಿಗೆ ಪಕ್ಷಾಂತರ ಮಾಡಿ ಸಮ್ಮಿಶ್ರ ಸಕಾರ ಪತನಕ್ಕೆ ಕಾರಣರಾದ 17 ಮಂದಿ ಶಾಸಕರು ಮತ್ತೆ ಕಾಂಗ್ರೆಸ್‌ಗೆ ಬರುವುದಾದರೆ ತಾವು ಮುಕ್ತ ಮನಸ್ಥಿತಿ ಹೊಂದಿದ್ದೇನೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದರು.
ಈ ಹೇಳಿಕೆ ಕುರಿತು ಬಿಜೆಪಿ ಮುಖಂಡರಿಂದ ತೀವ್ರ ಟೀಕೆವ್ಯಕ್ತವಾಗಿತ್ತು. ಮುಳುಗುವ ಹಡಗಾದ ಕಾಂಗ್ರೆಸ್ ಕನಸು ಕಾಣುತ್ತಿದ್ದು, ಅದನ್ನು ಹತ್ತುವವರು ಯಾರು ಎಂದು ಹಲವು ಮುಖಂಡರು ವ್ಯಂಗ್ಯವಾಡಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.