ಬಸ್‌ ಮೇಲಿಂದಲೇ ಜಾನಪದ ಕಲಾತಂಡಗಳ ಮೇಲೆ ಹಣ ಎಸೆದ ಡಿ.ಕೆ. ಶಿವಕುಮಾರ್: ದರ್ಪಕ್ಕೆ ಕಲಾವಿದರ ಬೇಸರ

By Sathish Kumar KH  |  First Published Mar 28, 2023, 5:42 PM IST

ಮಂಡ್ಯದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಎಡವಟ್ಟು
ಮಂಡ್ಯದ ಬೇವಿನಹಳ್ಳಿ ಗ್ರಾಮದಲ್ಲಿ ಘಟನೆ
ಬಸ್ ಮೇಲಿನಿಂದ ಕಲಾವಿದರಿಗೆ ಹಣ ಎಸೆದು ದರ್ಪ


ಮಂಡ್ಯ (ಮಾ.28): ಕಾಂಗ್ರೆಸ್‌ ವತಿಯಿಂದ ಮಂಡ್ಯ ತಾಲೂಕಿನ ಬೇವಿನಹಳ್ಳಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಅಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಬಸ್‌ ಮೇಲಿಂದಲೇ ಜಾನಪದ ಕಲಾವಿದರಿಗೆ ಹಣವನ್ನು ಎರಚುವ ಮೂಲಕ ಚುನಾವಣೆ ಸಂದರ್ಭದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ.

ಮಂಡ್ಯ ತಾಲೂಕಿನ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಬೇವಿನಹಳ್ಳಿ ಗ್ರಾಮದಲ್ಲಿ ಇಂದು ಅದ್ಧೂರಿಯಾಗಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿತ್ತು. ಇನ್ನು ಅಲ್ಲಿನ ಅಭ್ಯರ್ಥಿ ರಮೇಶ್‌ ಬಂಡಿಸಿದ್ದೇಗೌಡ ಅವರ ಪರವಾಗಿ ಬೇವಿನಹಳ್ಳಿಯಲ್ಲಿ ಬಸ್‌ ಮೇಲಿಂದಲೇ ರೋಡ್‌ ಶೋ ಮೂಲಕ ಭರ್ಜರಿ ಚುನಾವಣಾ ಪ್ರಚಾರ ಮಾಡುತ್ತಿದ್ದರು. ಈ ವೇಳೆ ಬೇವಿನಹಳ್ಳಿ ಬಸ್‌ ನಿಲ್ದಾಣದ ಬಳಿ ಹಲವು ಜಾನಪದ ಕಲಾತಂಡಗಳು ಪೂಜಾಕುಣಿತ ಹಾಗೂ ಪಟ ಕುಣಿತದ ದೇವರು ಹೊತ್ತುಕೊಂಡು ಕುಣಿಯುತ್ತಿದ್ದವು. ಇದನ್ನು ನೊಡಿದ ಡಿ.ಕೆ. ಶಿವಕುಮಾರ್‌ ಬಸ್‌ ಮೇಲಿಂದಲೇ ನೋಟಿನ ಕಂತೆಯನ್ನು ತೆರೆದು ಕಲಾ ತಂಡಗಳತ್ತ ಎಸೆದು ದರ್ಪ ತೋರಿದ್ದಾರೆ.

Tap to resize

Latest Videos

ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿ ಗೊಂದಲ ಸೃಷ್ಟಿಸಿದ್ದಾರೆ: ಡಿ.ಕೆ.ಶಿವಕುಮಾರ್

500 ಮುಖಬೆಲೆಯ ನೋಟುಗಳು: ಇನ್ನು ಬಸ್‌ ಮೇಲಿಂದಲೇ ರೋಡ್‌ ಶೋ ಮೂಲಕ ಜನರತ್ತ ಕೈಬೀಸಿ ಮಾತನಾಡುತ್ತಾ ಸಾಗುತ್ತಿದ್ದ ವೇಳೆ ಡಿ.ಕೆ. ಶಿವಕುಮಾರ್‌ 500 ರೂ. ಮುಖಬೆಲೆಯ ಹಲವು ನೋಟುಗಳನ್ನು ಎರಚಿದ್ದಾರೆ. ಇನ್ನು ಜಾನಪದ ಕಲಾವಿದರಿಗೆ ಈ ಹಣ ಎರಚಲಾಗಿದೆ ಎಂದು ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದರೂ, ಕಲಾವಿದರು ಪೂಜಾ ಕುಣಿತದ ದೇವರು ಹೊತ್ತುಕೊಂಡಿದ್ದು, ಇದು ಕಾಂಗ್ರೆಸ್‌ ಕಾರ್ಯಕರ್ತರ ಪಾಲಾಗಿದೆ ಎಂದು ಸ್ಥಳೀಯರು ಹಾಗೂ ಕಲಾತಂಡದ ಸದಸ್ಯರು ಹೇಳಿದ್ದಾರೆ. ಆದರೆ, ಕಲಾವಿದರ ಮೇಲೆ ಹಣವನ್ನು ಎರಚಿ ದರ್ಪ ತೋರಿಸಿದ ಡಿ.ಕೆ. ಶಿವಕುಮಾರ್‌ ಅವರ ಮೇಲೆ ಸ್ಥಳೀಯ ಮತದಾರರು ಮಾತ್ರ ಆಕ್ರೋಶ ಹೊರಹಾಕಿದ್ದಾರೆ.

ದಕ್ಷಿಣ ಕರ್ನಾಟಕ ಸಾರಥಿಯ ಎಡವಟ್ಟು: ದಕ್ಷಿಣ ಕರ್ನಾಟಕದಲ್ಲಿ ಕಾಂಗ್ರೆಸ್‌ ಪ್ರಜಾಧ್ವನಿ ಯಾತ್ರೆಯ ನೇತೃತ್ವ ವಹಿಸಿಕೊಂಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರು, ಒಕ್ಕಲಿಗ ಸಮುದಾಯದ ಭದ್ರಕೋಟೆ ಆಗಿರುವ ಮಂಡ್ಯದಲ್ಲಿ ಎಡವಟ್ಟು ಮಾಡಿಕೊಂಡಿದ್ದಾರೆ. ಜೆಡಿಎಸ್‌ಗೆ ಪೈಪೋಟಿ ನೀಡಿ, ಕಾಂಗ್ರೆಸ್‌ ಅಭ್ಯರ್ಥಿ ಗೆಲ್ಲಿಸಿಕೊಳ್ಳುವ ಭರಾಟೆಯಲ್ಲಿ ಎಡವಟ್ಟು ಮಾಡಿಕೊಂಡಿದ್ದು, ಸ್ಥಳೀಯರು ಹಾಗೂ ವಿಪಕ್ಷಗಳಿಂದ ಭಾರಿ ಟೀಕೆ ವ್ಯಕ್ತವಾಗಿದೆ. ಇನ್ನು ಶ್ರೀರಂಗಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್‌ನ ಹಾಲಿ ಶಾಸಕ ರವೀಂದ್ರ ಶ್ರೀಕಂಠಯ್ಯ ಸೇರಿ ಜೆಡಿಎಸ್‌ ನಾಯಕರಿಗೆ ಟೀಕೆ ಮಾಡಲು ಅಸ್ತ್ರ ಸಿಕ್ಕಂತಾಗಿದೆ.

ಟಿಪ್ಪು ಕುರಿತ ಬಿಜೆಪಿ ಸುಳ್ಳು ಇತಿಹಾಸಕಾರರಿಂದ ಬಯಲು: ಡಿಕೆಶಿ

ಮೀಸಲಾತಿ ವಿಚಾರದಲ್ಲಿ ಗೊಂದಲ ಸೃಷ್ಟಿಸಿದ ಸಿಎಂ- ಡಿಕೆಶಿ ಆರೋಪ

ಬೆಂಗಳೂರು (ಮಾ.28): ರಾಜ್ಯದಲ್ಲಿ ಮೀಸಲಾತಿ ವಿಚಾರದಲ್ಲಿ ಮುಖ್ಯಮಂತ್ರಿಗಳು ದೊಡ್ಡ ಗೊಂದಲ ಸೃಷ್ಟಿ ಮಾಡಿದ್ದಾರೆ. ಈಗ ಯಡಿಯೂರಪ್ಪ ಅವರನ್ನು ಮತ್ತೆ ಮುಖ್ಯ ವೇದಿಕೆಗೆ ತರಬೇಕು ಅಂತ ಯಡಿಯೂರಪ್ಪ ಮನೆಗೆ ಅಮಿತ್ ಷಾ ಅವರನ್ನು ಕರೆದುಕೊಮಡು ಹೋಗಿ ಬೆನ್ನು ತಟ್ಟಿಸಿ ಬಂದಿದ್ದಾರೆ. ಯಡಿಯೂರಪ್ಪ ಅವರ ಮನೆ ಮೇಲೆ ಕಲ್ಲು ಹೊಡೆಯುವುದು, ಬಿಜೆಪಿಯವರ ಆಂತರಿಕ ಕುತಂತ್ರವಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ. ರಾಜ್ಯ ರಾಜಕಾರಣದಲ್ಲಿ ಯಡಿಯೂರಪ್ಪ ಅವರನ್ನು ಮುಖ್ಯ ವೇದಿಕೆಗೆ ಕರೆತರಲು ಅಮಿತ್‌ ಶಾ ಅವರನ್ನು ಅವರ ಮನೆಗೆ ಕರೆದುಕೊಂಡು ಹೋಗಲಾಗಿತ್ತು. ಆದರೆ, ಮೀಸಲಾತಿ ಹಂಚಿಕೆ ವಿಚಾರದಲ್ಲಿ ಯಡಿಯೂರಪ್ಪನವರು ಸರ್ಕಾರದ ಪ್ರತಿನಿಧಿಯಾಗಿ ಭಾಗಿಯಾಗಿರಲಿಲ್ಲ. ಆದರೂ, ಅವರ ಮನೆ ಮೇಲೆ ಕಲ್ಲು ತೂರಾಟ ನಡೆದಿದೆ ಎಂದರೆ ಇದು ಬಿಜೆಪಿಯ ಆಂತರಿಕ ಕುತಂತ್ರವಾಗಿದೆ. ಯಡಿಯೂರಪ್ಪ ಅವರನ್ನು ರಾಜಕೀಯವಾಗಿ ಮುಗಿಸಬೇಕು ಅಂತ ಬೇಕು ಅಂತ ಕಲ್ಲು ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

click me!