ಜೈಲಿನಿಂದ ಬಿಡುಗಡೆಗೊಂಡ ಬಳಿಕ ಟೆಂಪಲ್ ರನ್ ಮಾಡಿದ್ದ ಡಿಕೆಶಿ ಆ ಬಳಿಕ ಉಪಚುನಾವಣೆಯಲ್ಲಿ ಬ್ಯುಸಿಯಾಗಿದ್ದರು. ಇದೀಗ ಬೈ ಎಲೆಕ್ಷನ್ ಮುಗಿದಿದ್ದು, ಸೋಮವಾರ ಫಲಿತಾಂಶ ಪ್ರಕಟವಾಗಲಿದೆ. ಇದರ ಮಧ್ಯೆ ಡಿಕೆ ಶಿವಕುಮಾರ್ ಸರ್ಕಾರಕ್ಕೆ ಖಡಕ್ ಎಚ್ಚರಿಕೆ ನೀಡುವ ಮೂಲಕ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ.
ಬೆಂಗಳೂರು, (ಡಿ.07): ಕಾಂಗ್ರೆಸ್ ನಾಯಕ, ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸಿಎಂ ಅವರಿಗೆ ಮೆಡಿಕಲ್ ಕಾಲೇಜು ವಿಚಾರವಾಗಿ ಪತ್ರ ಬರೆದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
undefined
ರಾಮನಗರ ಜಿಲ್ಲೆಯ ಕನಕಪುರಕ್ಕೆ ಮಂಜೂರಾಗಿದ್ದ ವೈದ್ಯಕೀಯ ಕಾಲೇಜನ್ನು ಕನಕಪುರದಲ್ಲೇ ಮೆಡಿಕಲ್ ಕಾಲೇಜು ಸ್ಥಾಪನೆ ಮರು ಆದೇಶ ಹೊರಡಿಸಬೇಕೆಂದು ಆಗ್ರಹಿಸಿ ಮಾಜಿ ಸಚಿವ ಡಿ. ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರ ಬರೆದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಮೆಡಿಕಲ್ ಕಾಲೇಜು ಸ್ಥಾಪನೆಗೆ BSY ಗುದ್ದಲಿ ಪೂಜೆ!
ಕನಕಪುರ ಮೆಡಿಕಲ್ ಕಾಲೇಜು ಆದೇಶವನ್ನ ಸರ್ಕಾರ ವಾಪಸ್ ಪಡೆದ ಹಿನ್ನೆಲೆ ಪತ್ರ ಬರೆದಿರುವ ಡಿ.ಕೆ. ಶಿವಕುಮಾರ್, ಚಿಕ್ಕಬಳ್ಳಾಪುರಕ್ಕೆ ಮೆಡಿಕಲ್ ಕಾಲೇಜು ಕೊಟ್ಟಿರುವುದಕ್ಕೆ ನನ್ನ ಅಭ್ಯಂತರವಿಲ್ಲ. ಆದರೆ ಕನಕಪುರಕ್ಕೆ ಮಂಜೂರಾಗಿದ್ದನ್ನು ರದ್ದುಮಾಡಿರುವುದಕ್ಕೆ ಆಕ್ಷೇಪವಿದೆ ಎಂದು ಪತ್ರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಬೇಕು. ಕಾಲೇಜು ನೀಡದಿದ್ದರೆ ಹೋರಾಟ ಮಾಡುತ್ತೇನೆ. ಭೂಮಿಪೂಜೆ ಮಾಡುವುದಕ್ಕೆ ಸಮಯ ಕೊಡುವಂತೆ ಮನವಿ ಮಾಡಿ ಡಿ.ಕೆ. ಶಿವಕುಮಾರ್ ಸರ್ಕಾರಕ್ಕೆ ಹೋರಾಟದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಪ್ರತಿಷ್ಠೆಯಾದ ಮೆಡಿಕಲ್ ಕಾಲೇಜ್: ಡಿಕೆಶಿಗೆ ಡಿಚ್ಚಿ ಕೊಡಲು ಸುಧಾಕರ್ ಮೈಲೇಜ್
ಈ ಹಿಂದೆ ಮೈತ್ರಿ ಸರ್ಕಾರದ ಬಜೆಟ್‌ನಲ್ಲಿ ಅಂದಿನ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕನಕಪುರಕ್ಕೆ ಮೆಡಿಕಲ್ ಕಾಲೇಜು ಘೋಷಣೆ ಮಾಡಿದ್ದರು.
ಆದ್ರೆ, ಬಳಿಕ ಬದಲಾದ ರಾಜಕೀಯ ವಿದ್ಯಾಮಾನಗಳಿಂದ ಸಿಎಂ ಆದ ಬಿ.ಎಸ್.ಯಡಿಯೂರಪ್ಪ, ಕನಕಪುರಕ್ಕೆ ಮಂಜೂರಾಗಿದ್ದ ಮೆಡಿಕಲ್ ಕಾಲೇಜನ್ನು ಅನರ್ಹ ಶಾಸಕ ಡಾ.ಕೆ. ಸುಧಾಕರ್ ಅವರ ಕ್ಷೇತ್ರ ಚಿಕ್ಕಬಳ್ಳಾಪುರಕ್ಕೆ ಶಿಫ್ಟ್ ಮಾಡಿದ್ದಾರೆ. ಅಷ್ಟೇ ಅಲ್ಲದೇ ಈಗಾಗಲೇ ಮೆಡಿಕಲ್ ಕಾಲೇಜಿಗೆ ಭೂಮಿಪೂಜೆಯನ್ನು ಸಹ ಮಾಡಿದ್ದಾರೆ.
ಮತ್ತೆ ಚಿಕ್ಕಬಳ್ಳಾಪುರಕ್ಕೇ ಬಂತು ವೈದ್ಯ ಕಾಲೇಜು!
ಇದು ಡಿಕೆಶಿ ಕೆಂಗಣ್ಣಿಗೆ ಗುರಿಯಾಗಿದ್ದು, ಸರ್ಕಾರದ ವಿರುದ್ಧ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದರು. ಅಷ್ಟೇ ಅಲ್ಲದೇ ಪ್ರಾಣ ಹೋದರೂ ಪರವಾಗಿಲ್ಲ ಮೆಡಿಕಲ್ ಕಾಲೇಜು ಬಿಡಲ್ಲ ಎಂದು ಡಿಕೆಶಿ ಹೇಳಿದ್ದರು. ಆಗ ಬೈ ಎಲೆಕ್ಷನ್ ಎದುರಾಗಿದ್ದರಿಂದ ಸೈಲೆಂಟ್ ಆಗಿದ್ದ ಕನಕಪುರ ಬಂಡೆ, ಇದೀಗ ಮತ್ತೆ ಮೆಡಿಕಲ್ ಬಗ್ಗೆ ಪತ್ರ ಬರೆಯುವ ಮೂಲಕ ಪರೋಕ್ಷವಾಗಿ ಪ್ರತಿಭಟನೆಯ ಸಂದೇಶ ರವಾನಸಿದ್ದಾರೆ.
ಈ ಮೆಡಿಕಲ್ ವೈದ್ಯಕೀಯ ಕಾಲೇಜು ವಿವಾದ ಮುಂದಿನ ದಿನಗಳಲ್ಲಿ ಯಾವ ರೀತಿಯಾಗಿ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸುತ್ತೆ ಎನ್ನುವುದು ಕಾದು ನೋಡಬೇಕಿದೆ.
ಡಿಸೆಂಬರ್ 7ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ