ಮಾದಪ್ಪನ ಆಣೆ, ಡಿಕೆಶಿ ಸಿಎಂ ಆಗೇ ಆಗ್ತಾರೆ: ಶಾಸಕ ಇಕ್ಬಾಲ್‌ ಹುಸೇನ್‌

Kannadaprabha News   | Kannada Prabha
Published : Jun 23, 2025, 09:36 AM IST
iqbal hussain

ಸಾರಾಂಶ

‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ಕನಕಪುರ (ಜೂ.23): ‘ಮಾದಪ್ಪನ ಆಣೆ; 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ’ ಎಂದು ರಾಮನಗರ ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ. ನಗರದಲ್ಲಿ ಭಾನುವಾರ ಸುದ್ದಿಗಾರರ ಜೊತೆ ಅವರು ಮಾತನಾಡಿದರು. ಡಿಕೆಶಿ ಸಿಎಂ ಆಗುವ ಕನಸು ಕಾಣುತ್ತಿದ್ದಾರೆ ಎಂಬ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸಿ, ಮಾದಪ್ಪನ ಆಣೆಯಾಗಿಯೂ ಹೇಳುವೆ, 200% ಡಿಕೆಶಿ ಸಿಎಂ ಆಗೇ ಆಗುತ್ತಾರೆ ಎಂದರು.

ಕುಮಾರಸ್ವಾಮಿ ಅವರು ಕಳೆದ ಬಾರಿ ನಾವೇ ಸರ್ಕಾರ ರಚನೆ ಮಾಡ್ತೇವೆ ಅಂತ ಹೇಳಿದ್ದರು. ಆದರೆ, ಕಾಂಗ್ರೆಸ್ ಪಕ್ಷ 140 ಸ್ಥಾನ ಪಡೆದು ಸರ್ಕಾರ ರಚನೆ ಮಾಡಿದೆ. ರಾಜ್ಯದ ಜನತೆಗೆ ಗ್ಯಾರಂಟಿ ಯೋಜನೆ ಕೊಡುವುದಿಲ್ಲ ಅಂದ್ರು, ಈಗ ನಾವು ಕೊಡ್ತಾ ಇಲ್ವಾ?. ಸರ್ಕಾರ ನಡೆಸಲ್ಲ ಅಂದ್ರು, ಈಗ ಸರ್ಕಾರ ನಡೆಸ್ತಾ ಇಲ್ವಾ?. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿರುವುದರಿಂದ ಜನ ನಮಗೆ ಒಳ್ಳೆಯ ತೀರ್ಪು ಕೊಡ್ತಿದ್ದಾರೆ. ಮುಂದೆ ಇನ್ನೂ ಹೆಚ್ಚಿನ ಸ್ಥಾನಗಳನ್ನು ಗೆದ್ದು, ನಮ್ಮ ನಾಯಕ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲೆ ಸರ್ಕಾರ ರಚನೆ ಮಾಡುತ್ತೇವೆ. ಮಾದಪ್ಪನ ಆಣೆಯಾಗೂ ಡಿಕೆಶಿ ಸಿಎಂ ಆಗಲಿದ್ದಾರೆ ಎಂದರು.

ಎನ್‌ಪಿಎಸ್‌ನಿಂದ ಒಪಿಎಸ್ ಪಿಂಚಣಿಗೆ ಸಿಎಂಗೆ ಮನವಿ: ಸರ್ಕಾರಿ ಅಧಿಕಾರಿಗಳು ಮತ್ತು ನೌಕರರ ಬಹುದಿನಗಳ ಬೇಡಿಕೆ ಎನ್‌ಪಿಎಸ್‌ನಿಂದ ಒಪಿಎಸ್‌ ಪಿಂಚಣಿ ವ್ಯವಸ್ಥೆಗೆ ಬದಲಾವಣೆ ಮಾಡುವುದನ್ನು ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಯವರಲ್ಲಿ ಮನವಿ ಮಾಡುವುದಾಗಿ ಇಕ್ಬಾಲ್ ಹುಸೇನ್ ಭರವಸೆ ನೀಡಿದರು. ನಗರದ ಜಿಪಂ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಪಂ ಹಾಗೂ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ 2025ನೇ ಸಾಲಿನ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ 2023ನೇ ಸಾಲಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪಡೆದ ಸರ್ಕಾರಿ ನೌಕರರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಒಪಿಎಸ್ ಪಿಂಚಣಿ ವ್ಯವಸ್ಥೆ ಜಾರಿಗೆ ತರಬೇಕೆಂಬ ಸರ್ಕಾರಿ ನೌಕರರ ಮನವಿಯನ್ನು ಸಿಎಂ ಮತ್ತು ಡಿಸಿಎಂ ಅವರಿಗೆ ಶಿಫಾರಸ್ಸು ಮಾಡುತ್ತೇನೆ ಎಂದು ಭರವಸೆ ನೀಡಿದರು.

ಸರ್ಕಾರಿ ಕೆಲಸ ದೇವರ ಕೆಲಸ ಇದನ್ನು ಅರಿತು ಸರ್ಕಾರಿ ಅಧಿಕಾರಿಗಳು ಮತ್ತು ನೌಕರರು ಜವಾಬ್ದಾರಿಯುತರಾಗಿ ಕಾರ್ಯ ನಿರ್ವಹಿಸಬೇಕು. ಸಮಾಜದಲ್ಲಿ ಕೋಟ್ಯಂತರ ಜನರು ವಾಸಿಸುತ್ತಿದ್ದಾರೆ. ಅದರಲ್ಲಿ ಕೆಲವರಿಗೆ ಮಾತ್ರ ಸರ್ಕಾರಿ ಕೆಲಸ ಮಾಡುವ ಭಾಗ್ಯ ಲಭಿಸುತ್ತದೆ. ಅಧಿಕಾರಿ ಎನಿಸಿಕೊಳ್ಳಲು ಅವಕಾಶ ಸಿಗುತ್ತದೆ. ಆದ್ದರಿಂದ ತಮಗೆ ದೊರೆತ ಕೆಲಸವನ್ನು ಜವಾಬ್ದಾರಿಯುತವಾಗಿ, ಪ್ರಾಮಾಣಿಕವಾಗಿ, ಗೌರವದೊಂದಿಗೆ ಕರ್ತವ್ಯ ನಿರ್ವಹಿಸಿ ಕೊಟ್ಟಂತಹ ಸ್ಥಾನವನ್ನು ಉಳಿಸಿಕೊಳ್ಳುವಂತೆ ತಿಳಿಸಿದರು.

ಸರ್ಕಾರಿ ನೌಕರರು ಮತ್ತು ಅಧಿಕಾರಿಗಳು ಕಾನೂನು ಚೌಕಟ್ಟಿನಲ್ಲಿ ಹಾಗೂ ಸಾರ್ವಜನಿಕರ ಒತ್ತಡಗಳಿಂದ ಕರ್ತವ್ಯ ನಿರ್ವಹಿಸುವಂತಾಗಿದೆ ನಿಮಲ್ಲಿಗೆ ಕೆಲಸಕ್ಕೆಂದು ಬರುವ ಸಾರ್ವಜನಿಕರಿಗೆ ಗೌರವ ನೀಡಿ ಪ್ರೀತಿಯಿಂದ ಕಾಣಿ ಹಾಗೂ ಸಂಬಳ ಪಡೆಯುವ ಉದ್ದೇಶದಿಂದ ಕಾರ್ಯ ನಿರ್ವಹಿಸಬೇಡಿ ಸೇವಾ ಮನೋಭಾವದಿಂದ ಕರ್ತವ್ಯವನ್ನು ನಿರ್ವಹಿಸುವಂತೆ ಇಕ್ಬಾಲ್ ಹುಸೇನ್ ಕಿವಿಮಾತು ಹೇಳಿದರು.

ಜಿಲ್ಲಾಧಿಕಾರಿ ಯಶವಂತ್ ವಿ.ಗುರುಕರ್ ಮಾತನಾಡಿ, ನಿಮ್ಮ ಕೆಲಸವನ್ನು ಪ್ರಾಮಾಣಿಕವಾಗಿ ಹಾಗೂ ಜನರೊಂದಿಗೆ ಬೆರೆತು ಮಾಡಬೇಕು. ಖಾಸಗಿ ಕಂಪನಿಗಳಲ್ಲಿ ಕೆಲಸ ಮಾಡಿ ಸಿಗುವ ತೃಪ್ತಿಗಿಂತ ಸರ್ಕಾರಿ ಅಧಿಕಾರಿಯಾಗಿ ಜನರ ಸೇವೆ ಮಾಡಿದ ತೃಪ್ತಿ ಹೆಚ್ಚಾಗಿರುತ್ತದೆ. ಆದುದರಿಂದ ನೀವು ಸಹ ಜನಸೇವೆ ಮಾಡಬೇಕು. ಪ್ರಶಸ್ತಿಗೆ ಇನ್ನು ಹೆಚ್ಚು ಅಧಿಕಾರಿ ನೌಕರರು ಅರ್ಹರಿದ್ದು ಮುಂದಿನ ದಿನಗಳಲ್ಲಿ ಅವರನ್ನು ಗುರುತಿಸಿ ಪ್ರಶಸ್ತಿ ನೀಡಲಾಗುವುದು ಎಂದು ಹೇಳಿದರು.ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳ ಅಧ್ಯಕ್ಷ ರಾಜು, ವಿಜಯ ಕಾಲೇಜಿನ ಪ್ರಾಧ್ಯಾಪಕ ಶಾಂತರಾಜು ಉಪನ್ಯಾಸ ನೀಡಿದರು. ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಕೆ.ಸತೀಶ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಐಷಾರಾಮಿ ಕಾರ್ಟಿಯರ್ ವಾಚ್‌: ಲೋಕಾಯುಕ್ತ ಅಫಿಡವಿಟ್ ರಿವೀಲ್ ಮಾಡಿದ ಡಿ.ಕೆ. ಶಿವಕುಮಾರ್!
'ನಿಮಗೆ ಧಮ್ ಇದ್ರೆ..; ದ್ವೇಷ ಭಾಷಣ ಮಸೂದೆ ಜಾರಿಗೆ ಮುಂದಾಗಿರೋ ಕಾಂಗ್ರೆಸ್ ಸರ್ಕಾರಕ್ಕೆ ಸಿಟಿ ರವಿ ನೇರ ಸವಾಲು!