ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅಚ್ಚರಿ ಮೂಡಿಸಿದರು.
ಮೈಸೂರು (ಜೂ.21): ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ ಚನ್ನಪಟ್ಟಣ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಿಲ್ಲ. ದು ನನ್ನ ರಾಜಕೀಯ ಅನುಭವದಿಂದ ಹೇಳುತ್ತಿದ್ದೇನೆ ಎಂದು ಹೇಳುವ ಮೂಲಕ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿಟಿ ದೇವೇಗೌಡ ಅಚ್ಚರಿ ಮೂಡಿಸಿದರು.
ಇಂದು ಮೈಸೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚನ್ನಪಟ್ಟಣ ಉಪಚುನಾವಣೆ ಗೆಲ್ಲಲು ಡಿಕೆ ಶಿವಕುಮಾರ್ ತಂತ್ರ ಮಾಡಿರುವುದು ನಿಜ. ಅವರ ಮಾತುಗಳಲ್ಲಿ ತಂತ್ರಗಾರಿಕೆ ಇದೆ ಅಷ್ಟೇ, ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಬದಲಾಗಿ ಡಿಕೆ ಸುರೇಶ್‌ರನ್ನ ಕಣಕ್ಕಿಳಿಸುವ ದೃಷ್ಟಿಯಿಂದ ನಾನು ಬಂದರೆ ಮತ ಹಾಕುತ್ತೀರಾ ಎಂದು ಜನರನ್ನು ಪರೋಕ್ಷವಾಗಿ ಕೇಳುತ್ತಿದ್ದಾರೆ ಅಷ್ಟೇ. ಇದು ನನ್ನ ವೈಯಕ್ತಿಕ ಅಭಿಪ್ರಾಯ ಎಂದರು.
undefined
ಜಗದೀಶ ಶೆಟ್ಟರ್ ಸೋತಿದ್ರೆ ಸಾಧು ಆಗಿ ನಾನು ಹಿಮಾಲಯ ಸೇರುತ್ತಿದ್ದೆ: ರಮೇಶ ಜಾರಕಿಹೊಳಿ ಅಚ್ಛರಿ ಮಾತು!
ಚನ್ನಪಟ್ಟಣ ಉಪಚುನಾವಣೆ ಎಲ್ಲ ಕ್ಷೇತ್ರಗಳಿಗಿಂತಲೂ ಜೋರಾಗಿರಲಿದೆ. ಇಲ್ಲಿ ಜೆಡಿಎಸ್ ಪ್ರಬಲವಾಗಿದೆ. ಜಿದ್ದಾಜಿದ್ದಿನ ಫೈಟ್ ನಡೆಯುತ್ತದೆ. ನಿಖಿಲ್ ಕುಮಾರಸ್ವಾಮಿ ನಾನೇ ಸ್ಪರ್ಧೆ ಮಾಡುತ್ತೇನೆಂದು ಎಲ್ಲಿಯೂ ಹೇಳಿಲ್ಲ. ಸಿಪಿ ಯೋಗೇಶ್ವರ್ ನನ್ನ ಪರವಾಗಿದ್ದಾರೆ ಎಂದಷ್ಟೇ ಹೇಳಿದ್ದಾರೆ. ಆದರೆ ಯಾರು ಸ್ಪರ್ಧಿಸಬೇಕು ಎಂಬುದು ಅಂತಿಮವಾಗಿ ಮೈತ್ರಿ ನಾಯಕರು ಕುಳಿತು ತೀರ್ಮಾನ ಮಾಡುತ್ತೇವೆ ಎಂದರು.
ಎಲ್ಲ ಉಪಚುನಾವಣೆಗಳು ಸರ್ಕಾರದ ಪರವಾಗಿಯೇ ಇರುವುದಿಲ್ಲ. ಒಂದೊಂದು ಬಾರಿ ಒಂದೊಂದು ಟ್ರೆಂಡ್ ನಡೆಯುತ್ತದೆ. ನಮ್ಮ ಅಭ್ಯರ್ಥಿ ಯಾರು ಎಂಬುದನ್ನ ನಾವಿನ್ನು ತೀರ್ಮಾನ ಮಾಡಿಲ್ಲ. ಕೋರ್ ಕಮಿಟಿಯಲ್ಲಿ ಚರ್ಚೆ ಮಾಡಿ ನಾನೇ ಅದನ್ನ ಹೇಳುತ್ತಿದ್ದೇನೆ. ಕೋರ್ ಕಮಿಟಿ ಅಧ್ಯಕ್ಷ ನಾನೇ ಆಗಿರುವ ಕಾರಣ ಅಭ್ಯರ್ಥಿ ವಿವಾದದಲ್ಲಿ ವೈಯಕ್ತಿಕ ಅಭಿಪ್ರಾಯ ಹೇಳಲು ಬರುವುದಿಲ್ಲ ಎಂದರು.
ಇನ್ನು ರೇಣುಕಾಸ್ವಾಮಿ ಕೊಲೆ ಪ್ರಕರಣ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈ ಪ್ರಕರಣದಲ್ಲಿ ಪೊಲೀಸರು ಉತ್ತಮ ರೀತಿ ಕೆಲಸ ಮಾಡುತ್ತಿದ್ದಾರೆ. ಪೊಲೀಸರ ಮೇಲೆ ನಂಬಿಕೆ ಇದೆ, ಅವರ ಮೇಲೆ ಗೌರವ ಇನ್ನಷ್ಟು ಹೆಚ್ಚಾಗಿದೆ. ಈ ವಿಚಾರವಾಗಿ ಮುಖ್ಯಮಂತ್ರಿಗಳೇ ಕ್ಯಾಬಿನೆಟ್ ಮೀಟಿಂಗ್ ನಲ್ಲಿ ಚರ್ಚೆ ಮಾಡಿದ್ದಾರೆ. ಘಟನೆ ವಿಡಿಯೋ ಸ್ವತಃ ನಾನೇ ನೋಡಿದ್ದೇನೆ ಎಂದು ಸಿಎಂ ಹೇಳಿದ್ದಾರೆ. ಇದರಿಂದ ಯಾರು ಪರ ಮಾತನಾಡಬಾರದು ಎಂದು ಅವರೇ ಸೂಚನೆ ನೀಡಿದ್ದಾರೆ. ಯಾರೇ ಆಗಿರಲಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿ. ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಲಿ ಎಂದರು.