
ಬೆಂಗಳೂರು, (ಜುಲೈ.08): ಕೊರೋನಾ ಮಹಾಮಾರಿ ಎದುರಿಸುವಲ್ಲಿ ಸಾರ್ವಜನಿಕರಿಗೆ ನೆರವಾಗಲು ಕಾಂಗ್ರೆಸ್ ಕಾರ್ಯಕರ್ತರಿಗೂ ಅವಕಾಶ ನೀಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಆಗ್ರಹಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಪತ್ರ ಬರೆದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರಿಗೆ ಸ್ವಯಂ ಸೇವಕರಾಗಿ ಕೆಲಸ ಮಾಡಲು ಅವಕಾಶ ಕೊಡಬೇಕು ಎಂದು ಡಿಕೆ ಶಿವಕುಮಾರ್, ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಪದಗ್ರಹಣ: ಕನಕಪುರ ರಣಕಲಿ ಶಿಕಾರಿವೀರನ ಮನ ಗೆದ್ದದ್ದು ಹೇಗೆ?
ಜನಸೇವೆ ವಿಚಾರದಲ್ಲಿ ನಮ್ಮ ಪಕ್ಷ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ. ಕೋವಿಡ್ ಸಂತ್ರಸ್ತರ ನೆರವಿಗೆ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಎಲ್ಲಾ ಜಿಲ್ಲಾ, ತಾಲೂಕು ಹಾಗೂ ಪಂಚಾಯಿತಿ ಮಟ್ಟದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಹಗಲಿರುಳು ದುಡಿದು, ತನು ಮನ ಧನ ಸಹಾಯ ಮಾಡುತ್ತಿದ್ದಾರೆ.
ನಮ್ಮ ಪಕ್ಷದ ಕಾರ್ಯಕರ್ತರು ಸ್ವಯಂ ಸೇವಕರಾಗಿ ಕೆಲಸ ಮಾಡಲು ಸದಾ ಸನ್ನದ್ಧರಾಗಿದ್ದು, ಜನಸೇವೆಗೆ ಲಭ್ಯರಿದ್ದಾರೆ. ಹೀಗಾಗಿ ಸರ್ಕಾರ ಅಧಿಕೃತವಾಗಿ ನಮ್ಮ ಕಾರ್ಯಕರ್ತರಿಗೂ ಕೊರೊನಾ ವಾರಿಯರ್ಸ್ ಆಗಿ ಸೇವೆ ಸಲ್ಲಿಸಲು ಅವಕಾಶ ನೀಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ಇದ್ದಕ್ಕಿದ್ದಂತೆ ಯಡಿಯೂರಪ್ಪ ಫೋನ್ ಕಾಲ್: ಥ್ಯಾಂಕ್ಸ್ ಹೇಳಿದ ಡಿಕೆ ಶಿವಕುಮಾರ್
ಇತ್ತೀಚೆಗೆ ಬೆಂಗಳೂರಿನಲ್ಲಿ ಕೊರೋನಾ ನಿರ್ವಹಣೆಗೆ ಬಿಜೆಪಿ ಕಾರ್ಯಕರ್ತರನ್ನು (ಕೊರೊನಾ ವಾರಿಯರ್ಸ್) ಬಳಸಿಕೊಳ್ಳುವುದಾಗಿ ಉಪಮುಖ್ಯಮಂತ್ರಿ ಅಶ್ವತ್ಥ್ ನಾರಾಯಣ ಹೇಳಿದ್ದರು. ಇದರ ಬೆನ್ನಲ್ಲೇ ಇದೀಗ ಕಾಂಗ್ರೆಸ್ ಸಹ ಕೊರೋನಾ ನಿರ್ವಹಣೆಗೆ ಮುಂದೆ ಬಂದಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.