ದೇವೇಗೌಡರ ಅಳಿಯ ಡಾ| ಸಿ.ಎನ್.ಮಂಜುನಾಥ್ ಬಿಜೆಪಿ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದರಿಂದ 5ನೇ ಬಾರಿಗೆ ಎರಡೂ ಕುಟುಂಬಗಳು ಮುಖಾಮುಖಿಯಾಗಿದ್ದವು ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರೆ, ದೇವೇಗೌಡರ ಕುಟುಂಬದ ಮೂಲದವರೇ ಆದ ಡಾ| ಸಿ.ಎನ್.ಮಂಜುನಾಥ್ ಇದೇ ಮೊದಲ ಬಾರಿಗೆ ಎನ್‌ಡಿಎ ಮೈತ್ರಿ ಕೂಟದಿಂದ ಸ್ಪರ್ಧೆ ಮಾಡಿದ್ದರು.
ರಾಮನಗರ(ಜೂ.05): ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಚುನಾವಣೆ ಮೂಲಕ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದ ಎದುರು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕುಟುಂಬ 3 ನೇ ಬಾರಿ ಸೋಲು ಕಂಡಿದೆ.
ದೇವೇಗೌಡರ ಅಳಿಯ ಡಾ| ಸಿ.ಎನ್.ಮಂಜುನಾಥ್ ಬಿಜೆಪಿ ಹಾಗೂ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಕಾಂಗ್ರೆಸ್‌ನಿಂದ ಸ್ಪರ್ಧೆ ಮಾಡಿದ್ದರಿಂದ 5ನೇ ಬಾರಿಗೆ ಎರಡೂ ಕುಟುಂಬಗಳು ಮುಖಾಮುಖಿಯಾಗಿದ್ದವು ಸಂಸದ ಡಿ.ಕೆ.ಸುರೇಶ್ 4ನೇ ಬಾರಿ ಅದೃಷ್ಟ ಪರೀಕ್ಷೆಗೆ ಮುಂದಾಗಿದ್ದರೆ, ದೇವೇಗೌಡರ ಕುಟುಂಬದ ಮೂಲದವರೇ ಆದ ಡಾ| ಸಿ.ಎನ್.ಮಂಜುನಾಥ್ ಇದೇ ಮೊದಲ ಬಾರಿಗೆ ಎನ್‌ಡಿಎ ಮೈತ್ರಿ ಕೂಟದಿಂದ ಸ್ಪರ್ಧೆ ಮಾಡಿದ್ದರು. ಈ ಕಾರಣದಿಂದಾಗಿ 2 ಕುಟುಂಬಗಳ ಸೆಣೆಸಾಟದಿಂದಾಗಿ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಹೈವೋಲೈಜ್ ಕ್ಷೇತ್ರವಾಗಿ ಗಮನ ಸೆಳೆದಿತ್ತು.
undefined
ಜನರ ಅಲೆಯಿಂದ ಯದುವೀರ್ ಒಡೆಯರ್ ಗೆಲುವು: ಎಚ್ ವಿಶ್ವನಾಥ್
ಈ ಮೊದಲು 1985ರಲ್ಲಿ ಸಾತನೂರು ಕ್ಷೇತ್ರದಿಂದ ಎಚ್.ಡಿ.ದೇವೆಗೌಡ ವಿರುದ್ಧ ಕಾಂಗ್ರೆಸ್ ಪಕ್ಷದಿಂದ ಡಿ.ಕೆ.ಶಿವಕುಮಾರ್ ಚೊಚ್ಚಲ ಚುನಾವಣೆ ಎದುರಿಸಿದ್ದರು. ಆ ಚುನಾವಣೆಯಲ್ಲಿ ದೇವೇಗೌಡರು ಗೆಲುವು ಸಾಧಿಸಿದ್ದರು. ಬಳಿಕ 1999ರಲ್ಲಿ ಸಾತನೂರು ವಿಧಾನಸಭಾ ಕ್ಷೇತ್ರದಿಂದ ಡಿ.ಕೆ.ಶಿವಕುಮಾರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಈ ಚುನಾವಣೆ ಯಲ್ಲಿ ಡಿ.ಕೆ.ಶಿವಕುಮಾರ್ ಗೆಲುವು ಅಲಂಕರಿಸಿದ್ದರು, 2002ರಲ್ಲಿ ನಡೆದ ಕನಕಪುರ ಲೋಕಸಭಾ ಉಪಚುನಾ ವಣೆಯಲ್ಲಿ ದೇವೇಗೌಡರ ವಿರುದ್ಧ ಡಿ.ಕೆ.ಶಿವಕುಮಾರ್ ಸ್ಪರ್ಧೆ ಮಾಡಿದ್ದರು. ಆ ಚುನಾವಣೆಯಲ್ಲಿ ದೇವೇಗೌಡರಿಗೆ ಗೆಲುವು ಒಲಿಯಿತು. ಬಳಿಕ 2013ರಲ್ಲಿ ಕುಮಾರಸ್ವಾಮಿ ರಾಜೀನಾಮೆಯಿಂದ ಎದುರಾದ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ವಿರುದ್ಧ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಈ ಚುನಾವಣೆಯಲ್ಲಿ ಗೆಲುವು ಸಾಧಿಸಿ ಕ್ಷೇತ್ರದ ಮೇಲೆ ಹಿಡಿತ ಸಾಧಿಸಿದ್ದ ಡಿ.ಕೆ.ಸುರೇಶ್ ಅವರ 4ನೇ ಬಾರಿ ಸಂಸತ್ ಪ್ರವೇಶಿಸುವ ಕನಸನ್ನು ಡಾ| ಸಿ.ಎನ್. ಮಂಜುನಾಥ್ ನುಚ್ಚುನೂರು ಮಾಡಿದ್ದಾರೆ.
ಮೈತ್ರಿ ಲೆಕ್ಕಾಚಾರಗಳು ವರ್ಕ್ ಔಟ್
ರಾಮನಗರ: ಹೈವೋಲೈಜ್ ಕ್ಷೇತ್ರವಾಗಿದ್ದ ಬೆಂಗಳೂರು ಗ್ರಾಮಾಂತರದಲ್ಲಿ ಬಿಜೆಪಿ - ಜೆಡಿಎಸ್ ಮೈತ್ರಿ ಅಭ್ಯರ್ಥಿ ಡಾ| ಸಿ.ಎನ್.ಮಂಜುನಾಥ್ ಗೆಲುವಿನ ಲೆಕ್ಕಾಚಾರಗಳು ವರ್ಕ್‌ಔಟ್ ಆಗಿವೆ.
ಚುನಾವಣೆ ಫಲಿತಾಂಶ ಜೆಡಿಎಸ್ ಬಲಿಷ್ಠ ಎಂಬುದಕ್ಕೆ ಸಾಕ್ಷಿ: ಶರವಣ
ಕಳೆದ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಬಲದೊಂದಿಗೆ ಕಾಂಗ್ರೆಸ್ ಡಿ.ಕೆ.ಸುರೇಶ್ ರವರು 2,06.879 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಆಗ ಕ್ಷೇತ್ರದಲ್ಲಿ ಮೈತ್ರಿ ಕುರಿತು ಅನುಮಾನಗಳು ಮೂಡಿದ್ದವು. ಆದರೆ, ಈ ಬಾರಿ ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಜೆಡಿಎಸ್ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ಸೇರಿಕೊಂಡಿತು. ಉಭಯ ಪಕ್ಷಗಳ ನಾಯಕರು ಮೈತ್ರಿ ಅಭ್ಯರ್ಥಿ ಡಾ| ಸಿ.ಎನ್.ಮಂಜುನಾಥ್ ಅವರಿಗೆ ಅಧಿಕ ಮತಗಳನ್ನು ತಂದುಕೊಡುವ ಮೂಲಕ ಮೈತ್ರಿ ಧರ್ಮ ಪಾಲನೆ ಮಾಡಿದ್ದಾರೆ. ಈ ಮೊದಲು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸಹೋದರ ಡಿ.ಕೆ.ಸುರೇಶ್ ಅವರನ್ನು ಮಣಿಸಲು ಬಿಜೆಪಿ ಜೆಡಿಎಸ್ ಮುಖ್ಯಮಂತ್ರಿ ಕುಮಾರಸ್ವಾಮಿ, ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಹೆಸರುಗಳು ಕೂಡ ಚರ್ಚೆಗೆ ಬಂದಿದ್ದವು, ಆದರೆ, ಇಬ್ಬರು ನಾಯಕರು ಸ್ಪರ್ಧೆಗೆ ಹಿಂದೇಟು ಹಾಕಿದರು. ಡಾ| ಸಿ.ಎನ್ .ಮಂಜುನಾಥ್ ಅವರಿಗೆ ಇರುವ ಜನಪ್ರಿಯತೆಯ ಲಾಭ ಪಡೆಯಲು ಬಿಜೆಪಿ ಟಿಕೆಟ್ ಒಲಿಯುವಂತೆ ಮಾಡಿ ಡಿ.ಕೆ.ಸುರೇಶ್ ವಿರುದ್ಧ ರಾಜಕೀಯ ತಂತ್ರಗಾರಿಕೆ ಹೆಣದವರು.
26 ವರ್ಷಗಳ ಬಳಿಕ ಅರಳಿದ ಕಮಲ
ರಾಮನಗರ ಕ್ಷೇತ್ರ ಪುನರ್‌ವಿಂಗಡಣೆಯಲ್ಲಿ ಕಳೆದು ಹೋದ ಕನಕಪುರ ಒಳಗೊಂಡಂತೆ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 20 ವರ್ಷಗಳ ನಂತರ ಕಮಲ ಅರಳಿದೆ. ಈ ಹಿಂದೆ ಕನಕಪುರ ಲೋಕಸಭಾ ಕ್ಷೇತ್ರ ಅಸ್ತಿತ್ವದಲ್ಲಿದ್ದ ವೇಳೆ 1998ರ ಚುನಾವಣೆಯಲ್ಲಿ ಕೇವಲ 16,441 ಮತಗಳಿಂದ ಬಿಜೆಪಿಯ ಶ್ರೀನಿವಾಸ್ ಗೆಲುವು ಸಾಧಿಸಿದ್ದರು. ಅದಾದ 26 ವರ್ಷಗಳ ಬಳಿಕ ಡಾ. ಮಂಜುನಾಥ್ ರವರು ಬಿಜೆಪಿಯನ್ನು ಗೆಲುವಿನ ದಡ ಸೇರಿಸುವ ಮೂಲಕ ಹೊಸ ಇತಿಹಾಸ ಬರೆದಿದ್ದಾರೆ. 1952 000 2010 ಒಟ್ಟು 16 ಚುನಾವಣೆಗಳಲ್ಲಿ ಸ್ಪರ್ಧಿಸಿದ 9ರಲ್ಲಿ ಬಿಜೆಪಿ 1 ಹಾಗೂ 12 ಚುನಾವಣೆಗಳಲ್ಲಿ ಸ್ಪರ್ಧಿಸಿದ್ದ ಜೆಡಿಎಸ್ 3 ಚುನಾವಣೆಗಳಲ್ಲಿ ಗೆಲುವು ಸಾಧಿಸಿತ್ತು. 12 ಬಾರಿ ಗೆದ್ದು 4 ಬಾರಿ ಸೋಲು ಅನುಭವಿಸಿದ್ದ ಕಾಂಗ್ರೆಸ್ ಪಕ್ಷ ಇದೀಗ 5 ನೇ ಬಾರಿಗೆ ಪರಾಭವಗೊಂಡಿದೆ.