ರಾಮನಗರದಲ್ಲಿ ನಿಖಿಲ್‌ ವಿರುದ್ಧ ಡಿಕೆಸು ಅಖಾಡಕ್ಕೆ?

Published : Mar 14, 2023, 05:14 AM IST
ರಾಮನಗರದಲ್ಲಿ ನಿಖಿಲ್‌ ವಿರುದ್ಧ ಡಿಕೆಸು ಅಖಾಡಕ್ಕೆ?

ಸಾರಾಂಶ

ಬೆಂಗಳೂರು ಗ್ರಾ. ಸಂಸದನ ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ, ಎಚ್‌ಡಿಕೆ ಪುತ್ರನ ವಿರುದ್ಧ ಡಿಕೆಶಿ ಸೋದರನ ಭರ್ಜರಿ ಫೈಟ್‌?. ಡಿ.ಕೆ.ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ತರಬೇಕೋ, ಬೇಡವೋ ಎಂಬ ಬಗ್ಗೆ ಈ ಹಿಂದೆ ಚರ್ಚೆ ನಡೆದಿತ್ತು. 

ಬೆಂಗಳೂರು(ಮಾ.14):  ಕಾಂಗ್ರೆಸ್‌ ಸಂಸದ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಹೋದರ ಡಿ.ಕೆ.ಸುರೇಶ್‌ ಅವರನ್ನು ರಾಮನಗರ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧೆಗೆ ಇಳಿಸುವ ಚಿಂತನೆ ಹಠಾತ್‌ ಆಗಿ ಕಾಂಗ್ರೆಸ್‌ನಲ್ಲಿ ಆರಂಭಗೊಂಡಿದೆ ಎಂದು ಮೂಲಗಳು ತಿಳಿಸಿವೆ.

ಜೆಡಿಎಸ್‌ ವರಿಷ್ಠ ಎಚ್‌.ಡಿ.ಕುಮಾರಸ್ವಾಮಿ ಅವರ ಪುತ್ರ ನಿಖಿಲ್‌ ಕುಮಾರಸ್ವಾಮಿ ಕಣಕ್ಕೆ ಇಳಿದಿರುವ ರಾಮನಗರ ಕ್ಷೇತ್ರದಲ್ಲಿ ಅವರಿಗೆ ಎದುರಾಳಿಯಾಗಿ ಕಾಂಗ್ರೆಸ್‌ನಿಂದ ಡಿ.ಕೆ.ಸುರೇಶ್‌ ಅವರನ್ನು ಕಣಕ್ಕಿಳಿಸುವ ಕುರಿತು ಚಿಂತನೆ ಹುಟ್ಟಿಕೊಂಡಿದೆ ಎನ್ನಲಾಗಿದೆ.

ಮಾಗಡಿಗೆ ಕುಮಾರಸ್ವಾಮಿ ಕೊಡುಗೆ ಏನು: ಸಂಸದ ಡಿ.ಕೆ.ಸುರೇಶ್‌ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುವ ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ತರಬೇಕೋ ಅಥವಾ ಬೇಡವೋ ಎಂಬ ಚರ್ಚೆ ನಡೆದಿತ್ತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರು ಪಕ್ಷವನ್ನು ಚುನಾವಣೆಗೆ ಮುನ್ನಡೆಸುತ್ತಿರುವ ಹಿನ್ನೆಲೆಯಲ್ಲಿ ಈ ಬಾರಿ ಸುರೇಶ್‌ ರಾಜ್ಯ ರಾಜಕಾರಣ ರಂಗ ಪ್ರವೇಶ ಬೇಡ ಎಂದೂ ತೀರ್ಮಾನಿಸಲಾಗಿತ್ತು. ಆದರೆ, ಹಠಾತ್‌ ಬೆಳವಣಿಗೆಯೊಂದರಲ್ಲಿ ಸುರೇಶ್‌ ಅವರನ್ನು ರಾಮನಗರ ಕ್ಷೇತ್ರದಿಂದ ಕಣಕ್ಕೆ ಇಳಿಸುವ ಕುರಿತು ಪಕ್ಷದಲ್ಲಿ ಚಿಂತನೆ ಆರಂಭವಾಗಿದೆ ಎನ್ನಲಾಗಿದೆ.

ಹೀಗೆ ಹಠಾತ್‌ ಆಗಿ ಸುರೇಶ್‌ ಅವರನ್ನು ರಾಜ್ಯ ರಾಜಕಾರಣಕ್ಕೆ ಅದರಲ್ಲೂ ಕುಮಾರಸ್ವಾಮಿ ಅವರ ಪುತ್ರರಾದ ನಿಖಿಲ್‌ ಎದುರಾಳಿಯಾಗಿ ಕಣಕ್ಕೆ ಇಳಿಸುವ ಚಿಂತನೆಗೆ ಮುಂದಾಗಿರುವುದಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ. ಆದರೆ, ಈ ಬಾರಿಯ ಚುನಾವಣೆಯಲ್ಲಿ ಹಳೆ ಮೈಸೂರು ಭಾಗದಲ್ಲಿ ಒಂದೊಂದು ಕ್ಷೇತ್ರದ ಗೆಲವೂ ಮುಖ್ಯವಾಗಿರುವ ಹಿನ್ನೆಲೆಯಲ್ಲಿ ಸುರೇಶ್‌ ಅವರನ್ನು ಕಣಕ್ಕೆ ಇಳಿಸುವ ಬಗ್ಗೆ ಪಕ್ಷದಲ್ಲಿ ಚಿಂತನೆ ನಡೆದಿದೆ ಎನ್ನಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಶಾಲಾ-ಕಾಲೇಜು ಹುಡುಗಿಯರಿಗೂ ಋತುಚಕ್ರ ರಜೆ?: ಸಂಪುಟ ಸಭೆಯಲ್ಲಿ ಕಾಯ್ದೆಗೆ ಅನುಮೋದನೆ ಸಾಧ್ಯತೆ
ಗೃಹ ಸಚಿವ ಅಮಿತ್‌ ಶಾ - ರಾಹುಲ್ ಗಾಂಧಿ ಮತಚೋರಿ ಸಮರ