ಡಿ.ಕೆ.ಸುರೇಶ್ ಚಾಲಕ ರಘು ಎಂಬಾತನ ಮಗ, ಹೆಂಡತಿ ಸೇರಿ ಹಲವರಿಗೆ ಚಿತ್ರ ಹಿಂಸೆ ನೀಡಿದ್ದಾರೆ. ಚುನಾವಣೆ ಮುಗಿದ ಬಳಿಕ ಯಾರಿಗೆಲ್ಲಾ ಕಿರುಕುಳ ನೀಡಿದ್ದಾರೆ ಎಂಬ ಬಗ್ಗೆ ಅವರಿಂದಲೇ ಅಫಿಡವಿಟ್ ಸಲ್ಲಿಸುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಬೆಂಗಳೂರು (ಏ.27): ‘ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಕೇವಲ ಕಾಂಗ್ರೆಸ್ ಗುರಿಯಾಗಿಸಿಕೊಂಡು ದಾಳಿ ಮಾಡುತ್ತಿದ್ದಾರೆ. ಡಿ.ಕೆ.ಸುರೇಶ್ ಚಾಲಕ ರಘು ಎಂಬಾತನ ಮಗ, ಹೆಂಡತಿ ಸೇರಿ ಹಲವರಿಗೆ ಚಿತ್ರ ಹಿಂಸೆ ನೀಡಿದ್ದಾರೆ. ಚುನಾವಣೆ ಮುಗಿದ ಬಳಿಕ ಯಾರಿಗೆಲ್ಲಾ ಕಿರುಕುಳ ನೀಡಿದ್ದಾರೆ ಎಂಬ ಬಗ್ಗೆ ಅವರಿಂದಲೇ ಅಫಿಡವಿಟ್ ಸಲ್ಲಿಸುತ್ತೇನೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಅಲ್ಲದೆ, ಐಟಿ ಇಲಾಖೆ ಅಧಿಕಾರಿಗಳು ನೀಡಿರುವ ಕಿರುಕುಳದ ವಿರುದ್ಧ ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿ ಮಾಡಿ ದೂರು ನೀಡಲಿದ್ದೇನೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇವಲ ಕಾಂಗ್ರೆಸ್ ಪಕ್ಷದ ನಾಯಕರನ್ನು ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಐಟಿ ಅಧಿಕಾರಿಗಳು ಒಂದು ಪಕ್ಷದ ಏಜೆಂಟರಂತೆ ವರ್ತಿಸುತ್ತಿದ್ದಾರೆ. ನಮ್ಮ ಬ್ಲಾಕ್ ಅಧ್ಯಕ್ಷನಿಗೆ ಐಟಿ ಅಧಿಕಾರಿಯೊಬ್ಬ ಕಾಂಗ್ರೆಸ್‌ನಲ್ಲಿ ಯಾಕೆ ಇದ್ದೀಯಾ? ಬಿಜೆಪಿಗೆ ಹೋಗು ಎಂದು ಹೇಳಿದ್ದಾರೆ. ಐಟಿ ಅಧಿಕಾರಿಗಳಿಂದ ನಾನು ಇದನ್ನು ನಿರೀಕ್ಷೆ ಮಾಡಿರಲಿಲ್ಲ ಎಂದು ಗಂಭೀರ ಆರೋಪ ಮಾಡಿದರು.
ಜೆಡಿಎಸ್‌ಗೆ ಭವಿಷ್ಯ ಇಲ್ಲ ಎಂಬುದನ್ನು ಇಲ್ಲಿನ ಶಾಸಕರೇ ತೋರಿಸಿದ್ದಾರೆ: ಡಿ.ಕೆ.ಶಿವಕುಮಾರ್
ಕೋರ್ಟ್‌ಗೆ ಡಿಕೆಶಿ ಮೊರೆ: ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅಪಾರ್ಟ್‌ಮೆಂಟ್ ನಿವಾಸಿಗಳಿಗೆ ಬೆದರಿಕೆ ಹಾಕಿದ ಮತ್ತು ಆಮಿಷವೊಡ್ಡಿದ ಆರೋಪದ ಮೇಲೆ ತಮ್ಮ ವಿರುದ್ಧ ನಗರದ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ರದ್ದುಪಡಿಸುವಂತೆ ಕೋರಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್ ಮೊರೆ ಹೋಗಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಜರುಗಿಸಲು ಏ.19ರಂದು ಮ್ಯಾಜಿಸ್ಟ್ರೇಟ್ ಕೋರ್ಟ್ ಹೊರಡಿಸಿದ ಆದೇಶ ಮತ್ತು ಅದನ್ನು ಆಧರಿಸಿ ಆರ್‌ಎಂಸಿ ಯಾರ್ಡ್ ಠಾಣಾ ಪೊಲೀಸರು ದಾಖಲಿಸಿರುವ ಎಫ್‌ಐಆರ್ ರದ್ದುಪಡಿಸಬೇಕು ಎಂದು ಕೋರಿ ಡಿ.ಕೆ. ಶಿವಕುಮಾರ್ ಹೈಕೋರ್ಟ್‌ಗೆ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ.
ಬರ ಪರಿಹಾರದ ಬದಲು ರಾಜ್ಯಕ್ಕೆ ಮೋದಿ ಕೊಟ್ಟದ್ದು ಖಾಲಿ ಚೊಂಬು: ರಾಹುಲ್ ಗಾಂಧಿ
ಅರ್ಜಿಯಲ್ಲಿ ಆರ್‌ಎಂಸಿ ಯಾರ್ಡ್ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಮತ್ತು ಪ್ರಕರಣ ಸಂಬಂಧ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಖಾಸಗಿ ದೂರು ಸಲ್ಲಿಸಿದ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಸಂಚಾರಿ ವಿಚಕ್ಷಣಾ ತಂಡದ ಮುಖ್ಯಸ್ಥ ಬಿ.ಕೆ. ದಿನೇಶ್ ಕುಮಾರ್ ಅವರನ್ನು ಪ್ರತಿವಾದಿ ಮಾಡಲಾಗಿದೆ. ಅರ್ಜಿ ಹೈಕೋರ್ಟ್ ಮುಂದೆ ವಿಚಾರಣೆಗೆ ಬಂದಿದೆ.