
ಮಡಿಕೇರಿ(ಫೆ.03): ಪ್ರತ್ಯೇಕ ರಾಷ್ಟ್ರ ಕೇಳಬೇಕಾಗುತ್ತದೆ ಎನ್ನುವ ಸಂಸದ ಡಿ.ಕೆ. ಸುರೇಶ್ ಅವರು ದೇಶ ದ್ರೋಹಿ ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನು ದೇಶ ದ್ರೋಹಿ ಎಂದು ದೇಶದಿಂದ ಹೊರಗಟ್ಟಿ ಎಂದು ಮಾಜಿ ಸಚಿವ ಮಡಿಕೇರಿಯ ಮಾಜಿ ಶಾಸಕ ಅಪ್ಪಚ್ಚು ರಂಜನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಗರದ ಕಾವೇರಿ ಹಾಲ್ ನಲ್ಲಿ ನಡೆದ ಕೊಡಗು ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಹಾಗೂ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಸಂದರ್ಭ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು.
ಅಧಿಕಾರಕ್ಕೆ ಬಂದು 7 ತಿಂಗಳಲ್ಲಿ ಸಿದ್ದರಾಮಯ್ಯನವರು ಏನೂ ಕಡಿದು ಕಟ್ಟೆಹಾಕಿಲ್ಲ: ಸಂಸದ ಪ್ರತಾಪ್ ಸಿಂಹ
ಯಾರೂ ಇದುವರೆಗೆ ಪ್ರತ್ಯೇಕ ದೇಶ ಕೊಡಿ ಎಂದು ಕೇಳಲಿಲ್ಲ. ಆದರೆ ಡಿ.ಕೆ. ಸುರೇಶ್ ಅವರು ಪ್ರಚಾರಕ್ಕಾಗಿ ಅವರ ಮಾತಿನ ಚಪಲಕ್ಕಾಗಿ ಈ ರೀತಿ ಹೇಳಿರಬಹುದು. ಅವರನ್ನು ದೇಶದಿಂದ ಅರಬ್ ದೇಶಗಳಿಗೆ ಕಳುಹಿಸಲಿ ಎಂದು ಅಪ್ಪಚ್ಚು ರಂಜನ್ ಒತ್ತಾಯಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.