
ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ತೀವ್ರಗೊಂಡಿರುವ ಸಂದರ್ಭದಲ್ಲಿ, ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಂಗಳೂರು ಭೇಟಿ ಹಾಗೂ ವಿಮಾನ ನಿಲ್ದಾಣದಲ್ಲಿ ಏಕಾಏಕಿ ಮೊಳಗಿದ “ಡಿ.ಕೆ… ಡಿ.ಕೆ…” ಘೋಷಣೆ ಕುರಿತು ಮಹತ್ವದ ಪ್ರತಿಕ್ರಿಯೆ ನೀಡಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ “ಅಧಿಕಾರ ಶಾಶ್ವತವಲ್ಲ” ಎಂಬ ಹೇಳಿಕೆಗೆ , ಅದು ರಾಜ್ಯ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಈ ಕುರಿತು ಸ್ಪಷ್ಟನೆ ನೀಡಿದ ಡಿ.ಕೆ. ಸುರೇಶ್ “ಸಿಎಂ ಅವರು ಸಹಜವಾಗಿ ಮಾತನಾಡಿದ್ದಾರೆ. ಅದಕ್ಕೆ ಹೆಚ್ಚು ಮಹತ್ವ ಕೊಡುವ ಅಗತ್ಯವಿಲ್ಲ. ವಿಶ್ಲೇಷಣೆ ಮಾಡೋದೂ ಬೇಡ.” ಸಿಎಂ ಹೇಳಿಕೆಗೆ ಅತಿಯಾಗಿ ರಾಜಕೀಯ ಬಣ್ಣ ನೀಡಬಾರದು ಎಂದು ಅವರು ತಿಳಿಸಿದರು.
ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಮಂಗಳೂರು ಭೇಟಿ ಹಿನ್ನೆಲೆ ಹಲವು ಊಹಾಪೋಹಗಳು ಹರಿದಾಡುತ್ತಿದ್ದರೂ, ಡಿ.ಕೆ. ಸುರೇಶ್ ಅವರು ಈ ಭೇಟಿಗೆ ಯಾವುದೇ ರಾಜಕೀಯ ಮಹತ್ವ ನೀಡಬಾರದು ಎಂದು ಹೇಳಿದರು. ವೇಣುಗೋಪಾಲ್ ಮಂಗಳೂರಿನಲ್ಲಿ ಕಾರ್ಯಕ್ರಮ ಇರುವುದರಿಂದ ಆಗಮಿಸಿದ್ದಾರೆ. ಕಾರ್ಯಕ್ರಮ ಮುಗಿದ ನಂತರ ಅವರು ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಕೆಲಸಕ್ಕೆ ತೆರಳುತ್ತಾರೆ ಎಂದರು.
ಮಂಗಳೂರಿನಲ್ಲಿ ವೇಣುಗೋಪಾಲ್ ಕಾರಿಗೆ ಡಿಕೆ ಪರ ಕಾರ್ಯಕರ್ತರು "ಡಿ.ಕೆ… ಡಿ.ಕೆ…" ಘೋಷಣೆ ಕೂಗಿ ವಾಹನದತ್ತ ಧಾವಿಸಿದ ಘಟನೆ ಕುರಿತು ಪ್ರತಿಕ್ರಿಯಿಸಿದ ಅವರು ಯಾರು ಸಹ ಕಾರಿಗೆ ಮುತ್ತಿಗೆ ಹಾಕಿರಲಿಲ್ಲ. ಅಭಿಮಾನದಿಂದ ಕೂಗಿರಬಹುದು ಅಷ್ಟೇ. ಕಾರ್ಯಕರ್ತರ ವರ್ತನೆಗೆ ಅತಿಯಾಗಿ ರಾಜಕೀಯ ಅರ್ಥ ಹುಡುಕಬೇಡಿ ಎಂದು ಅವರು ಮನವಿ ಮಾಡಿದರು. ಇನ್ನು ಮಂಗಳೂರು ಕಾರ್ಯಕ್ರಮಕ್ಕೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನ ನೀಡದಿರುವ ವಿಚಾರ ಪ್ರಶ್ನಿಸಿದಾಗ, ಡಿ.ಕೆ. ಸುರೇಶ್ ಅವರು ಕೆಲವು ಕ್ಷಣ ಮೌನವಾಗಿದ್ದು, ನಂತರ ಯಾವುದೇ ಪ್ರತಿಕ್ರಿಯೆ ನೀಡದೇ ಸುಮ್ಮನಾದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.