ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ಆ ಕುರಿತು ನನ್ನ ಬಳಿ ಚರ್ಚೆ ಆಗಿಲ್ಲ. ಪಕ್ಷ ತೀರ್ಮಾನ ಮಾಡಿ ಒಳ್ಳೆಯ ಅಭ್ಯರ್ಥಿಯನ್ನ ಚುನಾವಣೆಗೆ ನಿಲ್ಲಿಸುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು.
ಮಾಗಡಿ (ಜೂ.24): ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಶಿವಕುಮಾರ ಸ್ಪರ್ಧಿಸುವ ವಿಚಾರದ ಬಗ್ಗೆ ನನಗೆ ಗೊತ್ತಿಲ್ಲ, ಆ ಕುರಿತು ನನ್ನ ಬಳಿ ಚರ್ಚೆ ಆಗಿಲ್ಲ. ಪಕ್ಷ ತೀರ್ಮಾನ ಮಾಡಿ ಒಳ್ಳೆಯ ಅಭ್ಯರ್ಥಿಯನ್ನ ಚುನಾವಣೆಗೆ ನಿಲ್ಲಿಸುತ್ತದೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ತಿಳಿಸಿದರು.
ಚನ್ನಪಟ್ಟಣ ಉಪಚುನಾವಣೆ ವಿಚಾರವಾಗಿ ಇಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಅವರು, ನಾನು ಕೂಡ ಒಬ್ಬ ಕಾರ್ಯಕರ್ತನಾಗಿ ಚುನಾವಣೆಯಲ್ಲಿ ಕೆಲಸ ಮಾಡ್ತೀನಿ. ಚನ್ನಪಟ್ಟಣಕ್ಕೆ ರಾಜೀನಾಮೆ ಕೊಟ್ಟು ಈಗಾಗಲೇ ಒಂದು ವಾರ ಆಗಿದೆ. ಈ ರಾಜ್ಯದ ಉಪಮುಖ್ಯಮಂತ್ರಿಯಾಗಿ ಆಗಿ ಜಿಲ್ಲೆಯನ್ನು ಪ್ರತಿನಿಧಿಸುತ್ತಿರುವ ಡಿಕೆ ಶಿವಕುಮಾರ ಅವರು ತೆರವಾಗಿರುವ ಚನ್ನಪಟ್ಟಣ ಕ್ಷೇತ್ರ ಅಭಿವೃದ್ಧಿ ಮಾಡುವ ನಿಟ್ಟಿನಲ್ಲಿ ಅಧಿಕಾರಿಗಳ ಸಭೆ ಮಾಡ್ತಾ ಇದ್ದಾರೆ ಎಂದರು.
ಸಿ.ಟಿ.ರವಿ, ಯತೀಂದ್ರ ಸೇರಿ 17 ಎಂಎಲ್‌ಸಿಗಳ ಪ್ರಮಾಣ ಇಂದು
ಇನ್ನು ಚನ್ನಪಟ್ಟಣ ಉಪಚುನಾವಣೆಯಲ್ಲಿ ಡಿಕೆ ಸುರೇಶ್ ಸ್ಪರ್ಧೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ಡಿಕೆ ಸುರೇಶ್ ಅವರು, ನಾನು ಯಾವುದೇ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಇದೆಲ್ಲವೂ ಮಾಧ್ಯಮಗಳ ಊಹಾಪೋಹವಷ್ಟೇ. ಚುನಾವಣೆ ಸೋಲಿನಿಂದ ನಾನು ಒತ್ತಡದಲ್ಲಿದ್ದೆ, ಸದ್ಯ ಅದರಿಂದ ಹೊರಗಡೆ ಬಂದಿದ್ದೇನೆ. ಜನರು ನನಗೆ ರೆಸ್ಟ್ ಕೊಟ್ಟಿದ್ದಾರೆ ಬೇರೆಯವರು ಹೇಗೆ 20 ದಿನಗಳಲ್ಲಿ ಚುನಾವಣೆ ಮಾಡಿದ್ರೂ ಅದೇ ರೀತಿ ಚುನಾವಣೆ ಮಾಡ್ತೇನೆ ಎಂದರು.