ಡಿಎಂಕೆ ಸನಾತನ ಧರ್ಮದ ವಿರೋಧಿ ಪಕ್ಷ: ಅಮಿತ್‌ ಶಾ

Published : Apr 14, 2024, 12:49 PM IST
 ಡಿಎಂಕೆ ಸನಾತನ ಧರ್ಮದ ವಿರೋಧಿ ಪಕ್ಷ: ಅಮಿತ್‌ ಶಾ

ಸಾರಾಂಶ

ಡಿಎಂಕೆ ಪಕ್ಷ ಸನಾತನ ಧರ್ಮಕ್ಕೆ ಅವಮಾನ ಮಾಡುವುದರ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ.

ನಾಗರಕೋಯಿಲ್‌ (ತಮಿಳುನಾಡು): ಡಿಎಂಕೆ ಪಕ್ಷ ಸನಾತನ ಧರ್ಮಕ್ಕೆ ಅವಮಾನ ಮಾಡುವುದರ ಮೂಲಕ ಕೋಟ್ಯಂತರ ಜನರ ಭಾವನೆಗಳಿಗೆ ಧಕ್ಕೆ ಮಾಡಿದೆ ಎಂದು ಕೇಂದ್ರ ಸಚಿವ ಅಮಿತ್‌ ಶಾ ವಾಗ್ದಾಳಿ ನಡೆಸಿದ್ದಾರೆ.

ತಮಿಳುನಾಡಿನ ಕನ್ಯಾಕುಮಾರಿಯಲ್ಲಿ ರೋಡ್‌ ಶೋ ವೇಳೆ ಮಾತನಾಡಿದ ಅವರು,‘ಡಿಎಂಕೆ ಸನಾತನ ಧರ್ಮವನ್ನು ಅವಮಾನಿಸುವುದನ್ನು ಅಭ್ಯಾಸ ಮಾಡಿಕೊಂಡು ಬಂದಿದೆ. ಈ ಪಕ್ಷ ರಾಮ ಮಂದಿರ ಪ್ರತಿಷ್ಠಾಪನೆ ವೇಳೆಯೂ ಕೊಂಕು ಮಾತುಗಳನ್ನು ಆಡಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಎಲ್ಲರನ್ನು ಒಳಗೊಂಡು ಅಭಿವೃದ್ಧಿ ಮಾಡಲಾಗುತ್ತಿದೆ. ಹೀಗಾಗಿ ತಮಿಳುನಾಡಿನ ಜನರು ಸಹ ‘ಅಬ್‌ ಕಿ ಬಾರ್‌ ಚಾರ್‌ ಸೌ ಪಾರ್‌’ ಎಂಬ ಘೋಷಣೆ ಕೂಗುತ್ತಿದ್ದಾರೆ’ ಎಂದರು.

ಇದೇ ವೇಳೆ ಕನ್ಯಾಕುಮಾರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪೊನ್‌ ರಾಧಾಕೃಷ್ಣನ್‌ ಹಾಗೂ ವಿಲವಂಕೋಡಿ ಉಪ ಚುನಾವಣೆಯ ಬಿಜೆಪಿ ಅಭ್ಯರ್ಥಿ ವಿ.ಎಸ್‌.ನಂದಿನಿ ಅವರ ಪರ ಮತಯಾಚನೆ ನಡೆಸಿದರು.

ಡಿಎಂಕೆ ಬಳಿ ಭ್ರಷ್ಟಾಚಾರದ ಕಾಪಿರೈಟ್‌ : ಮೋದಿ ವಾಗ್ದಾಳಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?
ಹಿಂದೂಗಳು ಒಂದಾಗದಿದ್ರೆ ದೇಶ, ಸಂವಿಧಾನ ಉಳಿಯಲ್ಲ: ಶಾಸಕ ಬಸನಗೌಡ ಪಾಟೀಲ ಯತ್ನಾಳ