ಲೋಕಸಭಾ ಚುನಾವಣೆಗೆ ಸ್ಪರ್ಧಿಸೋಲ್ಲ, ಹೈಕಮಾಂಡ್‌ ತೀರ್ಮಾನಕ್ಕೆ ಬದ್ಧ: ಸಚಿವ ಈಶ್ವರ ಖಂಡ್ರೆ

By Kannadaprabha News  |  First Published Jan 28, 2024, 2:30 AM IST

ನಾನಂತೂ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಪಕ್ಷದ ಹೈಕಮಾಂಡ್‌ ತೀರ್ಮಾನ ಪಾಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. 


ಬೀದರ್‌ (ಜ.28): ನಾನಂತೂ ಮುಂಬರುವ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಪಕ್ಷದ ಹೈಕಮಾಂಡ್‌ ತೀರ್ಮಾನ ಪಾಲಿಸುತ್ತೇನೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು. ರಾಜ್ಯದ ಕೆಲ ಸಚಿವರನ್ನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಹೈಕಮಾಂಡ್‌ ಚಿಂತಿಸಿದೆ ಎಂಬುವದು ಊಹಾಪೋಹ ಅಂಥದ್ಯಾವುದೇ ಚರ್ಚೆಯಾಗಲಿ ನಿರ್ಧಾರವಾಗಲಿ ಆಗಿಲ್ಲ. ಚುನಾವಣಾ ಕಣಕ್ಕಿಳಿಸುವ ವಿಚಾರ ಹೈಕಮಾಂಡ್‌ ನಿರ್ಧರಿಸುತ್ತದೆ ಯಾರೇ ನಿಂತರೂ ನಾವೆಲ್ಲ ಸೇರಿ ಕಾಂಗ್ರೆಸ್‌ ಪಕ್ಷದ ಅಭ್ಯರ್ಥಿ ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಸಚಿವ ಈಶ್ವರ ಖಂಡ್ರೆ ತಿಳಿಸಿದರು.

ನಾಗರಿಕ ವಿಮಾನಯಾನ ರದ್ದು, ದುರದೃಷ್ಟಕರ: ಇನ್ನು ಬೀದರ್‌ನಲ್ಲಿ ನಾಗರಿಕ ವಿಮಾನಯಾನ ಸೇವೆ ರದ್ದುಗೊಂಡಿದ್ದು ಅತ್ಯಂತ ದುರದೃಷ್ಟಕರ. ಇಲ್ಲಿನ ಪ್ರವಾಸೋದ್ಯಮ, ಕೈಗಾರಿಕೋದ್ಯಮ ಸೇರಿ ನಾಗರಿಕರ ಪ್ರಯಾಣಕ್ಕೆ ಸಾಕಷ್ಟು ಅನುಕೂಲವಾಗಿತ್ತು. ಇದೀಗ ಅದು ಹಠಾತ್‌ ರದ್ದಾಗಿದೆ. ಈ ಕುರಿತಂತೆ ರಾಜ್ಯದ ಹಿರಿಯ ಅಧಿಕಾರಿಗಳಷ್ಟೇ ಅಲ್ಲ ಕೇಂದ್ರದ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚಿಸಿ ಶೀಘ್ರ ನಾಗರಿಕ ವಿಮಾನಯಾನ ಆರಂಭಕ್ಕೆ ಕ್ರಮವಹಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Tap to resize

Latest Videos

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಿಂದ ಕಾಂಗ್ರೆಸ್ ಪಕ್ಷಕ್ಕೆ ಡ್ಯಾಮೇಜ್ ಆಗಲ್ಲ: ಸಚಿವ ರಾಮಲಿಂಗಾರೆಡ್ಡಿ

ಪ್ರಜಾಪ್ರಭುತ್ವ ಗಟ್ಟಿತನ, ಜನರ ಸಶಕ್ತಕ್ಕೆ ಸಂವಿಧಾನ ಕಾರಣ: ಸಂವಿಧಾನ ದೇಶದ ಜನರನ್ನು ಸಶಕ್ತಗೊಳಿಸಿದೆ. ಸರ್ವರಿಗೂ ಸಮಾನತೆ, ಸಮಪಾಲು ಹಾಗೂ ಸಮಬಾಳು ನೀಡಿದೆ. ಪ್ರಜಾಪ್ರಭುತ್ವ ವ್ಯವಸ್ಥೆ 75 ವರ್ಷವಾದರೂ ಗಟ್ಟಿಯಾಗಿ ನಿಲ್ಲಲು ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರು ಈ ದೇಶಕ್ಕೆ ಕೊಟ್ಟ ಬೃಹತ್‌ ಲಿಖಿತ ಸಂವಿಧಾನವೇ ಕಾರಣವಾಗಿದೆ ಎಂದು ಅರಣ್ಯ, ಜೈವಿಕ ಮತ್ತು ಪರಿಸರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ್‌ ಖಂಡ್ರೆ ಹೇಳಿದರು. ಜಿಲ್ಲಾಡಳಿತದ ವತಿಯಿಂದ ನಗರದ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ 75ನೇ ಗಣರಾಜ್ಯೊತ್ಸವ ದಿನಾಚರಣೆ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ನಾನು ಈ ಹಿಂದೆಯೂ, ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿದ್ದಾಗ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗಾಗಿ ಶ್ರಮಿಸಿದ್ದೆ. ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ತೆಗೆದುಕೊಂಡು ಹೋಗುವುದು ನನ್ನ ಗುರಿಯಾಗಿದೆ. ಕರೇಜ್‌ ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಶೀಘ್ರದಲ್ಲಿ ಜಿಲ್ಲಾಡಳಿತ ಕಾರ್ಯಾರಂಭ ಮಾಡುತ್ತದೆ. ಗೋದಾವರಿ ನದಿ ನೀರಿನ ಸದ್ಬಳಕೆಗಾಗಿ ಯೋಜನೆಗಳನ್ನು ಹಾಕಿಕೊಳ್ಳಲಾಗುತ್ತದೆ. ಕಾರಂಜಾದಿಂದ ಇನ್ನೂ ಹೆಚ್ಚುವರಿಯಾಗಿ 50 ಸಾವಿರ ಹೆಕ್ಟೇರ್‌ ಪ್ರದೇಶಕ್ಕೆ ನೀರು ಹರಿಸಲು ಯೋಜನೆ ರೂಪಿಸಲಾಗುತ್ತದೆ ಎಂದು ಈಶ್ವರ ಖಂಡ್ರೆ ಭರವಸೆ ನೀಡಿದರು.

ಮುಂದಿನ ಬಜೆಟ್‌ನಲ್ಲಿ ಕೋಲಾರ ನಗರಕ್ಕೆ ರಿಂಗ್ ರೋಡ್, ಮೆಡಿಕಲ್ ಕಾಲೇಜ್: ಸಚಿವ ಭೈರತಿ ಸುರೇಶ್

ಬರುವ ಮಾರ್ಚ ಅಂತ್ಯದೊಳಗಾಗಿ ಜಿಲ್ಲಾ ಆಸ್ಪತ್ರೆಯಲ್ಲಿ ಕ್ಯಾಥ್‌ ಲ್ಯಾಬ್‌ ಆರಂಭಗೊಳಿಸುವ ಮೂಲಕ ರೋಗಿಗಳಿಗೆ ಅನುಕೂಲ ಕಲ್ಪಿಸಿಕೊಡುವ ಗುರಿಯಿದೆ. ಬೀದರ್‌ನ ಮಹಿಳಾ ಪದವಿ ಮಹಾವಿದ್ಯಾಲಯಕ್ಕೆ 100ಕೋಟಿ ರು. ಅನುದಾನ ಬಿಡುಗಡೆ ಮಾಡಲಾಗಿದೆ. ಇನ್ನು ದೇವ ವನ ಅಭಿವೃದ್ಧಿ, ಹೊನ್ನಿಕೇರಿ ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಇಕೋ ಟೂರಿಸಂಗಾಗಿ 50ಕೋಟಿ ರು. ಮಂಜೂರಿಸಲಾಗಿದೆ. ಪೌರಾಡಳಿತ ಸಚಿವ ರಹೀಮ್‌ ಖಾನ್‌ ಸಹಕಾರದಿಂದ ಸ್ಥಳೀಯ ಸಂಸ್ಥೆಗಳಿಗೆ 130ಕೋಟಿ ರು. ಅನುದಾನ ಬಿಡುಗಡೆಯಾಗಿದೆ ಎಂದು ವಿವರ ನೀಡಿದರು.

click me!