KGF​ನಲ್ಲಿ ಕೈಗಾರಿಕಾ ಟೌನ್ ಶಿಪ್ ನಿರ್ಮಾಣ, ಕೋಚಿಮುಲ್​ ವಿಭಜಿಸಲ್ಲ: ಸಿಎಂ ಸಿದ್ದರಾಮಯ್ಯ

By Kannadaprabha News  |  First Published Nov 12, 2023, 10:43 PM IST

ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಯಾವುದೇ ಕಾರಣಕ್ಕೂ ಬೇರ್ಪಡಿಸದೆ ಈ ಹಿಂದೆ ಇದ್ದ ಹಾಗೆಯೇ ಮುಂದುವರೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. 


ಬಂಗಾರಪೇಟೆ (ನ.12): ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟವನ್ನು ಯಾವುದೇ ಕಾರಣಕ್ಕೂ ಬೇರ್ಪಡಿಸದೆ ಈ ಹಿಂದೆ ಇದ್ದ ಹಾಗೆಯೇ ಮುಂದುವರೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಯರಗೋಳ್ ಅಣೆಕಟ್ಟು ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ಎರಡೂ ಜಿಲ್ಲೆಗಳ ಹಾಲು ಒಕ್ಕೂಟವನ್ನು ಬೇರ್ಪಡಿಸಲು ಮುಂದಾಗಿತ್ತು. ಆದರೆ ನಮ್ಮ ಸರ್ಕಾರ ಅದನ್ನು ಹಿಂಪಡೆದು ಎರಡೂ ಜಿಲ್ಲೆಗಳಿಗೆ ಒಂದೇ ಹಾಲು ಒಕ್ಕೂಟ ಕಾರ್ಯನಿರ್ವಹಿಸಲು ಬದ್ಧವಾಗಿದೆ. ಇದರ ಜೊತೆಗೆ ಐಸ್ ಕ್ರೀಂ ಘಟಕ ಆರಂಭಿಸಲು ಅನುಮತಿ ಜೊತೆಗೆ 200  ಕೋಟಿ ವೆಚ್ಚದಲ್ಲಿ ಹಾಲಿನ ಪುಡಿ ತಯಾರಿಕೆ ಘಟಕವನ್ನು ಸಹ ಆರಂಭಿಸಲು ಮಂಜೂರಾತಿ ನೀಡಲಾಗಿದೆ ಎಂದರು.

ಕೋಚಿಮುಲ್‌ಗೆ ಸೋಲಾರ್‌ ವಿದ್ಯುತ್‌: ಕೋಲಾರ ಡೇರಿಯ 50ಎಕರೆ ಜಾಗದಲ್ಲಿ ಸೋಲಾರ್ ವಿದ್ಯುತ್ ಘಟಕ ಆರಂಭವಾಗಲಿದೆ, ಪ್ರತಿ ತಿಂಗಳು ೨ಕೋಟಿ ವಿದ್ಯುತ್ ಬಿಲ್ ಕಟ್ಟುತ್ತಿದ್ದರು, ಇದನ್ನು ತಪ್ಪಿಸಲು ಸೋಲಾರ್ ವಿದ್ಯುತ್ ಘಟಕ ಆರಂಭಿಸಲು ಅನುಮತಿ ನೀಡಲಾಗಿದೆ. ಮಾಲೂರು ಶಾಸಕ ಕೆ.ವೈ.ನಂಜೇಗೌಡ ನೇತೃತ್ವದಲ್ಲೆ ಹಾಲೂ ಒಕ್ಕೂಟ ಮುಂದುವರೆಯಲಿದೆ ಎಂದರು.

Tap to resize

Latest Videos

ಕಾಂಗ್ರೆಸ್‌ಗೆ ತನ್ನ ಶಾಸಕರನ್ನೇ ಸಮಾಧಾನ ಮಾಡಲಾಗುತ್ತಿಲ್ಲ: ಸಿ.ಟಿ.ರವಿ ವ್ಯಂಗ್ಯ

ಕೇಂದ್ರ ಬರ ಪರಿಹಾರ ನೀಡಿಲ್ಲ: ರಾಜ್ಯದಲ್ಲಿ ಬರವಿದ್ದರೂ 263ಕೋಟಿ ಜಿಲ್ಲೆಯ ಅಭಿವೃದ್ದಿ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ೨೧೬ತಾಲೂಕುಗಳನ್ನು ಬರಪೀಡಿತ ತಾಲುಕುಗಳೆಂದು ಘೋಷಣೆ ಮಾಡಲಾಗಿದೆ, 17900ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ, ಆದರೆ ಅವರು ಇನ್ನೂ ನೀಡಿಲ್ಲ. ರಾಜ್ಯ ಸರ್ಕಾರ ಈಗಾಗಲೇ 900ಕೋಟಿಗೂ ಹೆಚ್ಚು ಹಣವನ್ನು ಬಿಡುಗಡೆ ಮಾಡಿದೆ. ಬರ ಘೋಷಣೆ ಮಾಡಿದರೂ ಯಾವುದೇ ಬರ ಕಾಮಗಾರಿ ನಡೆಯುತ್ತಿಲ್ಲ ಎಂಬ ಟೀಕೆ ಮಾಡುವವರು ಕೇಂದ್ರ ಸರ್ಕಾರದಿಂದ ಹಣವನ್ನು ಬಿಡುಗಡೆ ಮಾಡಿಸಿಕೊಡಲಿ ಎಂದು ಸವಾಲ್ ಹಾಕಿದರು.

ಲೋಕಸಭಾ ಚುನಾವಣೆಗೆ ಬಿಜೆಪಿ ಗೆಲ್ಲುವುದೇ ಗ್ಯಾರಂಟಿ ಇಲ್ಲ: 2024ರ ನಂತರ ಮೋದಿ ಸರ್ಕಾರ ಇರುವುದೇ ಗ್ಯಾರಂಟಿ ಇಲ್ಲ, ನಮ್ಮ ರಾಜ್ಯ ಸರ್ಕಾರದ ಬಗ್ಗೆ ಹಗುರವಾಗಿ ಮಾತನಾಡುವುದಕ್ಕಿಂತ ಮೊದಲು ಅವರ ಪಕ್ಷದ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕರನ್ನು ಆಯ್ಕೆ ಮಾಡುವ ಬಗ್ಗೆ ಗಮನಹರಿಸಲಿ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಎಂದು ತಿಳಿಸಿದರು.

ಪಟ್ಟಣದ ಮಾರುತಿ ಕಾಂಪ್ಲೆಕ್ಸ್ ನಲ್ಲಿ ನಿರ್ಮಿಸುತ್ತಿರುವ ಕಾಂಗ್ರೆಸ್ ಕಚೇರಿ ಪರಿಶೀಲಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಪ್ರಚಂಡ ಬಹುಮತದೊಂದಿಗೆ ಆಯ್ಕೆಯಾಗಿ ಜನರ ಆಶೋತ್ತರಗಳಿಗೆ ಅನುಗುಣವಾಗಿ ಗ್ಯಾರಂಟಿಗಳನ್ನು ಜಾರಿಗೊಳಿಸುತ್ತಾ ಜನಪರ ಆಡಳಿತ ನೀಡುತ್ತಿದೆ. ಅದನ್ನು ಸಹಿಸದ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಸೋಲಿನ ಹತಾಶೆಯಿಂದ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಇದಕ್ಕೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜನರೇ ತಕ್ಕ ಉತ್ತರ ನೀಡಲಿದ್ದಾರೆ ಎಂದರು.

ರಾಜಕಾರಣದಲ್ಲಿ ಕಾಫಿ, ಡಿನ್ನರ್‌ಗೆ ಬಹಳ ಮಹತ್ವವಿದೆ: ಶಾಸಕ ರವಿ ಗಣಿಗ

ಎಚ್‌ಡಿಕೆಗೆ ಮೈಂಡ್ ಇಲ್ಲ: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸರ್ಕಾರ ಬೀಳಿಸಲು ಮಾಸ್ಟರ್‌ ಮೈಂಡ್ ಯೋಜನೆಯ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿ, ಕುಮಾರಸ್ವಾಮಿಯವರಿಗೆ ಮೈಂಡೇ ಇಲ್ಲ, ಇನ್ನೂ ಮಾಸ್ಟರ್‌ಮೈಂಡ್ ಎಲ್ಲಿಂದ ಎಂದು ಟೀಕಿಸಿದರು.

click me!