
ಚೆನ್ನೈ(ಜ.12): ನಟ ರಜನಿಕಾಂತ್ ಅವರು ರಾಜಕೀಯಕ್ಕೆ ಬರಲೇಬೇಕು ಎಂದು ಆಗ್ರಹಿಸಿ ಅಭಿಮಾನಿಗಳು ಭಾನುವಾರ ಚೆನ್ನೈನ ವಲ್ಲುವರ್ ಕೊಟ್ಟಾಂನಲ್ಲಿ ಬೃಹತ್ ರಾರಯಲಿ ನಡೆಸಿದ ಬೆನ್ನಲ್ಲೇ, ಇಂಥ ರಾರಯಲಿಗಳನ್ನು ನಡೆಸದಂತೆ ಸ್ವತಃ ರಜನಿಕಾಂತ್ ಮನವಿ ಮಾಡಿದ್ದಾರೆ.
ಈ ಬಗ್ಗೆ ಸೋಮವಾರ ಟ್ವೀಟರ್ ಮೂಲಕ ಪ್ರತಿಕ್ರಿಯಿಸಿರುವ ರಜನಿಕಾಂತ್, ‘ಸಕ್ರಿಯ ರಾಜಕಾರಣದಿಂದ ಹಿಂದೆ ಸರಿದ ನನ್ನ ನಿರ್ಧಾರದ ವಿರುದ್ಧ ಅಭಿಮಾನಿಗಳು ಹಾಗೂ ರಜನಿ ಮಕ್ಕಳ್ ಮಂದ್ರಂ (ಆರ್‌ಎಂಎಂ) ಪಕ್ಷದಿಂದ ಹೊರಹಾಕಿರುವ ಕೆಲವು ಕಾರ‍್ಯಕರ್ತರು ಚೆನ್ನೈನಲ್ಲಿ ಪ್ರತಿಭಟನೆ ಮಾಡಿದ್ದಾರೆ. ನಾನು ನನ್ನ ನಿರ್ಧಾರವನ್ನು ತೆಗೆದುಕೊಂಡಾಗಿದೆ. ದಯವಿಟ್ಟು ಇಂಥ ರಾರಯಲಿ ಅಥವಾ ಪ್ರತಿಭಟನೆಯನ್ನು ಹಮ್ಮಿಕೊಳ್ಳಬೇಡಿ. ಅದು ನನಗೆ ತೀವ್ರ ನೋವುಂಟು ಮಾಡುತ್ತದೆ’ ಎಂದು ಹೇಳಿದ್ದಾರೆ.
ಭಾನುವಾರ 2000ಕ್ಕೂ ಹೆಚ್ಚು ಅಭಿಮಾನಿಗಳು ಪ್ರದರ್ಶನ ಏರ್ಪಿಡಿಸಿ, ರಜನಿಕಾಂತ್ ಅವರು ತಮ್ಮ ನಿರ್ಧಾರವನ್ನು ವಾಪಸ್ ತೆಗೆದುಕೊಂಡು ರಾಜಕೀಯಕ್ಕೆ ಬರಬೇಕು ಎಂದು ಆಗ್ರಹಿಸಿದ್ದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.