
ಧಾರವಾಡ (ಅ.22): ಗಡಿಯಾರ, ಚಸ್ಮಾ, ಉಂಗುರದಲ್ಲಿ ಕ್ಯಾಮೆರಾ ಇಟ್ಟು, ಟ್ರ್ಯಾಪ್ ಮಾಡುವ ಪ್ರಯತ್ನ ನಡೆದಿದ್ದು, ಸಚಿವರು ಹಾಗೂ ಶಾಸಕರು ಎಚ್ಚರ ವಹಿಸಬೇಕೆಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ಟ್ರ್ಯಾಪ್ ಮಾಡಲು ಏಜೆನ್ಸಿ ಅವರು ನಿಮ್ಮ ಹಿಂದೆ ಬಿದ್ದಿದ್ದು, ಹುಷಾರಾಗಿ ಇರಲು ಸ್ವತಃ ಮುಖ್ಯಮಂತ್ರಿಗಳೇ ಹೇಳಿದ್ದಾರೆ ಎಂದು ತಿಳಿಸಿದರು. ನಿತ್ಯವೂ ನೂರಾರು ಜನರು ಭೇಟಿಗೆ ಬರುತ್ತಾರೆ. ಹೀಗಾಗಿ ಸ್ಟಿಂಗ್ ಮಾಡುವವರನ್ನು ಕಂಡು ಹಿಡಿಯುವುದು ಅಸಾಧ್ಯ. ಎಲ್ಲಿವರೆಗೂ ಮಾಧ್ಯಮಗಳು ಸ್ಟಿಂಗ್ ಆಪರೇಷನ್ ನಿಲ್ಲಿಸುವುದಿಲ್ಲವೋ ಅಲ್ಲಿ ವರೆಗೂ ಮುಂದುವರಿಯಲಿದೆ ಎಂದರು.
ಬೆಳಗಾವಿಯಲ್ಲಿ ರೈತರ ಧರಣಿ ವೇಳೆ ರಸ್ತೆ ಖಾಲಿ ಮಾಡಿಸಿದ ಪ್ರಶ್ನೆಗೆ ಉತ್ತರಿಸಿದ ಸಚಿವ ಜಾರಕಿಹೊಳಿ, ನಾವು ಯಾರ ಪರವಾಗಿಯೂ, ಯಾರ ವಿರೋಧವೂ ಇಲ್ಲ. ನ್ಯಾಯದ ಪರ ಇದ್ದು ಅ. ೨೬ಕ್ಕೆ ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಸಭೆ ಜರುಗಲಿದೆ ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಭಿನ್ನಮತವಿಲ್ಲ. ಎಲ್ಲರೂ ಒಗ್ಗೂಡಿಯೇ ರಾಜ್ಯದಲ್ಲಿ ನಡೆಯುವ ನಾಲ್ಕು ವಿಧಾನ ಪರಿಷತ್ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸುತ್ತಿದ್ದಾರೆ. ಈ ಗೆಲವು ಮುಂಬರುವ ವಿಧಾನಸಭೆ ಚುನಾವಣೆಗೂ ದಿಕ್ಸೂಚಿಯಾಗಲಿದೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.