
ಬೆಳಗಾವಿ (ಸೆ.11): ನಿಮಗೆ ಕೈ ಮುಗಿಯುತ್ತೇನೆ. ದಯವಿಟ್ಟು ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಟ್ಟು ಬೇರೆ ವಿಷಯ ಕೇಳಿ ಪ್ಲೀಸ್ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸುದ್ದಿಗಾರರಲ್ಲಿ ಮನವಿ ಮಾಡಿದರು. ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದಲ್ಲಿ ಸೋಮವಾರ ಮಾಧ್ಯಮದವರು ಮುಖ್ಯಮಂತ್ರಿ ಬದಲಾವಣೆ ವಿಚಾರ ಕುರಿತು ಪ್ರಸ್ತಾಪಿಸುತ್ತಿದ್ದಂತೆ ಪ್ಲೀಸ್ ಮುಖ್ಯಮಂತ್ರಿ ವಿಚಾರ ಬಿಟ್ಟು ಬೇರೆ ಅಭಿವೃದ್ಧಿ ವಿಚಾರವಾಗಿ ಕೇಳಿ. ನಾವಾದರೂ ಎಷ್ಟು ಬಾರಿ ಹೇಳುವುದು? ನಿಮಗೆ ಕೈ ಮುಗಿಯುತ್ತೇನೆ ಮುಖ್ಯಮಂತ್ರಿ ಬದಲಾವಣೆ ವಿಚಾರ ಬಿಟ್ಟು ಬೇರೆ ಪ್ರಶ್ನೆ ಕೇಳಿ ಎಂದರು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ದೀಪಾವಳಿ ಹಬ್ಬದೊಳಗೆ ಪತನವಾಗುತ್ತದೆ ಎಂದು ಬಿಜೆಪಿಯ ಸಿ.ಟಿ.ರವಿ ಹೇಳಿದಾಕ್ಷಣ, ಸರ್ಕಾರ ಬಿದ್ದು ಬಿಡುತ್ತದೆಯೇ ಎಂದು ಪ್ರಶ್ನಿಸಿದ ಅವರು, ಅವರು ಹೇಳಿರುವುದನ್ನು ತೆಗೆದುಕೊಂಡು ನಾನೇನು ಮಾಡಲಿ. ನಿತ್ಯ ನೂರು ಜನರು ನೂರು ತರಹದ ಹೇಳಿಕೆ ಕೊಡುತ್ತಾರೆ. ರವಿ ಹೇಳಿದನೋ ಇಲ್ಲವೆ ಮತ್ತ್ಯಾ ರೋ ಹೇಳಿದರೊ ಅದನ್ನು ತೆಗೆದುಕೊಂಡು ನಾನೇನ್ ಮಾಡಲಿ ಎಂದರು. ಬರೀ ಮುಖ್ಯಮಂತ್ರಿ, ಮುಖ್ಯಮಂತ್ರಿ ಎನ್ನುತ್ತಿದ್ದರೆ ಇವರಿಗೇನು ಕೆಲಸ ಇಲ್ಲವೇ ಎಂದು ಜನ ನಮಗೆ ಉಗುಳುತ್ತಾರೆ.
2028ಕ್ಕೆ ಸಬ್ ಅರ್ಬನ್ ರೈಲು ಕೆಲಸ ಪೂರ್ಣ: ಕೇಂದ್ರ ಸಚಿವ ಸೋಮಣ್ಣ
ಮುಖ್ಯಮಂತ್ರಿ ಅಭಿಯಾನ ಅಂತ ನಾವ್ಯಾರೂ ಶುರು ಮಾಡಿಲ್ಲ. ಮುಖ್ಯಮಂತ್ರಿ ಮಾಡುವುದು ಪಕ್ಷ, ಶಾಸಕರು ಎಂದು ಸ್ಪಷ್ಟಪಡಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭೇಟಿ ಕುರಿತು ಪ್ರತಿಕ್ರಿಯಿಸಿ, ಅದು ಬೇರೆ ವಿಚಾರಕ್ಕೆ ರಾಹುಲ್ ಗಾಂಧಿ ಭೇಟಿಗೆ ಹೋಗಿದ್ದೆ. ಮುಖ್ಯಮಂತ್ರಿ ಆಗಿ ಸಿದ್ದರಾಮಯ್ಯನವರೇ ಮುಂದುವರೆಯುತ್ತಾರೆ ಎಂದು ಪುನರುಚ್ಚರಿಸಿದರು. ಅಲ್ಲಿ ಹೇಳಿದ್ದನ್ನು ಇಲ್ಲಿ ಕೇಳುತ್ತೀರಿ. ಇಲ್ಲಿ ಹೇಳಿದ್ದನ್ನು ಅಲ್ಲಿ ಕೇಳುತ್ತೀರಿ. ಅದು ನಮಗೆ ಸಂಬಂಧ ಪಟ್ಟಿದ್ದಲ್ಲ. ಒಬ್ಬರು ಹೇಳಿದರೆ ಸರ್ಕಾರ ಬೀಳುತ್ತದೆಯೇ ಎಂದು ಮರುಪ್ರಶ್ನಿಸಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.