
ಉಡುಪಿ (ಏ.29): ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆಯವರು, ಇದು ತನ್ನ ಕೊನೆಯ ಚುನಾವಣೆ ಎಂದು ಹೇಳುತ್ತಿದ್ದಾರೆ. ಕೊನೆಯ ಚುನಾವಣೆ ಎಂದು ಹೇಳುವ ಗಿರಾಕಿಗಳನ್ನು ಎಂದಿಗೂ ನಂಬಬೇಡಿ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಮತದಾರರಿಗೆ ಕರೆ ನೀಡಿದರು. ಅವರು ಕಟಪಾಡಿಯ ಗ್ರೀನ್ ವ್ಯಾಲಿ ಮೈದಾನ ನಡೆಯುವ ಕೇಂದ್ರ ಗೃಹಸಚಿವ ಅಮಿತ್ ಶಾ ಅವರ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು ಸೊರಕೆಯವರು ಸತ್ಯ ಅಥವಾ ಸುಳ್ಳು ಹೇಳುತ್ತಿದ್ದರೂ, ಮತದಾರರಿಗೆ ಅಪಾಯ ಕಟ್ಟಿಟ್ಟ ಬುತ್ತಿ.
ಸತ್ಯ ಎಂದಾದರೇ ಅದೃಶವಶಾತ್ ಅವರು ಗೆದ್ದರೇ, ಜನರ ಸೇವೆ ಮಾಡದೇ ಅವರ ಹೆಂಡತಿ ಮಕ್ಕಳ ಹೊಟ್ಟೆಯನ್ನು ತುಂಬಿಸುತ್ತಾ ಕಾಲ ಕಳೆಯುತ್ತಾರೆ. ಸುಳ್ಳು ಎಂದಾದಲ್ಲಿ ಜನರಿಗೆ ಮೋಸ ಮಾಡಿದಂತಾಗುತ್ತದೆ ಎಂದರು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2014 ರಲ್ಲಿ ವಿಧಾನಸಭೆಯಲ್ಲಿ ಇದು ನನ್ನ ಕೊನೆಯ ಚುನಾವಣೆ ಎಂದು ಹೇಳಿದ್ದರು. ಆ ನಂತರ 2018 ರಲ್ಲಿ ಎರಡು ಕ್ಷೇತ್ರದಲ್ಲಿ ಸ್ಪರ್ಧಿಸಿದ್ದರು. ಈಗ ಮತ್ತೇ ಎರಡು ಕ್ಷೇತ್ರಕ್ಕೆ ಟಿಕೆಟ್ ಕೇಳಿದ ಅವರಿಗೆ ಒಂದು ಕ್ಷೇತ್ರದಲ್ಲಿ ಮಾತ್ರ ಪಕ್ಷ ಟಿಕೆಟ್ ನೀಡಿದೆ.
ಇಂದಿನವರೆಗೆ 1.5 ಲಕ್ಷ ಕೋಟಿ ಹಣವನ್ನು ಬಿಜೆಪಿ ಸರ್ಕಾರ ಜನರಿಂದ ಲೂಟಿ ಮಾಡಿದೆ: ಪ್ರಿಯಾಂಕಾ ಗಾಂಧಿ
ಮಾಜಿ ಪ್ರಧಾನಿ ದೇವೆಗೌಡರು ಕಳೆದ 30 ವರ್ಷಗಳಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಹೇಳುತ್ತಾ, ಇಂದಿಗೂ ಸ್ಪರ್ಧಿಸುವುದನ್ನು ಕೊನೆಗೊಳಿಸಿಲ್ಲ ಎಂದು ವ್ಯಂಗವಾಗಿ ಹೇಳಿದರು. ಹಿಂದುತ್ವಕ್ಕೆ ವಿರೋಧಿಯಾಗಿರುವ ಕಾಂಗ್ರೆಸ್ ಪಕ್ಷ. ಅದರ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು, ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದರೇ ಸನಾತನ ಧರ್ಮವನ್ನು ಅನುಷ್ಠಾನಕ್ಕೆ ತರುತ್ತಾರೆ. ಇದು ಅನುಷ್ಠಾನಕ್ಕೆ ಬರಲೂ ಬಿಡಬಾರದು ಎಂದು ಕರೆ ನೀಡಿದ್ದರು. ಜಗತ್ತು ಗೌರವಿಸುವ ಸನಾತನ ಧರ್ಮದ ವಿರೋಧಿಯಾಗಿರುವ ಇವರುಗಳು, ಕೇವಲ ಹಿಂದುತ್ವದ ವಿರೋಧಿಗಳಲ್ಲ, ಬದಲಾಗಿ ಹಿಂದುಗಳ ವಿರೋಧಿಗಳು ಎಂದವರು ಹೇಳಿದರು.
ಕಾಂಗ್ರೆಸ್ ಕಿತ್ತೊಗೆದು ಈ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ
2024ರಲ್ಲಿ ನರೇಂದ್ರ ಮೋದಿಯವರ ಸರಕಾರವು ಅಧಿಕಾರಕ್ಕೆ ಬರಬೇಕೆಂದರೇ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸರಕಾರವು ಅಧಿಕಾರಕ್ಕೆ ಬರಬೇಕು. ಮುಂದಿನ ವರ್ಷ ನಡೆಯುವ ಲೋಕಸಭಾ ಚುನಾವಣೆಗೆ ಇದು ಮುನ್ನುಡಿಯಾಗಲಿದೆ. ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರದ ಭಾಜಪ ಅಭ್ಯರ್ಥಿಗಳನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸಿ ಎಂದವರು ಹೇಳಿದರು. ಇನ್ನು ಕರ್ನಾಟಕದಲ್ಲಿ ಒಂದೇ ಹಂತದಲ್ಲಿ ಮೇ 10ರಂದು ಮತದಾನ ನಡೆಯಲಿದ್ದು, ಮೇ 13ಕ್ಕೆ ಮತ ಎಣಿಕೆ ನಡೆಯಲಿದೆ. ಏಪ್ರಿಲ್ 13ಕ್ಕೆ ಚುನಾವಣೆ ಅಧಿಸೂಚನೆ ಹೊರಡಿಸಲಾಗಿತ್ತು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.