ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಸಿಎಂ ಸಿದ್ದರಾಮಯ್ಯ

Published : May 18, 2025, 01:03 AM ISTUpdated : May 18, 2025, 01:04 AM IST
ಇನ್ನು ಕೋಮು ಗಲಭೆಗೆ ಆಸ್ಪದ ನೀಡಬೇಡಿ: ಸಿಎಂ ಸಿದ್ದರಾಮಯ್ಯ

ಸಾರಾಂಶ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮು ಗಲಭೆ ನಡೆಯಬಾರದು. ಅದಕ್ಕಾಗಿ ಎಲ್ಲ ರಾಜಕಾರಣಿಗಳು ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.   

ಮಂಗಳೂರು (ಮೇ.18): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಕೋಮು ಗಲಭೆ ನಡೆಯಬಾರದು. ಅದಕ್ಕಾಗಿ ಎಲ್ಲ ರಾಜಕಾರಣಿಗಳು ಪ್ರಯತ್ನ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ. ಮಂಗಳೂರಿನ ಪಡೀಲ್‌ನಲ್ಲಿ 75 ಕೋಟಿ ರು. ವೆಚ್ಚದಲ್ಲಿ ನಿರ್ಮಾಣವಾಗಿರುವ ನೂತನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣ ಪ್ರಜಾಸೌಧವನ್ನು ಉದ್ಘಾಟಿಸಿ, ಪೋಡಿ ಮುಕ್ತ ಅಭಿಯಾನದಲ್ಲಿ 8 ಸಾವಿರಕ್ಕೂ ಅಧಿಕ ಜನರಿಗೆ ಆರ್‌ಟಿಸಿ ವಿತರಣೆ ಮಾಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ಅಹಿತಕರ ಘಟನೆಗಳ ಹಿನ್ನೆಲೆಯಲ್ಲಿ ಸೌಹಾರ್ದತೆಯ ಪಾಠ ಮಾಡಿದರು.

ದಕ್ಷಿಣ ಕನ್ನಡ ಜಿಲ್ಲೆ ಶಿಕ್ಷಣದಲ್ಲಿ ನಂ.1 ಸ್ಥಾನದಲ್ಲಿದೆ. ಆದರೆ ಇಲ್ಲಿ ಶಾಂತಿ ಸ್ಥಾಪನೆಯ ಅಗತ್ಯವಿದೆ. ಭ್ರಾತೃತ್ವದಿಂದ ಇರುವ ಸಂದೇಶವನ್ನು ಸಂವಿಧಾನವೇ ನೀಡಿದೆ. ಇದರ ಜತೆಗೆ ಸಹಿಷ್ಣುತೆ, ಸಹಬಾಳ್ವೆಯೂ ಇರಬೇಕು. ಎಲ್ಲರೂ ಒಂದೇ ತಾಯಿ ಮಕ್ಕಳಂತೆ ದ.ಕ. ಜಿಲ್ಲೆ ಶಾಂತಿಯ ತೋಟವಾಗಲಿ. ಸಹಬಾಳ್ವೆಗೆ ಎಲ್ಲ ರಾಜಕಾರಣಿಗಳೂ ಶ್ರಮಿಸಲಿ ಎಂದು ಸಿದ್ದರಾಮಯ್ಯ ಹೇಳಿದರು. ಮನುಷ್ಯ ಮನುಷ್ಯನನ್ನೇ ದ್ವೇಷಿಸುವ ವಾತಾವರಣ ಎಂದೂ ನಿರ್ಮಾಣವಾಗಬಾರದು. ಪರಸ್ಪರ ಪ್ರೀತಿಸುವ, ಸೌಹಾರ್ದತೆಯ ವಾತಾವರಣವನ್ನು ನಿರ್ಮಾಣ ಮಾಡುವುದೇ ರಾಜಕಾರಣಿಗಳ ಕೆಲಸ. ಜತೆಗೆ ಸಮಾಜದಲ್ಲಿರುವ ಅಸಮಾನತೆ ಹೋಗಲಾಡಿಸುವ ಕೆಲಸವನ್ನೂ ಮಾಡಬೇಕು ಎಂದು ಕಿವಿಮಾತು ಹೇಳಿದರು. ಸಮಾನತೆಯ ಆಶಯ ಹೊಂದಿರುವ ಸಂವಿಧಾನದ ಶ್ರೇಷ್ಠತೆ ಗೊತ್ತಾಗಬೇಕಾದರೆ ಸಂವಿಧಾನದಲ್ಲಿ ನಂಬಿಕೆ, ಬದ್ಧತೆ ಇರುವವರಿಗೆ ಮಾತ್ರ ಸಾಧ್ಯ ಎಂದೂ ಹೇಳಿದರು.

ತುಳುವಿಗೆ ಅಧಿಕೃತ ಸ್ಥಾನಮಾನ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ದೊರಕಿಸುವ ಬಗ್ಗೆ ಪ್ರಸ್ತಾಪಿಸಿದ ಸಿಎಂ, ತುಳು ಭಾಷೆಗೆ ಗೌರವ ನೀಡುವ ಕೆಲಸ ಮಾಡುತ್ತೇವೆ. ಆದರೆ ಕನ್ನಡಕ್ಕೆ ಎಂದೂ ಮೊದಲ ಆದ್ಯತೆ ಇರಬೇಕು ಎಂದರು. ಪ್ರಜಾಸೌಧಕ್ಕೆ ಶಿಲಾನ್ಯಾಸ ಮಾಡಿದ್ದೂ ನಾನೇ, ಉದ್ಘಾಟನೆಗೂ ಬಂದಿರೋದು ನನ್ನ ಸೌಭಾಗ್ಯ. ಪ್ರಜಾಸೌಧ ಜನರಿಗಾಗಿ ಮಾಡಿರೋದು. ಜನರು ತಮ್ಮ ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎನ್ನುವ ನಿರೀಕ್ಷೆಗಳನ್ನು ಇಟ್ಟುಕೊಂಡು ಜಿಲ್ಲಾಧಿಕಾರಿ ಕಚೇರಿಗೆ ಬರುತ್ತಾರೆ. ಅವರ ನಂಬಿಕೆಯನ್ನು ಯಾವ ಅಧಿಕಾರಿಯೂ ಹುಸಿಗೊಳಿಸುವ ಕೆಲಸ ಮಾಡಕೂಡದು ಎಂದು ತಾಕೀತು ಮಾಡಿದರು.

ಟ್ರಂಪ್‌ ಹೆಸರು ಹೇಳುವುದಕ್ಕೆ ಪ್ರಧಾನಿ ಮೋದಿಗೆ ಭಯ: ಸಚಿವ ದಿನೇಶ್‌ ಗುಂಡೂರಾವ್‌

ಅಭಿವೃದ್ಧಿಗೆ ಹಣ ಇಲ್ಲ ಎನ್ನೋದು ಸುಳ್ಳು: ಗ್ಯಾರಂಟಿ ಯೋಜನೆಗಳ ಬಗ್ಗೆ ಟೀಕೆ ಮಾಡುವವರು ಅಭಿವೃದ್ಧಿ ಯೋಜನೆಗಳಿಗೆ ಹಣ ಇಲ್ಲ ಎನ್ನುತ್ತಾರೆ. ಕಳೆದ ವರ್ಷ ರಾಜ್ಯದ ಕ್ಯಾಪಿಟಲ್‌ ಎಕ್ಸ್‌ಪೆಂಡಿಚರ್‌ 51 ಸಾವಿರ ಕೋಟಿ ರು. ಇದ್ದದ್ದು ಈ ವರ್ಷ 82 ಸಾವಿರ ಕೋಟಿ ರು.ಗೆ ಏರಿದೆ. ಹಾಗಾಗಿ ಅಭಿವೃದ್ಧಿಗೆ ಹಣ ಇಲ್ಲ ಎನ್ನುವ ಮಾತಿನಲ್ಲಿ ಯಾವ ಹುರುಳಿಲ್ಲ. ಅದೇ ರೀತಿ ಕಳೆದ ವರ್ಷಕ್ಕಿಂತ ಈ ವರ್ಷ 38 ಸಾವಿರ ಕೋಟಿ ರು.ಗಳಷ್ಟು ಬಜೆಟ್‌ ಗಾತ್ರ ಹೆಚ್ಚಳವಾಗಿದೆ. ಇಡೀ ದೇಶದಲ್ಲಿ ಕರ್ನಾಟಕ ಮಾದರಿ ಸರ್ಕಾರವಾಗಿ ರೂಪುಗೊಳ್ಳುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

Suvarna Special: ಸಂನ್ಯಾಸಿ ಸಿಂಹಾಸನ.. ಸಂಘ ಸಪ್ತಕೋಟಿ..! ಯೋಗಿ ಪಟ್ಟಕ್ಕೆ ಏಳು ಸುತ್ತಿನ ಕೋಟೆ ಕಟ್ಟುತ್ತಿದೆ RSS..!
ಆನೆ ಕಾರಿಡಾರ್ ನಿರ್ಮಾಣಕ್ಕೆ ಹೆಚ್ಚು ಒತ್ತು ನೀಡಬೇಕು: ಮಾಜಿ ಸಂಸದ ಪ್ರತಾಪ್ ಸಿಂಹ