
ಬೆಂಗಳೂರು : ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಹೇಳಿಲ್ಲ. ಅವರು ಮುಖ್ಯಮಂತ್ರಿಯಾಗಿ ಕೆಲಸ ಮಾಡಲು ಪಕ್ಷ ಜವಾಬ್ದಾರಿ ನೀಡಿದೆ. ಅದನ್ನು ನಾವ್ಯಾರು ಅದನ್ನು ಪ್ರಶ್ನೆ ಮಾಡಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಅಲ್ಲದೆ ಯಾರು ದೆಹಲಿಗೆ ಹೋಗಿದ್ದಾರೆ ಎಂದು ಗೊತ್ತಿಲ್ಲ ಎಂದಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ತಮ್ಮ ಅಧಿಕಾರದ ಭವಿಷ್ಯ ಉತ್ತಮವಾಗಿದೆ ಎಂದು ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ಉತ್ತರಿಸಿದ ಡಿ.ಕೆ. ಶಿವಕುಮಾರ್, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಇರುವುದಿಲ್ಲ ಎಂದು ನಾವ್ಯಾರು ಪ್ರಶ್ನಿಸಿಲ್ಲ. ಅವರು ಮುಖ್ಯಮಂತ್ರಿಯಾಗಿ ಪಕ್ಷ ಜವಾಬ್ದಾರಿ ನೀಡಿದೆ. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದರು.
ಶಾಸಕರ ದೆಹಲಿ ಪ್ರವಾಸದ ಕುರಿತ ಪ್ರಶ್ನೆಗೆ ಉತ್ತರಿಸಿ, ನನಗೆ ಆರೋಗ್ಯದಲ್ಲಿ ಸರಿಯಿಲ್ಲ. ಹೀಗಾಗಿ ನಾನು ವಿಶ್ರಾಂತಿಯಲ್ಲಿದ್ದೇನೆ. ಯಾರು ದೆಹಲಿಗೆ ಹೋಗಿದ್ದಾರೆ, ಏತಕ್ಕಾಗಿ ಹೋಗಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ನನಗೆ ಯಾವುದೇ ಮಾಹಿತಿಯೂ ಇಲ್ಲ ಎಂದು ಸ್ಪಷ್ಟಪಡಿಸಿದರು.
ವಿಧಾನಪರಿಷತ್ ಸದಸ್ಯರೊಂದಿಗಿನ ಸಭೆಯ ಕುರಿತು ಪ್ರತಿಕ್ರಿಯಿಸಿ, ವಿಧಾನಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಕುರಿತು ಚರ್ಚಿಸಲು ಸದಸ್ಯರು ಬಂದಿದ್ದರು. ನಮ್ಮ ಪಕ್ಷದವರನ್ನು ಸಭಾಪತಿ ಮತ್ತು ಉಪಾಸಭಾಪತಿಯನ್ನಾಗಿ ಮಾಡುವಂತೆ ಕೋರಿದ್ದಾರೆ. ಅದರ ಬಗ್ಗೆ ಚರ್ಚಿಸಿ ಮುಂದೆ ಏನು ಮಾಡಬೇಕು ಎಂಬುದನ್ನು ನಿರ್ಧರಿಸುತ್ತೇವೆ ಎಂದು ಹೇಳಿದರು.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.